ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಗರಗಸದಿಂದ ದಾಳಿ ನಡೆಸಿದ್ದ ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು
ಅನಂತಪುರದಲ್ಲಿ ಶಾಲಾ ವಿದ್ಯಾರ್ಥಿನಿಯರ ಮೇಲೆ ಚೈನ್ಸಾ ದಾಳಿ ನಡೆಸಿದ್ದ ಆರೋಪಿ ಹೇಮಂತ್, ಪರಾರಿಯಾಗಲು ಯತ್ನಿಸಿದಾಗ ಪೊಲೀಸರಿಂದ ಗುಂಡೇಟು ತಿಂದಿದ್ದಾನೆ. ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಈ ದಾಳಿ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಸಂಪೂರ್ಣ ತನಿಖೆ ಮುಂದುವರಿದಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಅನಂತಪುರ, ನವೆಂಬರ್ 02:ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಶಾಲೆಯ ತರಗತಿಯೊಳಗೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಗರಗಸದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಹೇಮಂತ್ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆರೋಪಿಯನ್ನು ಅನಂತಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಟೋಬರ್ 31ರಂದು ರಾಪ್ತಾಡುವಿನ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಆರೋಪಿ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದರು.
ಭಾನುವಾರ ಆತ್ಮಕೂರ್ ಅರಣ್ಯ ಪ್ರದೇಶದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಹೇಮಂತ್ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ವರದಿಗಳ ಪ್ರಕಾರ ಆರು ಸುತ್ತು ಗುಂಡು ಹಾರಿಸಲಾಗಿದೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.
ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ದಾಳಿ? ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಹೇಮಂತ್ ಮದುವೆಯಾಗುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿದ್ದ ಎನ್ನಲಾಗಿದೆ. ಆಕೆ ಪ್ರಸ್ತಾಪವನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಶಾಲೆಗೆ ನುಗ್ಗಿ ಗರಗಸದಿಂದ ಹಲ್ಲೆ ನಡೆಸಿದ್ದಾನೆ ಎಂಬ ಆರೋಪವಿದೆ. ಈ ವೇಳೆ ವಿದ್ಯಾರ್ಥಿನಿಯನ್ನು ರಕ್ಷಿಸಲು ಮುಂದಾದ ಮತ್ತೊಬ್ಬ ಸಹಪಾಠಿಯೂ ಗಾಯಗೊಂಡಿದ್ದಾಳೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಆಂಧ್ರದ ಶಾಲೆಯೊಳಗೇ ಕೊಲೆ ಯತ್ನ; ಪ್ರೀತಿ ನಿರಾಕರಿಸಿದ್ದಕ್ಕೆ ಗರಗಸದಿಂದ 10ನೇ ತರಗತಿ ವಿದ್ಯಾರ್ಥಿನಿಯ ಕುತ್ತಿಗೆ ಸೀಳಿದ ಯುವಕ!
ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಬೆಂಗಳೂರಿಗೆ ಸ್ಥಳಾಂತರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿಗೆ ಆರಂಭದಲ್ಲಿ ಅನಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ತಂಡದೊಂದಿಗೆ ವಿಶೇಷ ವ್ಯವಸ್ಥೆ ಮೂಲಕ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಂಧ್ರಪ್ರದೇಶದ ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಬಲಗೈಗೆ ತೀವ್ರ ಹಾನಿಯಾಗಿದ್ದು, ಮುಖ, ಕುತ್ತಿಗೆ, ತಲೆ ಮತ್ತು ಭುಜದ ಭಾಗಗಳಲ್ಲೂ ಗಂಭೀರ ಗಾಯಗಳಾಗಿವೆ. ಹಲವು ಮೂಳೆ ಮುರಿತಗಳು ಹಾಗೂ ರಕ್ತನಾಳಗಳಿಗೆ ಹಾನಿಯಾಗಿರುವುದಾಗಿ ಆಸ್ಪತ್ರೆಯ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.
VIDEO | Andhra Pradesh: Police arrest the accused in an assault case at a government school in Anantapur district.
The police on Sunday opened firing at the man accused of attacking two girl students inside a classroom in this district using a chainsaw, after he allegedly tried to assault the personnel when they attempted to apprehend him.
(Full video available on PTI Videos – https://t.co/bIyFWTfmBd)
— Press Trust of India (@PTI_News) November 1, 2026
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಶಾಲೆಯೊಳಗೆ ಆರೋಪಿ ಹೇಗೆ ಪ್ರವೇಶಿಸಿದ, ದಾಳಿಗೆ ಬಳಸಿದ ಗರಗಸ ಎಲ್ಲಿಂದ ಬಂದಿತು ಮತ್ತು ಘಟನೆಯ ಹಿಂದಿನ ಸಂಪೂರ್ಣ ಕಾರಣವೇನು ಎಂಬ ಅಂಶಗಳ ಬಗ್ಗೆಯೂ ತನಿಖೆ ನಡೆಯಬೇಕಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




