AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಯುವಂತೆ ಮಾಡಿದ್ದಕ್ಕೆ ಪೊಲೀಸರಿಗೆ ಬೈದು ವಿವಾದ ಸೃಷ್ಟಿಸಿದ ಆಂಧ್ರ ಸಚಿವರ ಪತ್ನಿ

ಆಂಧ್ರಪ್ರದೇಶ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಪತ್ನಿ ಹರಿತಾ ರೆಡ್ಡಿ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ತನ್ನನ್ನು ಕಾಯುವಂತೆ ಮಾಡಿದ್ದಕ್ಕೆ ಸಬ್​ಇನ್ಸ್​ಪೆಕ್ಟರ್​ಗೆ ಕೆಟ್ಟದಾಗಿ ಮಾತನಾಡಿ ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅನ್ನಮಯ್ಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೂರ್ಣ ಘಟನೆ ಬಗ್ಗೆ ಮಾಹಿತಿ ಇಲ್ಲಿದೆ.

ಕಾಯುವಂತೆ ಮಾಡಿದ್ದಕ್ಕೆ ಪೊಲೀಸರಿಗೆ ಬೈದು ವಿವಾದ ಸೃಷ್ಟಿಸಿದ ಆಂಧ್ರ ಸಚಿವರ ಪತ್ನಿ
ಹರಿತಾ ರೆಡ್ಡಿImage Credit source: India Today
ನಯನಾ ರಾಜೀವ್
|

Updated on:Jul 02, 2024 | 9:32 AM

Share

30 ನಿಮಿಷಗಳ ಕಾಲ ಕಾಯಿಸಿದ್ದಕ್ಕೆ ಆಂಧ್ರಪ್ರದೇಶ(Andhra Pradesh)ದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ(Mandipalli Ramprasad Reddy )ಪತ್ನಿ ಹರಿತಾ ನಡು ರಸ್ತೆಯಲ್ಲೇ ನಿಲ್ಲಿಸಿ ಸಬ್​ಇನ್​ಸ್ಪೆಕ್ಟರ್​ಗೆ ಬೈದಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಅವರು ಕಾರ್ಯಕ್ರಮವೊಂದಕ್ಕೆ ತೆರಳಬೇಕಿತ್ತು, ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತು ತಾನು 30 ನಿಮಿಷಗಳಿಂದ ಕಾಯುತ್ತಿದ್ದೇನೆ ನೀವು ಏಕೆ ತಡವಾಗಿ ಬಂದಿದ್ದು ಎಂದು ಕೇಳುತ್ತಾ ಕ್ಲಾಸ್ ತೆಗೆದುಕೊಂಡಿದ್ದರು.

ಪೊಲೀಸ್​ ಅಧಿಕಾರಿಗೆ ನೂರಾರು ಪ್ರಶ್ನೆಗಳ ಸುರಿಮಳೆಯನ್ನೇ ಗೈದಿದ್ದಾರೆ, ಅವರು ನಡವಳಿಕೆ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇನ್ನೂ ನಿಮಗೆ ಬೆಳಗಾಗಿರಲಿಲ್ಲವೇ?, ನೀವು ಮದುವೆ ಮನೆಗೆ ಬಂದಿದ್ದಾ ಅಥವಾ ಕೆಲಸ ಮಾಡೋಕೆ ಬಂದಿರೋದ, ನಿಮಗಾಗಿ ಅರ್ಧ ಗಂಟೆ ಕಾಯಬೇಕಾಯಿತು, ನಿಮಗೆ ಯಾರು ಸಂಬಳ ಕೊಡುತ್ತಾರೆ ಸರ್ಕಾರ ಅಥವಾ ವೈಎಸ್​ಆರ್​ ಕಾಂಗ್ರೆಸ್​ ಆ ಎಂದು ಗದರಿಸಿದ್ದರು.

ವಿಡಿಯೋದ ಕೊನೆಯಲ್ಲಿ ಸಬ್​ ಇನ್​ಸ್ಪೆಕ್ಟರ್​ ಹರಿತಾ ರೆಡ್ಡಿಯವರಿಗೆ ಸೆಲ್ಯೂಟ್ ಹೊಡೆದು, ಬೆಂಗಾವಲು ಪಡೆಯನ್ನು ಮುಂದೆ ಹೋಗುವಂತೆ ಸೂಚನೆ ನೀಡಿದರು. ಆದರೆ ಹರಿತಾ ರೆಡ್ಡಿಗೆ ಬೆಂಗಾವಲಾಗಿ ಹೋಗಲು ನಿರಾಕರಿಸಿದರು.

ಮತ್ತಷ್ಟು ಓದಿ: Lok Sabha Session: ಮೋದಿ, ಬಿಜೆಪಿ, ಆರ್‌ಎಸ್‌ಎಸ್ ಎಂದರೆ ಹಿಂದೂ ಸಮಾಜವಲ್ಲ; ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಇದಕ್ಕೆ ವೈಎಸ್​ಆರ್​ ಕಾಂಗ್ರೆಸ್​ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ್ದು, ಸಚಿವರ ಪತ್ನಿಗೂ ರಾಜ ಮರ್ಯಾದಎ ಬೇಕು, ಪೊಲೀಸರಿಗೆ ಜೀತದಾಳಿನಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ವಿಚಾರ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ರಾಮಪ್ರಸಾದ್ ರೆಡ್ಡಿಗೆ ಕರೆ ಮಾಡಿ ವಿವರಣೆ ಕೇಳಿದ್ದಾರೆ. ಈಗ ತಾನೆ ಸಚಿವ ಸ್ಥಾನ ಸಿಕ್ಕಿದೆ, ಈ ರೀತಿ ಮಾಡುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ.

ವೈಎಸ್​ಆರ್​ ಕಾಂಗ್ರೆಸ್​ ಹಂಚಿಕೊಂಡ ವಿಡಿಯೋ

ತಮ್ಮ ಪತ್ನಿ ಹರಿತಾ ರೆಡ್ಡಿ ಪೊಲೀಸರೊಂದಿಗೆ ನಡೆದುಕೊಂಡಿರುವ ರೀತಿ ನೋವಿನಿಂದ ಕೂಡಿದ್ದು, ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ ಎಂದು ರಾಮ ಪ್ರಸಾದ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:32 am, Tue, 2 July 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್