AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuma Jayanthi: ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ಹನುಮ ಜಯಂತಿ ದಿನದಂದು ನಡೆಯಿತು ಪವಾಡ! ವಿಡಿಯೋ ಇದೆ

ಈ ರಾಮ ಲಕ್ಷ್ಮಣ ವಿಗ್ರಹಗಳನ್ನು 1999 ರಲ್ಲಿ ತಿಮ್ಮಾಪುರ ರಾಮ ಮಂದಿರದಿಂದ ಕಳವು ಮಾಡಲಾಗಿದೆ ಎಂದು ಊರಿನ ಹಿರಿಯರು ತಿಳಿಸಿದ್ದಾರೆ. ವಿಗ್ರಹಗಳು ಇರುವ ಕಡೆ ರಾಮಮಂದಿರ ನಿರ್ಮಾಣವಾಗಬೇಕು ಎಂದೂ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

Hanuma Jayanthi: ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ಹನುಮ ಜಯಂತಿ ದಿನದಂದು ನಡೆಯಿತು ಪವಾಡ! ವಿಡಿಯೋ ಇದೆ
ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ಹನುಮ ಜಯಂತಿ ದಿನದಂದು ಪವಾಡ!
TV9 Web
| Edited By: ಸಾಧು ಶ್ರೀನಾಥ್​|

Updated on:Apr 07, 2023 | 2:31 PM

Share

ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯಲ್ಲಿ ಕುತೂಹಲಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉದ್ಯೋಗ ಖಾತ್ರಿ ಕಾಮಗಾರಿ (Mahatma Gandhi National Rural Employment Guarantee Act 2005 -MGNREGA) ಮಾಡುವಾಗ ಹನುಮ ಜಯಂತಿ (Hanuman Jayanthi) ಸಂದರ್ಭದಲ್ಲಿ ರಾಮ ಲಕ್ಷ್ಮಣರ ಪುರಾತನ ವಿಗ್ರಹಗಳು ಪತ್ತೆಯಾಗಿವೆ. ಜಿಲ್ಲೆಯ ಜನ್ನಾರಾಂ ಮಂಡಲದ ತಪಾಲಪುರ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಉದ್ಯೋಗ ಖಾತ್ರಿ ಕಾಮಗಾರಿ ನಡೆಸುವಾಗ ತಪಾಲ್ಪುರ ಚೆಕ್ ಪೋಸ್ಟ್ ಬಳಿ ಸ್ಥಳೀಯ ಜನರಿಗೆ ಇದು ವಿಸ್ಮಯಕಾರಿಯಾಗಿದೆ.

ಮಂಚಿರ್ಯಾಲ ಜಿಲ್ಲೆಯಲ್ಲಿ ಕುತೂಹಲಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉದ್ಯೋಗ ಖಾತ್ರಿ ಕಾಮಗಾರಿ ಮಾಡುವಾಗ ರಾಮ ಲಕ್ಷ್ಮಣರ ಪುರಾತನ ಮೂರ್ತಿಗಳು ಪತ್ತೆಯಾಗಿವೆ. ಜಿಲ್ಲೆಯ ಜನ್ನಾರಾಂ ಮಂಡಲದ ತಪಾಲಪುರ ಚೆಕ್ ಪೋಸ್ಟ್ ಬಳಿ ಘಟನೆ ಬೆಳಕಿಗೆ ಬಂದಿದೆ. ವಿವರಗಳು ಈ ಕೆಳಗಿನಂತಿವೆ. ಉದ್ಯೋಗ ಖಾತ್ರಿ ಕಾಮಗಾರಿಯ ಭಾಗವಾಗಿ ಸ್ಥಳೀಯ ಜನರು ತಪಾಲಪುರ ಚೆಕ್ ಪೋಸ್ಟ್ ಬಳಿ ಕೆಲಸ ನಡೆಯುತ್ತಿದೆ. ಕೆಲ ಕಾರ್ಮಿಕರು ಸಲಿಕೆ ಹಿಡಿದು ಭೂಮಿಯನ್ನು ಅಗೆಯುತ್ತಿದ್ದಾಗ ವಿಶೇಷ ಆಕಾರವೊಂದು ಕಾಣಿಸಿದೆ.

ಮಣ್ಣು ಅಗೆದಾಗ ರಾಮ ಲಕ್ಷ್ಮಣರ ಪುರಾತನ ವಿಗ್ರಹಗಳು ಸಿಕ್ಕಿವೆ. ತಕ್ಷಣ ಊರಿನ ಮಂದಿಗೆ ಸುದ್ದಿ ರವಾನಿಸಿದ್ದಾರೆ. ಎಲ್ಲರೂ ಬಂದಾಗ ಆ ರಾಮಲಕ್ಷ್ಮಣ ಮೂರ್ತಿಗಳನ್ನು ಹೊರತೆಗೆಯಲಾಗಿದೆ. ಸ್ಥಳದಲ್ಲಿಯೇ ಜಲಾಭಿಷೇಕ ಮಾಡಿ, ಪುಣ್ಯಕಾರ್ಯ ಮಾಡಲಾಗಿದೆ. ಅರಿಶಿನ, ಕುಂಕುಮ, ಹೂವು, ತೆಂಗಿನಕಾಯಿ ಹೊಡೆದು ಪೂಜೆ ಮಾಡಲಾಗಿದೆ. ಗ್ರಾಮ ಪಂಚಾಯತ್​ ಅಧಿಕಾರಿಗಳಿಗೆ ವಿಷಯ ತಿಳಿಸಿದಾಗ ಅವರೂ ಸಹ ಸ್ಥಳಕ್ಕೆ ಬಂದು ಪರಿಶೀಲಿಸಿದರು.

ಇದನ್ನೂ ಓದಿ: Kiran Kumar Reddy Joins BJP: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ 

ಏತನ್ಮಧ್ಯೆ, ಈ ರಾಮ ಲಕ್ಷ್ಮಣ ವಿಗ್ರಹಗಳನ್ನು 1999 ರಲ್ಲಿ ತಿಮ್ಮಾಪುರ ರಾಮ ಮಂದಿರದಿಂದ ಕಳವು ಮಾಡಲಾಗಿದೆ ಎಂದು ಊರಿನ ಹಿರಿಯರು ತಿಳಿಸಿದ್ದಾರೆ. ವಿಗ್ರಹಗಳು ಇರುವ ಕಡೆ ರಾಮಮಂದಿರ ನಿರ್ಮಾಣವಾಗಬೇಕು ಎಂದೂ ಸ್ಥಳೀಯರು ಆಗ್ರಹಿಸುತ್ತಿದ್ದಾರೆ. ಆದರೆ, ಉತ್ಖನನದಲ್ಲಿ ಪತ್ತೆಯಾದ ಈ ವಿಗ್ರಹಗಳ ಕಾಲಘಟ್ಟ ದೃಢೀಕರಿಸಲು ಪರಿಶೀಲನೆ ನಡೆಸಬೇಕು ಎನ್ನುತ್ತಾರೆ ಕಂದಾಯ ಅಧಿಕಾರಿಗಳು. ಅಧಿಕಾರಿಗಳು ಯಾವ ರೀತಿಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Fri, 7 April 23

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!