ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಶಾಲೆಗಳ ಪುನರಾರಂಭ: ಎಲ್ಲಿ?

ಸೆಪ್ಟೆಂಬರ್ 5, ಶಿಕ್ಷಕರ ದಿನದಂದು ಶಾಲೆಗಳ ಪುನರಾರಂಭ: ಎಲ್ಲಿ?

ಅಮರಾವತಿ: ಕೊರೊನಾ ಹೆಮ್ಮಾರಿಯಿಂದಾಗಿ ಶಾಲೆ ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಇದನ್ನು ಮನಗಂಡು ಆಂಧ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಪುನರಾರಂಭಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆದರೆ ಸೆಪ್ಟೆಂಬರ್ 5 ಸಮೀಪಿಸಿದಾಗ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನಡೆಸಿದ ಶಿಕ್ಷಣ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, […]

Ayesha Banu

| Edited By:

Jul 23, 2020 | 12:58 PM

ಅಮರಾವತಿ: ಕೊರೊನಾ ಹೆಮ್ಮಾರಿಯಿಂದಾಗಿ ಶಾಲೆ ಕಾಲೇಜುಗಳು ಬಂದ್ ಆಗಿವೆ. ವಿದ್ಯಾರ್ಥಿಗಳ ಭವಿಷ್ಯ ಅಂಧಕಾರದಲ್ಲಿದೆ. ಇದನ್ನು ಮನಗಂಡು ಆಂಧ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಶಿಕ್ಷಕರ ದಿನವಾದ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಪುನರಾರಂಭಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಆದರೆ ಸೆಪ್ಟೆಂಬರ್ 5 ಸಮೀಪಿಸಿದಾಗ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನಡೆಸಿದ ಶಿಕ್ಷಣ ಪರಿಶೀಲನಾ ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸರ್ಕಾರವು ಸೆಪ್ಟೆಂಬರ್ 5 ರಂದು ಶಾಲೆಗಳನ್ನು ಪುನರಾರಂಭಿಸಲು ದಿನಾಂಕವನ್ನು ನಿಗದಿಪಡಿಸಿದ್ದರೂ, ಆ ವೇಳೆ ಯಾವ ರೀತಿಯ ಪರಿಸ್ಥಿತಿ ಇದೆ ಎಂಬುದನ್ನು ಆಧರಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.

ಶಾಲೆಗಳು ಮತ್ತೆ ತೆರೆಯುವ ತನಕ, ಮಧ್ಯಾಹ್ನದ ಊಟಕ್ಕೆ ಬದಲಾಗಿ ಪಡಿತರವನ್ನು ವಿದ್ಯಾರ್ಥಿಗಳ ಮನೆಗಳಿಗೆ ಪೂರೈಸಲಾಗುವುದು ಎಂದು ಅವರು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು (ಎಲ್‌ಕೆಜಿ ಮತ್ತು ಯುಕೆಜಿ) ಪರಿಚಯಿಸಲಾಗುವುದು ಮತ್ತು ಕಿರಿಯ ಸರ್ಕಾರಿ ಕಾಲೇಜುಗಳಲ್ಲಿ ಎಪಿ ಇಎಮ್‌ಸೆಟ್ (AP EAMCET), ಜೆಇಇ (JEE), ಐಐಐಟಿ(IIIT) ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

Follow us on

Related Stories

Most Read Stories

Click on your DTH Provider to Add TV9 Kannada