Rajeev Rai: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಆಪ್ತರ ನಿವಾಸದ ಮೇಲೆ ಐಟಿ ದಾಳಿ

IT Raid on Rajeev Rai house:ಸಮಾಜವಾದಿ ಪಕ್ಷದ ಮುಖಂಡ, ಅಖಿಲೇಶ್ ಯಾದವ್ ಆಪ್ತ ರಾಜೀವ್ ರೈ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆಯಲ್ಲಿ ತೊಡಗಿದ್ದಾರೆ.

Rajeev Rai: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಆಪ್ತರ ನಿವಾಸದ ಮೇಲೆ ಐಟಿ ದಾಳಿ
ರಾಜೀವ್ ರೈ ಮತ್ತು ಅಖಿಲೇಶ್ ಯಾದವ್ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Dec 18, 2021 | 12:08 PM

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (Akhilesh Yadav) ಅವರ ಆಪ್ತರಾಗಿರುವ ಸಮಾಜವಾದಿ ಪಕ್ಷದ ನಾಯಕ ರಾಜೀವ್ ರೈ (Rajeev Rai) ಅವರ ಮನೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಶೋಧ ನಡೆಸಿದ್ದಾರೆ. ವಾರಣಾಸಿಯಿಂದ ಆಗಮಿಸಿದ ಆದಾಯ ತೆರಿಗೆ ಇಲಾಖೆಯ ತಂಡವೊಂದು ಇಂದು ಬೆಳಗ್ಗೆ ಪೂರ್ವ ಉತ್ತರ ಪ್ರದೇಶದ ಮೌ ಜಿಲ್ಲೆಯ ರಾಜೀವ್ ರೈ ಅವರ ಮನೆಯಲ್ಲಿ ಶೋಧ ಕೈಗೊಂಡಿದೆ. ಉತ್ತರ ಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಈ ದಾಳಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜೀವ್ ರೈ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. 2012ರ ಚುನಾವಣೆಯಲ್ಲಿನ ಯಶಸ್ಸಿಗೆ ಅವರು ಪ್ರಮುಖ ಕಾರಣ ಎಂದು ವ್ಯಾಖ್ಯಾನಿಸಲಾಗಿದ್ದು, 2014ರಲ್ಲಿ ಘೋಸಿ ಕ್ಷೇತ್ರದಿಂದ ಲೋಕಸಭೆಗೆ ಅಭ್ಯರ್ಥಿಯಾಗಿದ್ದರು.

ದಾಳಿಯ ಕುರಿತು ಎಎನ್​ಐ ಹಂಚಿಕೊಂಡಿರುವ ಮಾಹಿತಿ:

ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿ ಅಖಿಲೇಶ್ ಯಾದವ್ ಅವರ ಮತ್ತೊಬ್ಬ ಸಹಾಯಕನ ಮೇಲೆ ದಾಳಿ ಮಾಡಲಾಗಿದೆ. ಅಲ್ಲಿ ದಾಳಿಗೆ ಒಳಗಾದ ಮನೋಜ್ ಯಾದವ್ ಆರ್ ಸಿಎಲ್ ಗ್ರೂಪ್ ಎಂಬ ಕಂಪನಿಗಳ ಸಮೂಹದ ಪ್ರವರ್ತಕರಾಗಿದ್ದಾರೆ.

ದಾಳಿಯ ಕುರಿತು ಪ್ರತಿಕ್ರಿಯಿಸಿದ ರಾಜೀವ್ ರೈ: ದಾಳಿಯ ಕುರಿತು ಪ್ರತಿಕ್ರಿಯಿಸಿರುವ ರಾಜೀವ್ ರೈ, ‘‘ಇದು ಐಟಿ ಇಲಾಖೆ! ನನಗೆ ಯಾವ ಕ್ರಿಮಿನಲ್ ಹಿನ್ನೆಲೆಯೂ ಇಲ್ಲ. ಜನರಿಗೆ ಸಹಾಯ ಮಾಡುತ್ತಿದ್ದೆ, ಅದು ಸರ್ಕರಕ್ಕೆ ಇಷ್ಟವಾಗಲಿಲ್ಲ. ಅದಕ್ಕೆ ದಾಳಿ ನಡೆಸಲಾಗಿದೆ. ಅವರು ವಿಡಿಯೋ ಮಾಡಿ, ಕೇಸು ದಾಖಲಿಸುತ್ತಾರೆ. ಸುಮ್ಮನೆ ಇದರ ವಿರುದ್ಧ ಗುದ್ದಾಡಬೇಕು’’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಅಖಿಲೇಶ್ ಯಾದವ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಕಾರ್ಯಯೋಜನೆಗಳೂ ಸೇರಿದಂತೆ ಸರ್ಕಾರದ ನಡೆಯನ್ನು ಟೀಕಿಸಿದ್ದರು. ಜತೆಗೆ, ಆ ಎಲ್ಲಾ ಅಭಿವೃದ್ಧಿ ಯೋಜನೆಗಳು ತಮ್ಮ ಅಧಿಕಾರಾವಧಿಯಲ್ಲಿ ಆರಂಭವಾಗಿದ್ದವು ಎಂದು ಅವರು ಹೇಳಿಕೊಂಡಿದ್ದರು. ಇದು ಚುನಾವಣಾ ಹೇಳಿಕೆ ಎಂದು ಬಿಜೆಪಿ ಟೀಕಿಸಿತ್ತು. ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಇದೀಗ ಅಖಿಲೇಶ್ ಆಪ್ತರ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ ತಿರುವು ಪಡೆಯುವ ಲಕ್ಷಣ ಗೋಚರಿಸಿದೆ.

ಇದನ್ನೂ ಓದಿ:

12 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವ ಸತ್ತೇ ಹೋಗಿದ್ದಾನೆಂದು ನಂಬಿದ್ದ ಕುಟುಂಬ; ಪಾಕಿಸ್ತಾನದ ಜೈಲಿನಿಂದ ಬಂದ ಪತ್ರದಲ್ಲಿತ್ತು ಶಾಕಿಂಗ್​ ಸತ್ಯ

ಐಎಎಸ್ ಅಧಿಕಾರಿಗಳನ್ನು ಹುಟ್ಟುಹಾಕುವಲ್ಲಿ ಯಾವ ರಾಜ್ಯಗಳಿಗೆ ಎಷ್ಟನೇ ಸ್ಥಾನ? ಕುತೂಹಲಕಾರಿ ಅಂಕಿಅಂಶ ಇಲ್ಲಿದೆ

Published On - 10:58 am, Sat, 18 December 21

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ