ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ( G Krishnaiah) ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜಕಾರಣಿ ಆನಂದ್ ಮೋಹನ್ ಸಿಂಗ್( Anand Mohan Singh) ಜೈಲಿನಿಂದ ಬಿಡುಗಡೆಗೊಂಡಿದ್ದು, ಈ ಕುರಿತು ಕೃಷ್ಣಯ್ಯ ಅವರ ಪತ್ನಿ ಉಮಾದೇವಿ ಕಳವಳ ವ್ಯಕ್ತಪಡಿಸಿದ್ದಾರೆ. ಆನಂದ್ ಮೋಹನ್ ಸಿಂಗ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಈ ನಿರ್ಧಾರದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.
ಪ್ರಾಮಾಣಿಕ ಅಧಿಕಾರಿಯನ್ನು ಹತ್ಯೆ ಮಾಡಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಉಮಾದೇವಿ ಹೇಳಿದ್ದು, ಇದು ಸರ್ಕಾರದ ತಪ್ಪು ನಿರ್ಧಾರ, ಕೂಡಲೇ ಪ್ರಧಾನಿಯವರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ತೆಲಂಗಾಣ ಮೂಲದ ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರು ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು. 1994 ರಲ್ಲಿ ಅವರ ವಾಹನ ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ಗುಂಪೊಂದು ಗುಂಡು ಹಾರಿಸಿತ್ತು.
ಪ್ರಾಮಾಣಿಕ ಅಧಿಕಾರಿಯನ್ನು ಕೊಂದಿರುವ ಹಂತಕನ್ನು ಬಿಡುಗಡೆ ಮಾಡಲಾಗಿದೆ, ಇದು ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. 1985 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಜಿ ಕೃಷ್ಣಯ್ಯ ಅವರು ತೆಲಂಗಾಣದ ಮಹಬೂಬ್‌ನಗರದವರು. ಅವರು ಬಡ ದಲಿತ ಕುಟುಂಬಕ್ಕೆ ಸೇರಿದವರು ಮತ್ತು ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಹೇಳಲಾಗುತ್ತದೆ. ಅವರು 1994 ರಲ್ಲಿ ಗೋಪಾಲ್ಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿದ್ದರು.
ಮತ್ತಷ್ಟು ಓದಿ: ದೆಹಲಿಯ ಅಪಾರ್ಟ್ಮೆಂಟ್ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ
2007 ರಲ್ಲಿ ವಿಚಾರಣಾ ನ್ಯಾಯಾಲಯವು ಸಿಂಗ್ ಅವರಿಗೆ ಮರಣದಂಡನೆ ವಿಧಿಸಿತು ಮತ್ತು ನಂತರ ಪಾಟ್ನಾ ಹೈಕೋರ್ಟ್ ಜೀವಾವಧಿ ಶಿಕ್ಷೆಗೆ ಪ್ರಕಟಿಸಿತು, ಅವರು 2007 ರಿಂದ ಬಿಹಾರ ಜೈಲಿನಲ್ಲಿದ್ದಾರೆ.
ಆನಂದ್ ಮೋಹನ್ ಸಿಂಗ್ ಅವರ ಪುತ್ರ ಮತ್ತು ಆರ್‌ಜೆಡಿ ಶಾಸಕ ಚೇತನ್ ಆನಂದ್ ಅವರು ಹೈದರಾಬಾದ್‌ಗೆ ಹೋಗಿ ಹತ್ಯೆಯಾದ ಅಧಿಕಾರಿಯ ಕುಟುಂಬವನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ