AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ನಿವಾಸಕ್ಕೆ ಭೇಟಿ ನೀಡಿದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಚಂದ್ರಶೇಖರ್ ರಾವ್ ಅವರನ್ನು ಇಂದು ಭೇಟಿಯಾದರು. ಇತ್ತೀಚೆಗಷ್ಟೇ ಸೊಂಟ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕೆಸಿಆರ್​ ಅನ್ನು ಕಳೆದ ತಿಂಗಳು ಭೇಟಿಯಾಗಲು ಬಯಸಿದ್ದರು. ಆದರೆ ಅವರ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಬರಲು ಸಾಧ್ಯವಾಗಲಿಲ್ಲ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಸಿಆರ್ ಅವರ ಆರೋಗ್ಯ ಸ್ಥಿತಿಯನ್ನು ಸಿಎಂ ಜಗನ್ ವಿಚಾರಿಸಿದ್ದರು.

ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ನಿವಾಸಕ್ಕೆ ಭೇಟಿ ನೀಡಿದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ
ಜಗನ್​ ಮೋಹನ್​ ರೆಡ್ಡಿImage Credit source: Andhrajyothi
ನಯನಾ ರಾಜೀವ್
| Edited By: |

Updated on:Feb 14, 2024 | 3:14 PM

Share

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ(Jagan Mohan Reddy) ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಚಂದ್ರಶೇಖರ್ ರಾವ್ ಅವರನ್ನು ಇಂದು ಭೇಟಿಯಾದರು. ಇತ್ತೀಚೆಗಷ್ಟೇ ಸೊಂಟ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕೆಸಿಆರ್​ ಅನ್ನು ಕಳೆದ ತಿಂಗಳು ಭೇಟಿಯಾಗಲು ಬಯಸಿದ್ದರು. ಆದರೆ ಅವರ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಬರಲು ಸಾಧ್ಯವಾಗಲಿಲ್ಲ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಸಿಆರ್ ಅವರ ಆರೋಗ್ಯ ಸ್ಥಿತಿಯನ್ನು ಸಿಎಂ ಜಗನ್ ವಿಚಾರಿಸಿದ್ದರು.

ಡಿಸೆಂಬರ್ 8 ರಂದು ಫಾರ್ಮ್‌ಹೌಸ್‌ನಲ್ಲಿ ಜಾರಿ ಬಿದ್ದ ಕೆಸಿಆರ್ ಸೊಂಟದ ಮೂಳೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಕೆಸಿಆರ್ ಕುಟುಂಬಸ್ಥರು ಅವರನ್ನು ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ಕರೆದೊಯ್ದಿದ್ದರು.

ವೈದ್ಯರು ಪರೀಕ್ಷೆ ನಡೆಸಿ ಮೂಳೆ ಮುರಿದಿರುವುದು ಕಂಡು ಬಂದು ಆಪರೇಷನ್ ಮಾಡಿದ್ದಾರೆ. ಕೆಲಕಾಲ ಕೆಸಿಆರ್ ಯಶೋದಾ ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು.

ಕೆಸಿಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ತೆಲಂಗಾಣ ಸಚಿವರು, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ತೆಲುಗು ರಾಜ್ಯಗಳ ಹಲವು ಪ್ರಮುಖ ನಾಯಕರು, ಬಿಆರ್ ಎಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಕಳೆದ ತಿಂಗಳ 15ರಂದು ಚಿಕಿತ್ಸೆ ಬಳಿಕ ಕೆಸಿಆರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಮತ್ತಷ್ಟು ಓದಿ: ನನ್ನನ್ನು ನೋಡಲು ಆಸ್ಪತ್ರೆಗೆ ಬರಬೇಡಿ: ಬೆಂಬಲಿಗರಿಗೆ, ಅನುಯಾಯಿಗಳಿಗೆ ಕೆಸಿಆರ್ ಮನವಿ

ಬಂಜಾರಾ ಹಿಲ್ಸ್ ನಂದಿನಗರದಲ್ಲಿರುವ ಅವರ ಹಿಂದಿನ ನಿವಾಸಕ್ಕೆ ತೆರಳಿದ್ದರು. ಹೈದರಾಬಾದ್‌ಗೆ ಆಗಮಿಸಿದ ಎಪಿ ಸಿಎಂ ಜಗನ್‌ ಅವರನ್ನು ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿ ಬಿಆರ್‌ಎಸ್‌ ಮುಖಂಡರು ಹೂಗುಚ್ಚ ನೀಡಿ ಸ್ವಾಗತಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:09 pm, Thu, 4 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ