ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್​: ಬೆದರಿಕೆ ಬಂದರೆ ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸಿ

ನೂಪುರ್ ಶರ್ಮಾ ಅವರಿಗೆ ಬೆಂಬಲಿಸಿ ಹಾಕಿರುವ ಪೋಸ್ಟ್​ಗೆ ಸಂಬಂಧಿಸಿದಂತೆ ಯಾರೇ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಿದರೂ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಈ ವಿಷಯವನ್ನು ಗುಪ್ತವಾಗಿರಿಸಲಾಗುವುದು ಎಂದು ಅಮರಾವತಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್​: ಬೆದರಿಕೆ ಬಂದರೆ ಹತ್ತಿರದ ಪೊಲೀಸ್ ಠಾಣೆ ಸಂಪರ್ಕಿಸಿ
Amaravati PoliceImage Credit source: Timesnow
Follow us
TV9 Web
| Updated By: ನಯನಾ ರಾಜೀವ್

Updated on:Jul 06, 2022 | 1:03 PM

ಮುಂಬೈ: ನೂಪುರ್ ಶರ್ಮಾ ಅವರಿಗೆ ಬೆಂಬಲಿಸಿ ಹಾಕಿರುವ ಪೋಸ್ಟ್​ಗೆ ಸಂಬಂಧಿಸಿದಂತೆ ಯಾರೇ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಿದರೂ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಈ ವಿಷಯವನ್ನು ಗುಪ್ತವಾಗಿರಿಸಲಾಗುವುದು ಎಂದು ಅಮರಾವತಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಮರಾವತಿ ಪೊಲೀಸ್ ಆಯುಕ್ತರಾದ ಆರತಿ ಸಿಂಗ್ ಈ ಕುರಿತು ಮಾತನಾಡಿದ್ದು, ಬೆದರಿಕೆ ಕುರಿತು ಮಾಹಿತಿ ನೀಡಿದವರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದಿದ್ದಾರೆ.

ಹಾಗೆಯೇ ನೂಪುರ್ ಶರ್ಮಾ ಅವರನ್ನು ಬೆಂಬಿಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಪೋಸ್ಟ್​ ವಿರುದ್ಧವಾಗಿ ಬೆದರಿಕೆ ಹಾಕಿದ್ದ ನಾಲ್ವರನ್ನು ಬಂಧಿಸಲಾಗಿದೆ.  ಉಮೇಶ್ ಕೋಲ್ಹೆ ಅವರ ಹತ್ಯೆಗೆ ಸಂಬಂಧಿಸಿದಂತೆ ಜುಲೈ 5ರಂದು ಎನ್​ಐಎ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಶೇಖ್ ಇರ್ಫಾನ್ ಶೇಖ್ ರಹೀಮ್ ಅವರು ಉಮೇಶ್ ಕೋಲ್ಹೆ ಹತ್ಯೆ ಹಿಂದಿರುವ ಮಾಸ್ಟರ್​ಮೈಂಡ್ ಎಂದು ಹೇಳಲಾಗಿದೆ.

ಉಮೇಶ್ ಕೊಲ್ಹೆ ಹತ್ಯೆಗೆ ಸಂಬಂಧಿಸಿದಂತೆ ಮುದ್ದಸರ್ ಅಹಮದ್​, ಶಾರೂಖ್ ಪಠಾಣ್, ಅಬ್ದುಲ್ ತೌಫಿಕ್, ಶೋಯಿಬ್ ಖಾನ್, ಆತಿಬ್ ರಶೀದ್, ಯೂಸುಫ್ ಖಾನ್ ಹಾಗೂ ಶೇಖ್ ಇರ್ಫಾನ್ ಶೇಖ್ ರಹೀಮ್ ಅವರನ್ನು ಬಂಧಿಸಲಾಗಿದೆ.

ಜೂನ್ 21 ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಕೆಮಿಸ್ಟ್ ಉಮೇಶ್ ಕೋಲ್ಹೆ ಅವರನ್ನು ರಾತ್ರಿ 10.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು ಚಾಕು ಇರಿದು ಹತ್ಯೆ ಮಾಡಿದ್ದರು.

ಪ್ರವಾದಿ ಮೊಹಮ್ಮದ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಭೀಕರ ಹತ್ಯೆ ಪ್ರಕರಣದ ಉದ್ವಿಗ್ನತೆಯ ನಡುವೆಯೇ ವಾರದ ಹಿಂದೆ ಮಹಾರಾಷ್ಟ್ರದಲ್ಲಿ ಕೆಮಿಸ್ಟ್ ಒಬ್ಬರ ಕತ್ತು ಸೀಳಿ ಹತ್ಯೆ ಮಾಡಿದ ಪ್ರಕರಣದ ಬಗ್ಗೆ ಎನ್ಐಎ (NIA) ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ.

ಉದಯ್​ಪುರದಲ್ಲಿ ಟೈಲರ್ ಹತ್ಯೆಗೂ ಮುನ್ನ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿ ಪೋಸ್ಟ್​ ಹಾಕಿದ್ದಕ್ಕೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಂಗಡಿ ಮಾಲೀಕರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ. ಆದರೆ ಇದಕ್ಕೆ ಕಾರಣವೇನು ಎಂಬುದನ್ನು ವಿವರಿಸಿಲ್ಲ. ಅವರು ಈ ಪ್ರಕರಣದ ಬಗ್ಗೆ ಮೌನವಾಗಿದ್ದಾರೆ ಎಂದು ಭಾರ್ತಿಯಾ ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮಹಾರಾಷ್ಟ್ರ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡಗಳು ಪ್ರಕರಣದ ತನಿಖೆಗಾಗಿ ಅಮರಾವತಿಗೆ ತೆರಳಲಿವೆ.

ವೆಟರ್ನರಿ ಕೆಮಿಸ್ಟ್ ಆಗಿದ್ದ ಉಮೇಶ್ ಕೋಲ್ಹೆ ಜೂನ್ 21ರಂದು ತಮ್ಮ ಅಂಗಡಿಯಿಂದ ಮರಳುತ್ತಿದ್ದಾಗ ದುಷ್ಕರ್ಮಿಗಳು ಕತ್ತು ಸೀಳಿ ಕೊಲೆ ಮಾಡಿದ್ದರು. ಮೇಲ್ನೋಟಕ್ಕೆ ಇದು ದರೋಡೆ ಅಥವಾ ವೈಯಕ್ತಿಕ ದ್ವೇಷ ಎಂದು ಕಂಡರೂ ಈ ಬಗ್ಗೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ.

Published On - 11:55 am, Wed, 6 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ