
ನವದೆಹಲಿ, ಆಗಸ್ಟ್ 20: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಲೋಕಸಭೆಯಲ್ಲಿ ಇಂದು 3 ಮಸೂದೆಗಳನ್ನು ಮಂಡಿಸಿದ್ದಾರೆ. ಗಂಭೀರ ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳನ್ನು ಸತತ 30 ದಿನಗಳವರೆಗೆ ಬಂಧನದಲ್ಲಿದ್ದರೆ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕುವ ಪ್ರಸ್ತಾಪವನ್ನು ಹೊಂದಿರುವ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು. ಅವುಗಳೆಂದರೆ, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ-2025, ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ- 2025. ಕ್ರಿಮಿನಲ್ ಕೇಸ್ನಲ್ಲಿ ಪ್ರಧಾನಿಗಳು, ಕೇಂದ್ರ ಸಚಿವರು, ಸಿಎಂಗಳು, ರಾಜ್ಯಗಳ ಸಚಿವರು ಬಂಧನಕ್ಕೆ ಒಳಗಾದರೆ ಅವರನ್ನು ಆ ಹುದ್ದೆಯಿಂದ ವಜಾ ಮಾಡುವ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮಂಡಿಸಿದ್ದಾರೆ.
ಗಂಭೀರ ಕ್ರಿಮಿನಲ್ ಆರೋಪದ ಮೇಲೆ ಬಂಧನಕ್ಕೆ ಒಳಗಾದರೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಹುದ್ದೆಯಿಂದ ವಜಾಗೊಳಿಸುವ ಮಸೂದೆ ಮಂಡನೆಯಾಗಿದೆ. ಆದರೆ, ಪ್ರಧಾನಿ, ಸಿಎಂಗಳ ವಿರುದ್ಧದ ಆರೋಪಗಳಿಗೆ ವಜಾ ನಿಯಮ ಅನ್ವಯವಾಗುವುದಿಲ್ಲ. ಈಗಿನ ಕಾನೂನಿನಲ್ಲಿ ಪಿಎಂ, ಕೇಂದ್ರ ಸಚಿವರ ವಜಾಕ್ಕೆ ಅವಕಾಶವಿಲ್ಲ. ಹೊಸ ಮಸೂದೆಯಿಂದ ಪಿಎಂ, ಸಿಎಂ, ಸಚಿವರ ವಜಾಕ್ಕೆ ಅವಕಾಶವಿರಲಿದೆ. ಅವರು 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾದರೆ ಹುದ್ದೆಯಿಂದ ವಜಾಗೊಳಿಸಲಾಗುವುದು. ಯಾವುದೇ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯಗಳ ಸಚಿವರನ್ನು ವಶಕ್ಕೆ ಪಡೆದರೆ ಅಥವಾ ಬಂಧನಕ್ಕೆ ಒಳಗಾದರೆ ಅವರನ್ನು 30 ದಿನದೊಳಗೆ ಹುದ್ದೆಯಿಂದ ವಜಾಗೊಳಿಸಲು ಅವಕಾಶವಿದೆ. ಅಥವಾ ಅವರು 30 ದಿನದೊಳಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಲಿದೆ.
ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಜಾರ್ಖಂಡ್ ನ್ಯಾಯಾಲಯದಿಂದ ಜಾಮೀನು
ಸದ್ಯದ ಕೇಂದ್ರಾಡಳಿತ ಪ್ರದೇಶಗಳ ಕಾಯ್ದೆ ಪ್ರಕಾರ, ಕೇಂದ್ರಾಡಳಿತ ಪ್ರದೇಶದ ಸಿಎಂ, ಸಚಿವರ ವಜಾಕ್ಕೆ ಅವಕಾಶವಿಲ್ಲ. ಅದೇ ರೀತಿ ಪ್ರಧಾನಿ, ಕೇಂದ್ರ ಸಚಿವರ ವಜಾಕ್ಕೂ ಅವಕಾಶವಿಲ್ಲ. ಈಗ ಹೊಸ ತಿದ್ದುಪಡಿ ಕಾಯ್ದೆ ಮೂಲಕ ಅವರ ವಜಾಕ್ಕೆ ಅವಕಾಶ ಸಿಗಲಿದೆ. ಹಾಲಿ ನಿಯಮದ ಪ್ರಕಾರ ಯಾವುದೇ ಜನಪ್ರತಿನಿಧಿಗಳು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಹುದ್ದೆ ಕಳೆದುಕೊಳ್ಳುತ್ತಾರೆ. 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಪಟ್ಟರೆ ಸ್ಥಾನಮಾನ ಕಳೆದುಕೊಳ್ಳುತ್ತಾರೆ. ಶಿಕ್ಷೆ ಮುಗಿದ ಬಳಿಕ ಮತ್ತೆ 5 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
Laid the Constitution (One Hundred and Thirtieth Amendment) Bill, 2025 in the Lok Sabha. pic.twitter.com/wsohG2UP6x
— Amit Shah (@AmitShah) August 20, 2025
ವಿಪಕ್ಷಗಳ ವಿರೋಧ:
ಅಮಿತ್ ಶಾ ಮಂಡಿಸಿದ ಮೂರು ಮಸೂದೆಗಳು ಸದನದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಆದರೆ, ಈ ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.
ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಗಣಿ ಮತ್ತು ಖನಿಜ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ
ಈ ಮಸೂದೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮೂರು ಮಸೂದೆಗಳನ್ನು ವಿರೋಧಿಸಿದರು. “ಈ ಸರ್ಕಾರ ಪೊಲೀಸ್ ರಾಜ್ಯವನ್ನು ರಚಿಸಲು ಹಠ ಹಿಡಿದಿದೆ. ಇದು ಚುನಾಯಿತ ಸರ್ಕಾರಕ್ಕೆ ಮರಣದಂಡನೆಯಾಗಲಿದೆ. ಈ ದೇಶವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸಲು ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲಾಗುತ್ತಿದೆ” ಎಂದು ಅವರು ಹೇಳಿದರು. ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಕೂಡ ಮೂರು ಮಸೂದೆಗಳನ್ನು ಟೀಕಿಸಿದರು. ಅವುಗಳನ್ನು ‘ವಿನಾಶಕಾರಿ’ ಎಂದು ಕರೆದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:20 pm, Wed, 20 August 25