AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೃತಸರ: ಗರ್ಭಿಣಿ ಪತ್ನಿಯ ಮಂಚಕ್ಕೆ ಕಟ್ಟಿ, ಬೆಂಕಿ ಹಚ್ಚಿ ಹತ್ಯೆ ಮಾಡಿದ ದುರುಳ ಪತಿ

ಗರ್ಭಿಣಿ ಪತ್ನಿಯನ್ನು ಮಂಚಕ್ಕೆ ಕಟ್ಟಿ ಪತಿಯೊಬ್ಬ ಬೆಂಕಿ ಹಚ್ಚಿರುವ ಘಟನೆ ಅಮೃತಸರದಲ್ಲಿ ನಡೆದಿದೆ. ಶುಕ್ರವಾರ ಪತಿ-ಪತ್ನಿ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿತ್ತು. ಈ ವೇಳೆ ಕೋಪಗೊಂಡ ಪತಿ ಸುಖದೇವ್ ತನ್ನ ಪತ್ನಿ ಪಿಂಕಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಆರೋಪಿ ಸುಖದೇವ್ ಅಲ್ಲಿಂದ ಪರಾರಿಯಾಗಿದ್ದಾನೆ.

ಅಮೃತಸರ: ಗರ್ಭಿಣಿ ಪತ್ನಿಯ ಮಂಚಕ್ಕೆ ಕಟ್ಟಿ, ಬೆಂಕಿ ಹಚ್ಚಿ ಹತ್ಯೆ ಮಾಡಿದ ದುರುಳ ಪತಿ
Follow us
ನಯನಾ ರಾಜೀವ್
|

Updated on: Apr 21, 2024 | 10:48 AM

ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಮೃತಸರದಲ್ಲಿ ನಡೆದಿದೆ. 23 ವರ್ಷದ ಮಹಿಳೆ 6 ತಿಂಗಳ ಗರ್ಭಿಣಿಯಾಗಿದ್ದು ಹೊಟ್ಟೆಯಲ್ಲಿ ಅವಳಿ ಮಕ್ಕಳಿದ್ದವು. ಪಾಪಿ ಪತಿಯೊಬ್ಬ ಆಕೆಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ಪತಿ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿ ಆತನನ್ನು ಪತ್ತೆ ಮಾಡಿದ್ದಾರೆ.

ಶುಕ್ರವಾರ ಪತಿ-ಪತ್ನಿ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿತ್ತು. ಈ ವೇಳೆ ಕೋಪಗೊಂಡ ಪತಿ ಸುಖದೇವ್ ತನ್ನ ಪತ್ನಿ ಪಿಂಕಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಆರೋಪಿ ಸುಖದೇವ್ ಅಲ್ಲಿಂದ ಪರಾರಿಯಾಗಿದ್ದಾನೆ. ಸುಖದೇವ್ ಮತ್ತು ಪಿಂಕಿ ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದರು.

ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಸುಖದೇವ್ ಹಾಗೂ ಪಿಂಕಿ ನಡುವೆ ಆಗಾಗ ಜಗಳ ನಡೆಯುತ್ತಲೇ ಇತ್ತು. ಶುಕ್ರವಾರವೂ ಕೆಲವು ವಿಷಯದ ಬಗ್ಗೆ ಜಗಳ ನಡೆದಿದ್ದು, ಆರೋಪಿ ಸುಖದೇವ್ ಪಿಂಕಿಯನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಆರೋಪಿ ಸುಖದೇವ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಮಗಳನ್ನು ಸಂಬಂಧಿಕರ ಮನೆಯಲ್ಲಿ ಇರಿಸಿದಕ್ಕೆ ಪಾಗಲ್​ ಪ್ರೇಮಿಯ ಕಿರಿಕ್​, ಪೋಷಕರ ಮೇಲೆ ಹಲ್ಲೆ

ಈ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಖಂಡಿಸಿದೆ. ಇದರೊಂದಿಗೆ ಪಂಜಾಬ್ ಪೊಲೀಸರಿಂದ ಪ್ರಕರಣದ ಸಂಪೂರ್ಣ ವರದಿಯನ್ನು ಕೇಳಿದೆ.

ಘಟನೆಯ ನಂತರ ಪರಾರಿಯಾಗಿದ್ದ ಸುಖದೇವ್ ನನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ