ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ, ಚಂದ್ರಬಾಬು ನಾಯ್ಡು ಗಂಭೀರ ಆರೋಪ

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾದ ಲಡ್ಡುಗಳ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿದೆ. ಹಿಂದಿನ ವೈಎಸ್​ಆರ್​ ಕಾಂಗ್ರೆಸ್​ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿತ್ತು ಎಂದು ಅವರು ಆರೋಪಿಸಿದ್ದಾರೆ.

ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ, ಚಂದ್ರಬಾಬು ನಾಯ್ಡು ಗಂಭೀರ ಆರೋಪ
ಚಂದ್ರಬಾಬು ನಾಯ್ಡುImage Credit source: PTI
Follow us
ನಯನಾ ರಾಜೀವ್
|

Updated on:Sep 19, 2024 | 8:51 AM

ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು(Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ನೀಡಲಾಗುವ ಪ್ರಸಾದ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಅವರು ಹೇಳಿದರು.

ಕಳೆದ ಚುನಾವಣೆಯಲ್ಲಿ ಟಿಡಿಪಿ ನೇತೃತ್ವದ ಸರ್ಕಾರ ಜನಸೇನಾ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತ್ತು. ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ನಿರಾಕರಿಸಿದೆ ಮತ್ತು ಅವುಗಳನ್ನು ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಕರೆದಿದೆ. ತಿರುಮಲ ದೇವಸ್ಥಾನದ ಪಾವಿತ್ರ್ಯತೆ ಮತ್ತು ಆಡಳಿತದ ಬಗ್ಗೆ ಈ ನಿಲುವು ಚರ್ಚೆಯನ್ನು ಹುಟ್ಟುಹಾಕಿದೆ. ಕಳೆದ 5 ವರ್ಷಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಸಿಎಂ ನಾಯ್ಡು ಹೇಳಿದ್ದಾರೆ.

ಮತ್ತಷ್ಟು ಓದಿ: ತಿರುಮಲದ ಭಕ್ತರಿಗೆ ಸಿಹಿ ಸುದ್ದಿ; ಇನ್ನಷ್ಟು ಹೆಚ್ಚಾಗಲಿದೆ ತಿರುಪತಿ ಲಡ್ಡು ರುಚಿ

ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು, ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ, ದೇವಾಲಯದ ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ, ದೇವಾಲಯವನ್ನು ಉಳಿಸಿಕೊಳ್ಳಲು ಸರ್ಕಾರವು ಪ್ರಯತ್ನಿಸುತ್ತಿದೆ ಎಂದರು.

ಈ ಆರೋಪಗಳ ನಡುವೆ, ಹಿರಿಯ ವೈಎಸ್‌ಆರ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ವೈವಿ ಸುಬ್ಬಾ ರೆಡ್ಡಿ ಅವರು ನಾಯ್ಡು ಅವರ ಹೇಳಿಕೆಯನ್ನು ದೇವಾಲಯದ ಪವಿತ್ರತೆ ಮತ್ತು ಅಸಂಖ್ಯಾತ ಹಿಂದೂಗಳ ನಂಬಿಕೆಯ ಮೇಲಿನ ದಾಳಿ ಎಂದು ಬಣ್ಣಿಸಿದ್ದಾರೆ.

ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರೆಡ್ಡಿ ಆರೋಪಿಸಿದರು. ರಾಜಕೀಯ ಲಾಭಕ್ಕಾಗಿ ಚಂದ್ರಬಾಬು ನಾಯ್ಡು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:50 am, Thu, 19 September 24

ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?