AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Bus Tragedy: ಕರ್ನೂಲ್​​ನಲ್ಲಿ ಬೆಂಕಿಗಾಹುತಿಯಾದ ಬಸ್​ಗೆ ಅತಿವೇಗ, ಅಪಾಯಕಾರಿ ಚಾಲನೆಗಾಗಿ ಬಿದ್ದಿತ್ತು 23 ಸಾವಿರ ರೂ. ದಂಡ

ಕರ್ನೂಲ್​ನಲ್ಲಿ ಬೆಂಕಿಗಾಹುತಿಯಾದ ಕಾವೇರಿ ಟ್ರಾವೆಲ್ಸ್​​ಗೆ ಸೇರಿದ ವೋಲ್ವೋ ಬಸ್(Volvo Bus) ವಿರುದ್ಧ ಸಾಕಷ್ಟು ದೂರುಗಳಿದ್ದವು. ಅತಿವೇಗ, ಅಪಾಯಕಾರಿ ಚಾಲನೆಗಾಗಿ 23 ಸಾವಿರ ದಂಡವೂ ಬಿದ್ದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಹೈದರಾಬಾದ್​ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಕರ್ನೂಲ್ ಬಳಿ ಬೈಕ್​ಗೆ ಡಿಕ್ಕಿ ಹೊಡೆದ ಬಳಿಕ ನಿಲ್ಲಿಸದೆ ಮುಂದೆ ಸಾಗಿದ ಪರಿಣಾಮ ಬೈಕ್​ನಿಂದಾಗಿ ಬೆಂಕಿ ತಗುಲಿತ್ತು.

Andhra Bus Tragedy: ಕರ್ನೂಲ್​​ನಲ್ಲಿ ಬೆಂಕಿಗಾಹುತಿಯಾದ ಬಸ್​ಗೆ ಅತಿವೇಗ, ಅಪಾಯಕಾರಿ ಚಾಲನೆಗಾಗಿ ಬಿದ್ದಿತ್ತು 23 ಸಾವಿರ ರೂ. ದಂಡ
ಸುಟ್ಟು ಕರಕಲಾದ ಬಸ್
ನಯನಾ ರಾಜೀವ್
|

Updated on: Oct 24, 2025 | 1:05 PM

Share
ಕರ್ನೂಲ್, ಅಕ್ಟೋಬರ್ 24: ಕರ್ನೂಲ್​ನಲ್ಲಿ ಬೆಂಕಿಗಾಹುತಿಯಾದ ಕಾವೇರಿ ಟ್ರಾವೆಲ್ಸ್​​ಗೆ ಸೇರಿದ ವೋಲ್ವೋ ಬಸ್(Volvo Bus) ವಿರುದ್ಧ ಸಾಕಷ್ಟು ದೂರುಗಳಿದ್ದವು. ಅತಿವೇಗ, ಅಪಾಯಕಾರಿ ಚಾಲನೆಗಾಗಿ 23 ಸಾವಿರ ದಂಡವೂ ಬಿದ್ದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಹೈದರಾಬಾದ್​ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಕರ್ನೂಲ್ ಬಳಿ ಬೈಕ್​ಗೆ ಡಿಕ್ಕಿ ಹೊಡೆದ ಬಳಿಕ ನಿಲ್ಲಿಸದೆ ಮುಂದೆ ಸಾಗಿದ ಪರಿಣಾಮ ಬೈಕ್​ನಿಂದಾಗಿ ಬೆಂಕಿ ತಗುಲಿತ್ತು.
ಬಸ್ ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನೋಂದಣಿಯಾಗಿದ್ದು, ತೆಲಂಗಾಣದಲ್ಲಿ ಅಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ವಾಹನದ ಫಿಟ್‌ನೆಸ್ ಮತ್ತು ಪರ್ಮಿಟ್‌ಗೆ ಸಂಬಂಧಿಸಿದ ಸಮಸ್ಯೆಗಳು ಒಡಿಶಾದ ವ್ಯಾಪ್ತಿಗೆ ಬರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಂದೇ ಬಸ್ ತೆಲಂಗಾಣದಲ್ಲಿ ಅತಿ ವೇಗ, ತಪ್ಪು ಬದಿಯ ಚಾಲನೆ, ಅಪಾಯಕಾರಿ ಚಾಲನೆಗಾಗಿ ಸುಮಾರು 23,000 ರೂ.ಗಳ ಬಹು ಇ-ಚಲನ್‌ಗಳನ್ನು ನೀಡಲಾಗಿತ್ತು ಎಂಬುದು ದಾಖಲೆಗಳಿಂದ ತಿಳಿದುಬಂದಿದೆ. ಈ ಕುರಿತು ಇಂಡಿಯಾ ಟುಡೆ ಮಾಹಿತಿ ಪ್ರಕಟಿಸಿದೆ.  ಹನ್ನೆರಡು ಪ್ರಯಾಣಿಕರು  ತುರ್ತು ನಿರ್ಗಮನದ ಮೂಲಕ ಪಾರಾಗಿದ್ದಾರೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮತ್ತಷ್ಟು ಓದಿ: Andhra Bus Tragedy: ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?ಸ್ಥಳದಲ್ಲಿದ್ದ ಜನರ ಪ್ರಕಾರ, ಬೆಂಕಿ ಬಸ್ಸಿನ ಮುಂಭಾಗದಲ್ಲಿ ಪ್ರಾರಂಭವಾಗಿ ವೇಗವಾಗಿ ಹರಡಿತು. ಬೆಂಕಿಯು ವಾಹನವನ್ನು ಆವರಿಸಿದ್ದರಿಂದ ಹಲವಾರು ಪ್ರಯಾಣಿಕರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೆಂಕಿಯ ಕಾರಣ ಮತ್ತು ಯಾವುದೇ ಸಂಭಾವ್ಯ ಸುರಕ್ಷತಾ ಲೋಪಗಳನ್ನು ನಿರ್ಧರಿಸಲು ವಿಧಿವಿಜ್ಞಾನ ಮತ್ತು ಯಾಂತ್ರಿಕ ಪರೀಕ್ಷೆ ಸೇರಿದಂತೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಹೇಳುವಂತೆ ಬೆಂಕಿ ಎಷ್ಟು ಬೇಗನೆ ಹರಡಿತೆಂದರೆ, ಹೆಚ್ಚಿನ ಪ್ರಯಾಣಿಕರು ಏನಾಗುತ್ತಿದೆ ಎಂದು ಅರಿತುಕೊಳ್ಳುವ ಮೊದಲೇ ಬೆಂಕಿಯಲ್ಲಿ ಬೆಂದುಹೋದರು. ಕೆಲವರು ಸುಟ್ಟಗಾಯಗಳೊಂದಿಗೆ ಸಾವನ್ನಪ್ಪಿದ್ದಾರೆ, ಇನ್ನು ಕೆಲವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್