Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ

|

Updated on: Nov 26, 2023 | 8:44 AM

ಹರ್ಯಾಣದ ಸೋನಿಪತ್‌ನಲ್ಲಿ ಇಂದು ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವು ಸೋನಿಪತ್‌ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

Haryana Earthquake: ಹರ್ಯಾಣದ ಸೋನಿಪತ್​ನಲ್ಲಿ 3.0 ತೀವ್ರತೆಯ ಭೂಕಂಪ
ಪ್ರಾತಿನಿಧಿಕ ಚಿತ್ರ
Image Credit source: India Today
Follow us on

ಹರ್ಯಾಣದ ಸೋನಿಪತ್‌ನಲ್ಲಿ ಇಂದು ಲಘು ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರಬಿಂದುವು ಸೋನಿಪತ್‌ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ವರದಿಯಾಗಿಲ್ಲ. ಪಶ್ಚಿಮ ನೇಪಾಳದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದ ಕೆಲವು ದಿನಗಳ ನಂತರ ಇದು ಸಂಭವಿಸಿದೆ.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಇದಕ್ಕೂ ಮೊದಲು ಅಕ್ಟೋಬರ್ 15 ರಂದು, ಹರಿಯಾಣದ ಫರಿದಾಬಾದ್‌ನಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ, ಇದರ ಕಂಪನದ ಅನುಭವವು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಕೂಡ ಆಗಿತ್ತು.

ಅದಕ್ಕೂ ಮೊದಲು, ಅಕ್ಟೋಬರ್ 3 ರಂದು ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಬಲವಾದ ಕಂಪನಗಳು ಸಂಭವಿಸಿದವು, ಕೆಲವೇ ಗಂಟೆಗಳಲ್ಲಿ ನೇಪಾಳದಲ್ಲಿ ಸರಣಿ ಭೂಕಂಪಗಳು ಸಂಭವಿಸಿದವು, ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ