ಅಮೃತಸರ: ಬಾಂಬ್ ಇಡಲು ಯತ್ನಿಸುತ್ತಿರುವಾಗಲೇ ವ್ಯಕ್ತಿಯ ಕೈಯಲ್ಲಿದ್ದ ಬಾಂಬ್ ಸ್ಫೋಟ, ಸಾವು
ವ್ಯಕ್ತಿಯೊಬ್ಬ ಅಮೃತಸರದಲ್ಲಿ ಬಾಂಬ್(Bomb) ಇಡಲು ಯತ್ನಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನ ಅಮೃತಸರದಲ್ಲಿ ಮಂಗಳವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಗರದ ಮಜಿತಾ ರಸ್ತೆ ಬೈಪಾಸ್‌ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ಅಮೃತಸರ, ಮೇ 27: ವ್ಯಕ್ತಿಯೊಬ್ಬ ಅಮೃತಸರದಲ್ಲಿ ಬಾಂಬ್(Bomb) ಇಡಲು ಯತ್ನಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಂಜಾಬ್‌ನ ಅಮೃತಸರದಲ್ಲಿ ಮಂಗಳವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ವ್ಯಕ್ತಿ ಸಾವನ್ನಪ್ಪಿದ್ದಾನೆ. ನಗರದ ಮಜಿತಾ ರಸ್ತೆ ಬೈಪಾಸ್‌ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಂಬ್ ಇಡಲು ಯತ್ನಿಸುತ್ತಿದ್ದಾಗ ಆರೋಪಿಯ ಕೈಯಲ್ಲೇ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಗಳು ಹೇಳಿವೆ ಆದರೆ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ.
ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ತಲುಪಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಲಾಗಿದೆ. ಘಟನೆಯ ನಂತರ ಪ್ರದೇಶದಲ್ಲಿ ಭೀತಿ ಆವರಿಸಿದೆ. ಆದಾಗ್ಯೂ, ಕೆಲವು ವರದಿಗಳು ಬಾಂಬ್ ಇಡುವಾಗ ಸ್ಫೋಟಗೊಂಡಿದೆ ಎಂದು ಹೇಳಿವೆ.
ಮತ್ತಷ್ಟು ಓದಿ: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 7 ಜನ ಸಾವು, 16 ಮಂದಿಗೆ ಗಾಯ
ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.ಸ್ಫೋಟಕಗಳ ಸರಕನ್ನು ವಶಪಡಿಸಿಕೊಳ್ಳುವ ಪ್ರಯತ್ನದ ಸಮಯದಲ್ಲಿ ಈ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ . ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿ ಯಾವುದೋ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿರಬಹುದು ಎಂದು ಎಸ್‌ಎಸ್‌ಪಿ ಮಣಿಂದರ್ ಸಿಂಗ್ ತಿಳಿಸಿದ್ದಾರೆ.
#WATCH | Amritsar, Punjab | An explosion occurred in the area around Naushera village under the Kambo police station limits in the Amritsar rural district.
SSP Amritsar Rural, Maninder Singh, says, “We received information in the morning that there was an explosion here. The… pic.twitter.com/zzKRU7nu9e
— ANI (@ANI) May 27, 2025
ಚೇತರಿಸಿಕೊಂಡ ಬಳಿಕವೇ ವಿಚಾರಣೆ ನಡೆಸಿ ನಂತರ ಮಾಹಿತಿ ಪಡೆಯಬೇಕಿದೆ ಎಂದು ಹೇಳಿದ್ದರು ಆದರೆ ಆತ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯಾರ ಸೂಚನೆಗಳ ಮೇರೆಗೆ ಬಾಂಬ್‌ಗಳನ್ನು ಇಡಲು ಯತ್ನಿಸಿದ್ದ ಎಂಬುದು ತಿಳಿದುಬರಬೇಕಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:06 pm, Tue, 27 May 25




