ರಂಜಾನ್ ಸಂಭ್ರಮದಲ್ಲಿ ಕೈ ಕುಲುಕುವಂತಿಲ್ಲ, ಆಲಿಂಗಿಸುವಂತಿಲ್ಲ: ಆಂಧ್ರ ಸರ್ಕಾರದಿಂದ ಮಾರ್ಗಸೂಚಿ

ಈದ್-ಉಲ್-ಫಿತರ್ ದಿನ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ. ಹಾಗೂ ಈದ್ಗಾ, ಬಹಿರಂಗ ಪ್ರದೇಶಗಳಲ್ಲಿ‌ ಪ್ರಾರ್ಥನೆ‌ ಮಾಡುವುದಕ್ಕೆ‌ ನಿಷೇಧ ಹೇರಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ‌ ಸಲ್ಲಿಸಲು ಸೂಚನೆ ನೀಡಲಾಗಿದೆ.

ರಂಜಾನ್ ಸಂಭ್ರಮದಲ್ಲಿ ಕೈ ಕುಲುಕುವಂತಿಲ್ಲ, ಆಲಿಂಗಿಸುವಂತಿಲ್ಲ: ಆಂಧ್ರ ಸರ್ಕಾರದಿಂದ ಮಾರ್ಗಸೂಚಿ
ರಂಜಾನ್
Follow us
ಆಯೇಷಾ ಬಾನು
|

Updated on: May 12, 2021 | 8:04 AM

ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಂಜಾನ್ ಆಚರಣೆಗೆ ಆಂಧ್ರ ಸರ್ಕಾರ ಮಹತ್ವದ ಆದೇಶ ಜಾರಿ ಮಾಡಿದೆ. ರಾಜ್ಯದ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ.

ನಿನ್ನೆ ನಡೆದ ರಾಜ್ಯ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು ತೆಲಂಗಾಣದಲ್ಲಿ ಮೇ 12 ಅಂದ್ರೆ ಇಂದಿನಿಂದ 10 ದಿನಗಳ ಲಾಕ್ಡೌನ್ ಜಾರಿಯಾಗಿದೆ. ಇಂದಿನಿಂದ 10 ದಿನಗಳ ಕಾಲ ಮುಂಜಾನೆ 6ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಅಗತ್ಯವಸ್ತುಗಳು ಸಿಗಲಿವೆ. ಹೀಗಾಗಿ ಈಗ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಬರುತ್ತಿದ್ದು ಈ ಬಗ್ಗೆ ಕೆಲವು ನಿಯಮಾವಳಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈದ್-ಉಲ್-ಫಿತರ್ ದಿನ ಮಸೀದಿಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ. ಹಾಗೂ ಈದ್ಗಾ, ಬಹಿರಂಗ ಪ್ರದೇಶಗಳಲ್ಲಿ‌ ಪ್ರಾರ್ಥನೆ‌ ಮಾಡುವುದಕ್ಕೆ‌ ನಿಷೇಧ ಹೇರಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ‌ ಸಲ್ಲಿಸಲು ಸೂಚನೆ ನೀಡಲಾಗಿದೆ. ಒಂದೇ ಕಡೆ 50 ಜನರಿಗಿಂತ ಹೆಚ್ಚಿನ ಜನರು ಸೇರಬಾರದು, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ ಧರಿಸುವುದು ಕಡ್ಡಾಯ. ಬೆಳಿಗ್ಗೆ 6 ರಿಂದ‌12 ಗಂಟೆಯ ವರೆಗೆ 2 ಹಂತಗಳಲ್ಲಿ ಪ್ರಾರ್ಥನೆ ಮಾಡಬಹುದು. ಇನ್ನು ಮುಖ್ಯವಾಗಿ ಶುಭಾಶಯ ಹೇಳಲು ಕೈ ಕುಲುಕುವುದು, ಆಲಿಂಗನ‌ ಮಾಡುವುದನ್ನು ನಿಷೇಧಿಸಲಾಗಿದೆ.

ಸೋಂಕಿತ ಭೀಕರತೆ ಹೆಚ್ಚಿರುವುದರಿಂದ ವೃದ್ಧರು, ಮಕ್ಕಳು, ಅನಾರೋಗ್ಯಕ್ಕೆ ಒಳಗಾದವರು ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು. ಮಾಸ್ಕ್ ಧರಿಸದಿದ್ದರೆ ಅನುಮತಿ‌ ಇಲ್ಲ, ಸ್ಯಾನಿಟೈಸರ್, ಸಾಬೂನಿನಿಂದ‌ ಕೈ ತೊಳೆದು ಶುಭ್ರತೆ ಪಾಲಿಸಬೇಕು. ಮಸೀದ್ಗಳ‌ ನಿರ್ವಾಹಕರು‌ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು, ಕಮಿಷನರ್ಗಳು ಕೊವಿಡ್ ನಿಯಮ‌ ಪಾಲನೆ‌ ಬಗ್ಗೆ ಪರಿಶೀಲನೆ‌ ಮಾಡಬೇಕೆಂದು ಆಂಧ್ರಪ್ರದೇಶ ಸರಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: Ramadan Eid 2021 Date: ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್