ಅಮೃತ್​ಸರ್​ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಆರು ರೋಗಿಗಳು ಸಾವು

ಅಮೃತ್​ಸರ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕೊರತೆಯಿಂದ ಆರು ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಐದು ಮಂದಿ ಕೋವಿಡ್ 19 ಸೋಂಕಿತರು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

ಅಮೃತ್​ಸರ್​ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಆರು ರೋಗಿಗಳು ಸಾವು
ಪ್ರಾತಿನಿಧಿಕ ಚಿತ್ರ
Follow us
Srinivas Mata
|

Updated on: Apr 24, 2021 | 3:37 PM

ಅಮೃತ್​ಸರ್ (ಪಿಟಿಐ): ಆಕ್ಸಿಜನ್ ಕೊರತೆಯಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ. ಮೃತಪಟ್ಟ ಆರು ಮಂದಿಯ ಪೈಕಿ ಐವರು ಕೋವಿಡ್- 19 ಸೋಂಕಿತರು ಎಂದು ತಿಳಿಸಲಾಗಿದೆ. “ನೆರವನ್ನು ವಿಸ್ತರಿಸುವಂತೆ ಜಿಲ್ಲಾ ಆಡಳಿತ ಪದೇ ಪದೇ ಮನವಿ ಮಾಡಿಕೊಂಡ ಹೊರತಾಗಿಯೂ ಅಗತ್ಯವಾಗಿ ಏನು ಮಾಡಬೇಕಿತ್ತೋ ಆ ವ್ಯವಸ್ಥೆಯನ್ನು ಒದಗಿಸಿಲ್ಲ,” ಎಂದು ನೀಲಕಂಠ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷ ಸುನೀಲ್ ದೇವಗನ್ ಆರೋಪಿಸಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ರೋಗಿಗಳ ಸಾವಿನ ನಂತರ ಕೇವಲ 5 ಆಮ್ಲಜನಕ ಸಿಲಿಂಡರ್​ಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯ ಅಧಿಕಾರಿಗಳ ಪ್ರತಿಕ್ರಿಯೆಯನ್ನು ಪಡೆಯುವ ಸಲುವಾಗಿ ಮಾಧ್ಯಮ ಸಂಸ್ಥೆಗಳು ಪದೇಪದೇ ಪ್ರಯತ್ನ ಮಾಡಿದ ನಂತರವೂ ಮಾತಿಗೆ ಅವರು ಸಿಕ್ಕಿಲ್ಲ. ಇನ್ನು ಆಸ್ಪತ್ರೆಯ ಅಧ್ಯಕ್ಷರು ಹೇಳುವ ಪ್ರಕಾರ, ಮೂವರು ಆಕ್ಸಿಜನ್ ಸಿಲಿಂಡರ್ ಪೂರೈಕೆದಾರರಿದ್ದು, ಪೂರೈಕೆ ವಿಚಾರಕ್ಕೆ ಸರ್ಕಾರಿ ಆಸ್ಪತ್ರೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.

ಆಮ್ಲಜನಕ ಘಟಕದ ಹೊರಗೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಆಗದಂತೆ ಹೀಗೆ ಮಾಡಲಾಗಿದೆ ಎಂದು ದೇವಗನ್ ಆರೋಪಿಸಿದ್ದಾರೆ. ಇನ್ನು ಶನಿವಾರ ಮೃತಪಟ್ಟ ಆರು ರೋಗಿಗಳ ಪೈಕಿ ಇಬ್ಬರು ಗುರ್​ದಾಸ್​ಪುರ್​ದವರು. ಒಬ್ಬರು ತರ್ನ್ ತರಣ್ ಜಿಲ್ಲೆ ಮತ್ತ ಮೂವರು ಅಮೃತ್​ಸರ್​ನವರು.

ಇದನ್ನೂ ಓದಿ: ದೇಶದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಇಲ್ಲ; ಪೂರೈಕೆಗೆ ಸಮಯ ತೆಗೆದುಕೊಳ್ಳುತ್ತಿದೆ ಎಂದ ನವೀನ್ ಜಿಂದಾಲ್

ಇದನ್ನೂ ಓದಿ: Oxygen emrgencey: ಸಿಂಗಾಪುರದಿಂದ ಭಾರತಕ್ಕೆ 4 ಆಕ್ಸಿಜನ್ ಟ್ಯಾಂಕರ್‌ಗಳು ಏರ್‌ಲಿಫ್ಟ್, ವಿಮಾನ ಇಳಿದಿದ್ದು ಎಲ್ಲಿ?

(Amritsar private hospital 6 patients died due to shortage of oxygen supply)

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?