AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನಂದ್​ಮೋಹನ್​ ಸಿಂಗ್​ರನ್ನು ಮರಳಿ ಜೈಲಿಗೆ ಕಳುಹಿಸುವಂತೆ ಮೃತ ಐಎಎಸ್ ಅಧಿಕಾರಿ ಪತ್ನಿ ಪ್ರಧಾನಿ ಮೋದಿಗೆ ಮನವಿ

ಐಎಎಸ್​ ಅಧಿಕಾರಿ ಜಿ ಕೃಷ್ಣಯ್ಯ( G Krishnaiah) ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜಕಾರಣಿ ಆನಂದ್ ಮೋಹನ್ ಸಿಂಗ್​ ಜೈಲಿನಿಂದ ಬಿಡುಗಡೆಗೊಂಡಿದ್ದು, ಈ ಕುರಿತು ಕೃಷ್ಣಯ್ಯ ಅವರ ಪತ್ನಿ ಕಳವಳ ವ್ಯಕ್ತಪಡಿಸಿದ್ದಾರೆ.

ಆನಂದ್​ಮೋಹನ್​ ಸಿಂಗ್​ರನ್ನು ಮರಳಿ ಜೈಲಿಗೆ ಕಳುಹಿಸುವಂತೆ ಮೃತ ಐಎಎಸ್ ಅಧಿಕಾರಿ ಪತ್ನಿ ಪ್ರಧಾನಿ ಮೋದಿಗೆ ಮನವಿ
ಉಮಾದೇವಿ, ಆನಂದ್​ ಮೋಹನ್ ಸಿಂಗ್
ನಯನಾ ರಾಜೀವ್
|

Updated on: Apr 27, 2023 | 12:06 PM

Share

ಐಎಎಸ್​ ಅಧಿಕಾರಿ ಜಿ ಕೃಷ್ಣಯ್ಯ( G Krishnaiah) ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜಕಾರಣಿ ಆನಂದ್ ಮೋಹನ್ ಸಿಂಗ್​( Anand Mohan Singh) ಜೈಲಿನಿಂದ ಬಿಡುಗಡೆಗೊಂಡಿದ್ದು, ಈ ಕುರಿತು ಕೃಷ್ಣಯ್ಯ ಅವರ ಪತ್ನಿ ಉಮಾದೇವಿ ಕಳವಳ ವ್ಯಕ್ತಪಡಿಸಿದ್ದಾರೆ. ಆನಂದ್​ ಮೋಹನ್ ಸಿಂಗ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಈ ನಿರ್ಧಾರದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.

ಪ್ರಾಮಾಣಿಕ ಅಧಿಕಾರಿಯನ್ನು ಹತ್ಯೆ ಮಾಡಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಉಮಾದೇವಿ ಹೇಳಿದ್ದು, ಇದು ಸರ್ಕಾರದ ತಪ್ಪು ನಿರ್ಧಾರ, ಕೂಡಲೇ ಪ್ರಧಾನಿಯವರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ತೆಲಂಗಾಣ ಮೂಲದ ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರು ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು. 1994 ರಲ್ಲಿ ಅವರ ವಾಹನ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಗುಂಪೊಂದು ಗುಂಡು ಹಾರಿಸಿತ್ತು.

ಪ್ರಾಮಾಣಿಕ ಅಧಿಕಾರಿಯನ್ನು ಕೊಂದಿರುವ ಹಂತಕನ್ನು ಬಿಡುಗಡೆ ಮಾಡಲಾಗಿದೆ, ಇದು ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. 1985 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರು ತೆಲಂಗಾಣದ ಮಹಬೂಬ್‌ನಗರದವರು. ಅವರು ಬಡ ದಲಿತ ಕುಟುಂಬಕ್ಕೆ ಸೇರಿದವರು ಮತ್ತು ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಹೇಳಲಾಗುತ್ತದೆ. ಅವರು 1994 ರಲ್ಲಿ ಗೋಪಾಲ್​ಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು.

ಮತ್ತಷ್ಟು ಓದಿ: ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ

2007 ರಲ್ಲಿ ವಿಚಾರಣಾ ನ್ಯಾಯಾಲಯವು ಸಿಂಗ್ ಅವರಿಗೆ ಮರಣದಂಡನೆ ವಿಧಿಸಿತು ಮತ್ತು ನಂತರ ಪಾಟ್ನಾ ಹೈಕೋರ್ಟ್ ಜೀವಾವಧಿ ಶಿಕ್ಷೆಗೆ ಪ್ರಕಟಿಸಿತು, ಅವರು 2007 ರಿಂದ ಬಿಹಾರ ಜೈಲಿನಲ್ಲಿದ್ದಾರೆ.

ಆನಂದ್ ಮೋಹನ್ ಸಿಂಗ್ ಅವರ ಪುತ್ರ ಮತ್ತು ಆರ್‌ಜೆಡಿ ಶಾಸಕ ಚೇತನ್ ಆನಂದ್ ಅವರು ಹೈದರಾಬಾದ್‌ಗೆ ಹೋಗಿ ಹತ್ಯೆಯಾದ ಅಧಿಕಾರಿಯ ಕುಟುಂಬವನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್