AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಮಹಿಳೆಯೊಬ್ಬಳ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್, 1 ಮೇಣದ ಬತ್ತಿ ಹೊರತೆಗೆದ ವೈದ್ಯರು

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆಯ ಪೆಟ್ಲೂರಿವಾರಿಪಾಲೆಂನ ಮಹಿಳೆಯೊಬ್ಬಳ ಹೊಟ್ಟೆಯಲ್ಲಿ ನಾನಾ ವಸ್ತುಗಳಿದ್ದುದು ಪತ್ತೆಯಾಗಿದೆ. ನರಸರಾವ್ ಪೇಟೆಯ ಆಸ್ಪತ್ರೆಯೊಂದರ ವೈದ್ಯರು ಈಕೆಯ ಹೊಟ್ಟೆಯಿಂದ 14 ಪೆನ್ನು, 5 ಮರದ ಸ್ಪೂನು ಮತ್ತು 1 ಮೇಣದ ಬತ್ತಿಯನ್ನು ಹೊರತೆಗೆದಿದ್ದಾರೆ. ಮಾನಸಿಕ ಸಮಸ್ಯೆಯಲ್ಲಿದ್ದ ಈ ಮಹಿಳೆಯು ಖಿನ್ನತೆಯಲ್ಲಿದ್ದಾಗ ಈ ವಸ್ತುಗಳನ್ನು ನುಂಗಿರುವ ಶಂಕೆ ಇದೆ.Andhra woman, pens found in stomach, narasarao pet, ಆಂಧ್ರ ಮಹಿಳೆಯ ಹೊಟ್ಟೆಯಲ್ಲಿ ಪೆನ್ನುಗಳು, ನರಸರಾವ್ ಪೇಟೆ, ಹೊಟ್ಟೆಯಲ್ಲಿ ಪೆನ್ನು ಸ್ಪೂನು ಮೇಣದ ಬತ್ತಿ

ಆಂಧ್ರದ ಮಹಿಳೆಯೊಬ್ಬಳ ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್, 1 ಮೇಣದ ಬತ್ತಿ ಹೊರತೆಗೆದ ವೈದ್ಯರು
ಹೊಟ್ಟೆಯಿಂದ 14 ಪೆನ್ನು, 5 ಸ್ಪೂನ್, 1 ಮೇಣದ ಬತ್ತಿ ಹೊರತೆಗೆದ ವೈದ್ಯರುImage Credit source: TV9 Telugu
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 07, 2026 | 2:43 PM

Share

ವಿಜಯನಗರಂ, ಸೆಪ್ಟೆಂಬರ್ 7: ವಿಚಿತ್ರ ವೈದ್ಯಕೀಯ ಘಟನೆಯೊಂದರಲ್ಲಿ, 33 ವರ್ಷದ ಮಹಿಳೆಯೊಬ್ಬಳ ಹೊಟ್ಟೆಯಿಂದ 14 ಪೆನ್ನುಗಳು, 5 ಮರದ ಚಮಚಗಳು (ಸ್ಪೂನ್) ಮತ್ತು ಒಂದು ಮೇಣದಬತ್ತಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ನರಸರಾವ್ ಪೇಟೆಯಲ್ಲಿ ಈ ಘಟನೆ ನಡೆದಿದೆ.

ಪೆಟ್ಲೂರಿವಾರಿಪಾಲೆಂ ಗ್ರಾಮದ ಈ ಮಹಿಳೆಗೆ ತೀವ್ರ ಎದೆ ನೋವು ಮತ್ತು ಹೊಟ್ಟೆ ನೋವು ಬಂದಿರುತ್ತದೆ. ಈಕೆಯನ್ನು ಕುಟುಂಬಸ್ಥರು ನರಸರಾವ್ ಪೇಟೆಯ ‘ಮಾತಾಶ್ರೀ ಆಸ್ಪತ್ರೆ’ಗೆ ದಾಖಲಿಸಿದರು. ಎಕ್ಸ್‌ರೇ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವರದಿಗಳನ್ನು ನೋಡಿದಾಗ ಆಕೆಯ ಜೀರ್ಣಾಶಯದಲ್ಲಿ ಅಸಾಧಾರಣ ವಸ್ತುಗಳಿರುವುದು ಪತ್ತೆಯಾಯಿತು.

ಇದನ್ನೂ ಓದಿ: ವಿಮಾನ ಹಾರುವಾಗ ಎಂಜಿನ್ ಆಯಿಲ್ ದಿಢೀರ್ ಕುಸಿತ; ಕೊಚ್ಚಿಗೆ ವಾಪಸ್ಸಾದ ಏರ್ ಇಂಡಿಯಾ ವಿಮಾನ; ತಪ್ಪಿದ ದೊಡ್ಡ ಅನಾಹುತ

ವೈದ್ಯರು ತಕ್ಷಣ ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆ (Laparoscopic surgery) ನಡೆಸಿ, 14 ಪ್ಲಾಸ್ಟಿಕ್ ಪೆನ್ನುಗಳು, 5 ಮರದ ಚಮಚಗಳು ಹಾಗೂ 1 ಮೇಣದಬತ್ತಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ನೋವಿಗೆ ಕಾರಣ: ಹೊಟ್ಟೆಯಲ್ಲಿದ್ದ ಒಂದು ಪೆನ್ನಿನ ಕ್ಯಾಪ್ ತೆಗೆದಿದ್ದರಿಂದ ಅದು ಒಳಭಾಗದಲ್ಲಿ ಚುಚ್ಚಿ ತೀವ್ರವಾದ ನೋವು ಕಾಣಿಸಿಕೊಂಡಿರಬಹುದು ಎಂದು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ತಿಳಿಸಿದ್ದಾರೆ.

ಮಾನಸಿಕ ಸ್ಥಿತಿ: ಮಹಿಳೆಯ ತಂದೆ ನೋಮುಲ ಹನುಮಂತರಾವ್ ಅವರ ಪ್ರಕಾರ, ಆಕೆ ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುತ್ತಾಳೆ. ಎರಡು ತಿಂಗಳ ಹಿಂದೆಯಷ್ಟೇ ಪತಿ ಆಕೆಗೆ ವಿಚ್ಛೇದನ ನೀಡಿರುತ್ತಾನೆ. ಇದೇ ಮಾನಸಿಕ ಖಿನ್ನತೆ ಮತ್ತು ಒತ್ತಡದಿಂದ ಆಕೆ ಈ ವಸ್ತುಗಳನ್ನು ನುಂಗಿರಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ವೈದ್ಯರ ಮೇಲೆ ಹಲ್ಲೆ ಎಸಗುವ ರಾಜಕಾರಣಿಗಳನ್ನು ಸುಮ್ಮನೆ ಬಿಡಬಾರದು, ಕಸ್ಟಡಿಗೆ ತೆಗೆದುಕೊಳ್ಳಬೇಕು: ಸುಪ್ರೀಂಕೋರ್ಟ್

ಪ್ರಸ್ತುತ ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್