Anant Ambani Engagement: ಮುಕೇಶ್ ಅಂಬಾನಿ ಪುತ್ರನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ರಾಧಿಕಾ ಮರ್ಚೆಂಟ್

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇಂದು ರಾಧಿಕಾ ಮರ್ಚೆಂಟ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಇಬ್ಬರು ಸಾಂಪ್ರದಾಯಿಕ ರೋಕಾ ಸಮಾರಂಭವನ್ನು ನಡೆಸಿದರು.

Anant Ambani Engagement: ಮುಕೇಶ್ ಅಂಬಾನಿ ಪುತ್ರನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ರಾಧಿಕಾ ಮರ್ಚೆಂಟ್
Anant Ambani Engagement Radhika Merchant is engaged to Mukesh Ambani's son
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 29, 2022 | 4:49 PM

ದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ (Mukesh Ambani) ಪುತ್ರ ಅನಂತ್ (Anant Ambani) ಅಂಬಾನಿ ಇಂದು ರಾಧಿಕಾ ಮರ್ಚೆಂಟ್ (Radhika Merchant) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಇಬ್ಬರು ಸಾಂಪ್ರದಾಯಿಕ ರೋಕಾ ಸಮಾರಂಭವನ್ನು ನಡೆಸಿದರು. ರಾಧಿಕಾ ಮರ್ಚಂಟ್, ಔಷಧೀಯ ತಯಾರಿಕಾ ಕಂಪನಿಯ ಸಿಇಒ, ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ. ಇದೀಗ ಇಬ್ಬರ ನಿಶ್ಚಿತಾರ್ಥ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ನಿರ್ದೇಶಕ-ಕಾರ್ಪೊರೇಟ್ ವ್ಯವಹಾರಗಳು, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಪರಿಮಳ್ ನಾಥ್ವಾನಿ, ದಂಪತಿಗಳನ್ನು ಅಭಿನಂದಿಸಿದ್ದಾರೆ.

ಮುಕೇಶ್ ಅಂಬಾನಿಯವರ ಮೂವರು ಮಕ್ಕಳಲ್ಲಿ ಅನಂತ್ ಅಂಬಾನಿ ಕಿರಿಯವರಾಗಿದ್ದಾರೆ, ಇತರ ಇಬ್ಬರು ಆಕಾಶ್ ಮತ್ತು ಇಶಾ. 1995 ರಲ್ಲಿ ಜನಿಸಿದ ಅನಂತ್ ಅಂಬಾನಿ ಬಿಲಿಯನೇರ್‌ನ ವ್ಯಾಪಾರ ಸಾಮ್ರಾಜ್ಯದ ವಾರಸುದಾರರಲ್ಲಿ ಒಬ್ಬರಾಗಿದ್ದಾರೆ. ಅನಂತ್ ಅವರು ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಪ್ರಾಥಮಿಕ ಶಿಕ್ಷಣದ ನಂತರ ಯುಎಸ್‌ನ ರೋಡ್ ಐಲ್ಯಾಂಡ್‌ನಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದರು.

ಇದನ್ನು ಓದಿ:ಭಾವಿ ಸೊಸೆ ಜೊತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖೇಶ್ ಅಂಬಾನಿ

ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಬಾಲ್ಯದ ಗೆಳೆಯರು. ಮುಕೇಶ್ ಮತ್ತು ನೀತಾ ಅಂಬಾನಿಯವರ ಭಾವಿ ಸೊಸೆಯು ಪ್ರಸಿದ್ಧ ಕುಟುಂಬದಿಂದ ಬಂದಿರುವ ತರಬೇತಿ ಪಡೆದ ಶಾಸ್ತ್ರೀಯ ನೃತ್ಯಗಾರ್ತಿ. ರಾಧಿಕಾ ಮರ್ಚೆಂಟ್ ಅವರ ತಂದೆ ವೀರೇನ್ ಮರ್ಚೆಂಟ್ ಎನ್‌ಕೋರ್ ಹೆಲ್ತ್‌ಕೇರ್‌ನ ಸಿಇಒ. ಅವರು ಮುಂಬೈನ ಪ್ರಸಿದ್ಧ 25 ವರ್ಷದ ಶ್ರೀ ನಿಭಾ ಆರ್ಟ್ಸ್ ಡ್ಯಾನ್ಸ್ ಅಕಾಡೆಮಿಯಿಂದ ಗುರು ಭಾವನಾ ಠಾಕರ್ ಅವರ ಮಾರ್ಗದರ್ಶನದಲ್ಲಿ ಶಾಸ್ತ್ರೀಯ ನೃತ್ಯದಲ್ಲಿ ತಮ್ಮ ತರಬೇತಿಯನ್ನು ಪಡೆದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Thu, 29 December 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ