AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರಾವತಿಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ಬೋಂಡೆ ಬಂಧನ

ತ್ರಿಪುರಾದಲ್ಲಿ ಅಲ್ಪಸಂಖ್ಯಾತರ ವಿರೋಧಿ ಹಿಂಸಾಚಾರವನ್ನು ಪ್ರತಿಭಟಿಸಿ ಅಮರಾವತಿಯಲ್ಲಿ ಒಂದು ದಿನ ಮೊದಲು ಮುಸ್ಲಿಂ ಗುಂಪುಗಳು ನಡೆಸಿದ ಮೆರವಣಿಗೆಗೆ ಖಂಡನೆಯಾಗಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ಪ್ರತಿಭಟನೆಯ ವೇಳೆ ಪೋಟೆ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದ್ದು...

ಅಮರಾವತಿಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ಬೋಂಡೆ ಬಂಧನ
ಮಹಾರಾಷ್ಟ್ರದಲ್ಲಿ ಹಿಂಸಾಚಾರ
TV9 Web
| Edited By: |

Updated on: Nov 15, 2021 | 10:39 PM

Share

ಮುಂಬೈ: ವಾರಾಂತ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮರಾವತಿ (Amravati) ಪೊಲೀಸರು ಸೋಮವಾರ ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಡಾ.ಅನಿಲ್ ಬೋಂಡೆ ( Dr Anil Bonde) ಮತ್ತು ಇತರ ಕೆಲವು ಪಕ್ಷದ ಸದಸ್ಯರನ್ನು ಬಂಧಿಸಿದ್ದಾರೆ. ಅಮರಾವತಿಯಿಂದ ನಾಪತ್ತೆಯಾಗಿರುವ ಮತ್ತೊಬ್ಬ ಬಿಜೆಪಿ ಮುಖಂಡ ಪ್ರವೀಣ್ ಪೋಟೆ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಮರಾವತಿಯ ಕೊತ್ವಾಲಿ ಪ್ರದೇಶದಲ್ಲಿ ಶನಿವಾರ ಬಿಜೆಪಿ ಬಂದ್‌ಗೆ ಕರೆ ನೀಡಿದಾಗ ನಡೆದ ಗಲಭೆಗೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಸುಮಾರು 6,000 ಪಕ್ಷದ ಸದಸ್ಯರು ಮತ್ತು ಬಜರಂಗದಳದಂತಹ ಮಿತ್ರ ಸಂಘಟನೆಗಳು ಶನಿವಾರದಂದು ಬಂದ್‌ ಅನ್ನು ಕಾರ್ಯಗತಗೊಳಿಸಲು ಬೀದಿಗಿಳಿದಿದ್ದವು. ಇದು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲು ಕಾರಣವಾಯಿತು. ತ್ರಿಪುರಾದಲ್ಲಿ ಅಲ್ಪಸಂಖ್ಯಾತರ ವಿರೋಧಿ ಹಿಂಸಾಚಾರವನ್ನು ಪ್ರತಿಭಟಿಸಿ ಅಮರಾವತಿಯಲ್ಲಿ ಒಂದು ದಿನ ಮೊದಲು ಮುಸ್ಲಿಂ ಗುಂಪುಗಳು ನಡೆಸಿದ ಮೆರವಣಿಗೆಗೆ ಖಂಡನೆಯಾಗಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ಪ್ರತಿಭಟನೆಯ ವೇಳೆ ಪೋಟೆ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ಘಟನೆಯಲ್ಲಿ ಕಿಟಕಿಯೊಂದು ಒಡೆದು ಓರ್ವ ವ್ಯಕ್ತಿಗೆ ಗಾಯಗಳಾಗಿವೆ.  ಶನಿವಾರ ಬಂದ್‌ಗೆ ಕರೆ ನೀಡಿದ ಪ್ರಮುಖರಲ್ಲಿ ಬೊಂಡೆ ಮತ್ತು ಪೋಟೆ ಪ್ರಮುಖರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ಮತ್ತು ಶನಿವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮರಾವತಿಯ ನಾಲ್ಕು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 26 ಎಫ್‌ಐಆರ್‌ಗಳಲ್ಲಿ ಇದುವರೆಗೆ ಒಟ್ಟು 72 ಮಂದಿಯನ್ನು ಬಂಧಿಸಲಾಗಿದೆ. ಹಿಂಸಾಚಾರದ ನಂತರ ಕರ್ಫ್ಯೂ ವಿಧಿಸಲಾಯಿತು ಮತ್ತು ಪ್ರದೇಶದಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಯಿತು. ಮಹಾರಾಷ್ಟ್ರ ಪೊಲೀಸ್‌ನ ಹಿರಿಯ ಅಧಿಕಾರಿಗಳು ಪ್ರಸ್ತುತ ಅಮರಾವತಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ:  Bengaluru Rain: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?