AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh Accident: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ದುರ್ಮರಣ

ಆಂಧ್ರಪ್ರದೇಶ(Andhra Pradesh) ದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್​ಗೆ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆ ಎದುರಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

Andhra Pradesh Accident: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ 7 ಮಂದಿ ದುರ್ಮರಣ
ಅಪಘಾತ
ನಯನಾ ರಾಜೀವ್
|

Updated on: May 15, 2023 | 7:53 AM

Share

ಆಂಧ್ರಪ್ರದೇಶ(Andhra Pradesh) ದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್​ಗೆ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆ ಎದುರಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಏಳು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.  ಇನ್ನು ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತರನ್ನು ತಾಡಿಪತ್ರಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ವಾಹನದಲ್ಲಿ 11 ಮಂದಿ ಪ್ರಯಾಣಿಕರಿದ್ದರು. ಈ ರಸ್ತೆ ಅಪಘಾತದ ಸಂಪೂರ್ಣ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರತ್ಯೇಕ ಘಟನೆಯಲ್ಲಿ, ಕಾಕಿನಾಡ ಜಿಲ್ಲೆಯ ತಲ್ಲರೇವು ಬೈಪಾಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಆಟೋಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಭಾನುವಾರ ತಾಳರೇವು ಬೈಪಾಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಸ್ ಅತಿವೇಗದಲ್ಲಿ ಬಂದಿದ್ದರಿಂದ ಆಟೋ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಖಾಸಗಿ ಬಸ್ ಡಿಕ್ಕಿ ಹೊಡೆದಾಗ ಆಟೋದಲ್ಲಿ ಎಂಟು ಮಂದಿ ಇದ್ದರು ಎನ್ನಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ