ಅಂಡಮಾನ್ ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್​ಗೆ ಶ್ರೀ ವಿಜಯ ಪುರಂ ಎಂದು ಮರುನಾಮಕರಣ

ಅಂಡಮಾನ್ ಮತ್ತು ನಿಕೋಬಾರ್ ರಾಜಧಾನಿಯಾದ ಪೋರ್ಟ್​ಬ್ಲೇರ್ ಅನ್ನು ಇನ್ನುಮುಂದೆ ಶ್ರೀವಿಜಯಪುರಂ ಎಂದು ಕರೆಯಲಾಗುವುದು. ಕೇಂದ್ರ ಸರ್ಕಾರ ಪೋರ್ಟ್​ಬ್ಲೇರ್​ಗೆ ಇಂದು ಮರುನಾಮಕರಣ ಮಾಡಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಂಡಮಾನ್ ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್​ಗೆ ಶ್ರೀ ವಿಜಯ ಪುರಂ ಎಂದು ಮರುನಾಮಕರಣ
ಅಮಿತ್ ಶಾ

Updated on: Sep 13, 2024 | 5:46 PM

ನವದೆಹಲಿ: ಕೇಂದ್ರ ಸರ್ಕಾರವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಈ ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದು, ಶ್ರೀ ವಿಜಯ ಪುರಂ ಎಂಬ ಹೊಸ ಹೆಸರು ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಘೋಷಿಸಿದ್ದಾರೆ. “ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು” ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಹುಬ್ಬಳ್ಳಿ-ಪುಣೆ ಮಾರ್ಗದ ವಂದೇ ಭಾರತ್ ರೈಲು ಸಂಚಾರಕ್ಕೆ ಸೆ. 16ರಂದು ಪ್ರಧಾನಿ ಮೋದಿ ಚಾಲನೆ

“ವಸಾಹತುಶಾಹಿ ಮುದ್ರೆಗಳಿಂದ ದೇಶವನ್ನು ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಿಂದ ಪ್ರೇರಿತರಾಗಿ, ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.


“ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸಾಟಿಯಿಲ್ಲದ ಸ್ಥಾನವನ್ನು ಹೊಂದಿವೆ. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಕಾರ್ಯನಿರ್ವಹಿಸಿದ ಈ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿಯ ಮಹತ್ವಾಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಇದು ನೇತಾಜಿ ಸುಭಾಷ್ ಚಂದ್ರ ಬೋಸ್ ನಮ್ಮ ತ್ರಿವರ್ಣ ಧ್ವಜದ ಮೊದಲ ಅನಾವರಣವನ್ನು ಆಯೋಜಿಸಿದ ಸ್ಥಳವಾಗಿದೆ. ವೀರ್ ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿದ ಸೆಲ್ಯುಲಾರ್ ಜೈಲು ಇರುವ ಸ್ಥಳವಾಗಿದೆ” ಎಂದು ಗೃಹ ಸಚಿವರು ಹೇಳಿದ್ದಾರೆ.

ಪೋರ್ಟ್ ಬ್ಲೇರ್ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶ ಬಿಂದುವಾಗಿದೆ. ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ವಸಾಹತುಶಾಹಿ ನೌಕಾಪಡೆಯ ಅಧಿಕಾರಿ ಕ್ಯಾಪ್ಟನ್ ಆರ್ಚಿಬಾಲ್ಡ್ ಬ್ಲೇರ್ ಅವರ ಹೆಸರನ್ನು ಈ ನಗರಕ್ಕೆ ಇಡಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Fri, 13 September 24

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us