AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ನಡುರಸ್ತೆಯಲ್ಲೇ ಬಸ್ ಅಡ್ಡಗಟ್ಟಿ ರೌಡಿಸಂ: ಮಹಿಳಾ ಪ್ರಯಾಣಿಕರ ಮೇಲೆ ಮಾರಣಾಂತಿಕ ಹಲ್ಲೆ, ಇಬ್ಬರ ಸ್ಥಿತಿ ಗಂಭೀರ

ಕಾಕಿನಾಡದಲ್ಲಿ ಸೀಟು ವಿಚಾರಕ್ಕೆ ಶುರುವಾದ ಸಣ್ಣ ಜಗಳ ಭೀಕರ ಹಲ್ಲೆಯಲ್ಲಿ ಅಂತ್ಯಗೊಂಡಿದೆ. ಮಹಿಳೆಯೊಬ್ಬಳು ಕರೆ ಮಾಡಿದ ಕಾರಣ, ಆಕೆಯ ಪತಿ 30 ಜನರ ಗ್ಯಾಂಗ್‌ನೊಂದಿಗೆ ಬಸ್ ಅಡ್ಡಗಟ್ಟಿ ಮಹಿಳಾ ಪ್ರಯಾಣಿಕರ ಮೇಲೆ ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಆಂಧ್ರದಲ್ಲಿ ನಡುರಸ್ತೆಯಲ್ಲೇ ಬಸ್ ಅಡ್ಡಗಟ್ಟಿ ರೌಡಿಸಂ: ಮಹಿಳಾ ಪ್ರಯಾಣಿಕರ ಮೇಲೆ ಮಾರಣಾಂತಿಕ ಹಲ್ಲೆ, ಇಬ್ಬರ ಸ್ಥಿತಿ ಗಂಭೀರ
ಬಸ್
ನಯನಾ ರಾಜೀವ್
|

Updated on: Oct 18, 2026 | 12:59 PM

Share

ಕಾಕಿನಾಡ, ಅಕ್ಟೋಬರ್ 18: ಸರ್ಕಾರಿ ಬಸ್‌ನಲ್ಲಿ ಸೀಟು ಬಿಡುವ ವಿಚಾರಕ್ಕೆ ಶುರುವಾದ ಸಣ್ಣ ಜಗಳವೊಂದು ಮಾರಣಾಂತಿಕ ಹಲ್ಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ಯಲೇಶ್ವರಂ ಮಂಡಲದ ಚಿನ್ನಂಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆಯೊಬ್ಬರು ಕರೆ ಮಾಡಿ ಹೇಳಿದ್ದಕ್ಕೆ ಆಕೆಯ ಪತಿ ಸುಮಾರು 30 ಜನರ ಗ್ಯಾಂಗ್‌ನೊಂದಿಗೆ ಬಂದು, ಬಸ್ ಅಡ್ಡಗಟ್ಟಿ ಮಹಿಳಾ ಪ್ರಯಾಣಿಕರ ಮೇಲೆ ರಾಡ್ ಹಾಗೂ ದೊಣ್ಣೆಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಕ್ಷಣವೇ ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಮಹಿಳೆಯರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸೀಟಿಗಾಗಿ ಆರಂಭವಾದ ಕಿತ್ತಾಟ: ತುನಿಯಿಂದ ರಾಜಮಂಡ್ರಿಗೆ ತೆರಳುತ್ತಿದ್ದ ಆರ್‌ಟಿಸಿ (RTC) ಬಸ್‌ನಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ವಾಗ್ವಾದ ನಡೆದಿದೆ. ಸಿರಿಪುರಂ ಗ್ರಾಮದ ಮಹಿಳೆಯೊಬ್ಬರು ರಾಜಮಂಡ್ರಿಗೆ ತೆರಳುತ್ತಿದ್ದ ಮಹಿಳೆಯರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾರೆ. ಮಾತಿಗೆ ಮಾತು ಬೆಳೆದಾಗ, ಸಿರಿಪುರಂ ಮಹಿಳೆ ತನ್ನ ಪತಿಗೆ ಫೋನ್ ಮಾಡಿ ಬಸ್‌ನಲ್ಲಿ ತನ್ನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎಂದು ಸುಳ್ಳು ದೂರು ಹೇಳಿದ್ದಾಳೆ.

ಪತ್ನಿಯ ಮಾತನ್ನು ಕೇಳಿ ಆಕ್ರೋಶಗೊಂಡ ಪತಿ, ತನ್ನ ಗ್ರಾಮದ ಸುಮಾರು 30 ಕ್ಕೂ ಹೆಚ್ಚು ಯುವಕರನ್ನು ಜತೆಗೂಡಿಸಿಕೊಂಡು ಚಿನ್ನಂಪೇಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗಾಗಿ ಹೊಂಚು ಹಾಕಿ ಕಾಯುತ್ತಿದ್ದ. ಬಸ್ ಚಿನ್ನಂಪೇಟೆಗೆ ತಲುಪುತ್ತಿದ್ದಂತೆ ಗ್ಯಾಂಗ್ ಏಕಾಏಕಿ ಬಸ್ ಒಳಗೆ ನುಗ್ಗಿದೆ. ಜಗಳವಾಡಿದ ರಾಜಮಂಡ್ರಿಯ ಮಹಿಳೆಯರು ಮತ್ತು ಅವರೊಂದಿಗಿದ್ದ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ರಾಡ್, ದೊಣ್ಣೆಗಳಿಂದ ಮನಬಂದಂತೆ ಬಡಿದಿದ್ದಾರೆ. ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಮತ್ತು ಮಹಿಳೆಯರ ಚೀರಾಟ, ಆಕ್ರಂದನ ಹೆದ್ದಾರಿಯುದ್ದಕ್ಕೂ ಕೇಳಿಬಂದಿದೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ

ದಾಳಿ ನಡೆಸಿದ ವ್ಯಕ್ತಿಗಳಲ್ಲಿ ಹಲವರು ಮದ್ಯ ಮತ್ತು ಗಾಂಜಾದಂತಹ ಅಮಲು ಪದಾರ್ಥಗಳನ್ನು ಸೇವಿಸಿದ್ದರು ಎಂದು ಸಂತ್ರಸ್ತರು ಹಾಗೂ ಪ್ರತ್ಯಕ್ಷದರ್ಶಿಗಳು ಗಂಭೀರವಾಗಿ ಆರೋಪಿಸಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು ತುರ್ತು ಸಹಾಯವಾಣಿ ‘112’ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಯಲೇಶ್ವರಂ ಠಾಣೆಯ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ದಾಳಿ ನಡೆಸಿದ ಮಹಿಳೆ, ಆಕೆಯ ಪತಿ ಹಾಗೂ ಪುಂಡರ ಗ್ಯಾಂಗ್ ಸ್ಥಳದಿಂದ ಕಾಲ್ಕಿತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಹಾಗೂ ಕಂಡಕ್ಟರ್ ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಯಲೇಶ್ವರಂ ಪೊಲೀಸರು ಕೊಲೆಯತ್ನ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಗಲಭೆ ಸೃಷ್ಟಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆದ್ದಾರಿಯ ಟೋಲ್ ಗೇಟ್ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ತಲೆಮರೆಸಿಕೊಂಡಿರುವ ಸಿರಿಪುರಂ ಮೂಲದ ದಂಪತಿ ಹಾಗೂ ದಾಳಿಕೋರ ಯುವಕರ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ