AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ನವ ದಂಪತಿ ಸೇರಿ ಒಟ್ಟು 5 ಮಂದಿ ಸಾವು

ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಬುಧವಾರ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮುಂಜಾನೆ 5.15ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಅನ್ನು ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಗಮನಿಸದೇ ಇದ್ದುದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ನವ ದಂಪತಿ ಸೇರಿ ಒಟ್ಟು 5 ಮಂದಿ ಸಾವು
Image Credit source: India.com
ನಯನಾ ರಾಜೀವ್
|

Updated on: Mar 06, 2024 | 11:39 AM

Share

ನಿಂತಿದ್ದ ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಳದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ನಂದ್ಯಾಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೆ ರಘುವೀರಾ ರೆಡ್ಡಿ ಮಾತನಾಡಿ, ಕುಟುಂಬವು ತಿರುಪತಿಯ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿತ್ತು ಮತ್ತು ಬುಧವಾರ ಮುಂಜಾನೆ 5.15 ರ ಸುಮಾರಿಗೆ ನಲ್ಲಗಟ್ಲ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

ಟ್ರಕ್​ ಚಾಲಕ ಗಾಡಿಯನ್ನು ರಸ್ತೆಯ ಬದಿಗೆ ನಿಲ್ಲಿಸಿದ್ದರು, ಅದೇ ಸಮಯದಲ್ಲಿ ಕಾರೊಂದು ಬಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಫೆಬ್ರವರಿ 29ರಂದು ವಿವಾಹವಾಗಿದ್ದರು, ಕುಟುಂಬವು ಸಿಕಂದರಾಬಾದ್‌ನ ಅಲ್ವಾಲ್ ಪ್ರದೇಶದಕ್ಕೆ ಸೇರಿದೆ. ವಾರದ ಹಿಂದೆ ವಿವಾಹವಾಗಿದ್ದ ಬಾಲಕಿರಣ್ ಮತ್ತು ಕಾವ್ಯ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬಾಲಕಿರಣ್‌ನ ತಾಯಿ ಮಂತ್ರಿ ಲಕ್ಷ್ಮಿ ಮತ್ತು ತಂದೆ ಮಂತ್ರಿ ರವೀಂದರ್ ಮತ್ತು ಕಿರಿಯ ಸಹೋದರ ಉದಯ್ ಕೂಡ ಸಾವನ್ನಪ್ಪಿದ್ದಾರೆ.

ಮುಂಜಾನೆ 5.15ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್ ಅನ್ನು ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಗಮನಿಸದೇ ಇದ್ದುದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ನಂತರ, ಪೊಲೀಸರು ಸಂತ್ರಸ್ತರೊಬ್ಬರ ಮೊಬೈಲ್ ಫೋನ್‌ನಿಂದ ಅವರ ಸಂಬಂಧಿಕರಿಗೆ ಕರೆ ಮಾಡಿ, ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಮತ್ತಷ್ಟು ಓದಿ: ಮೈಸೂರು: ವಿಡಿಯೋ ಕಾಲ್ ಮಾಡಿ ಹೆಂಡತಿ ಜೊತೆ ಮಾತನಾಡುತ್ತಿದ್ದ ವ್ಯಕ್ತಿಯ ಮೇಲೆ ರೈಲು ಹರಿದು ಸಾವು

ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೈದರಾಬಾದ್ ಮೂಲದ ಕುಟುಂಬ ತಿರುಪತಿಯಿಂದ ತಿರುಮಲ ದೇವಸ್ಥಾನದಲ್ಲಿ ದರ್ಶನ ಮುಗಿಸಿ ಮನೆಗೆ ಮರಳುತ್ತಿತ್ತು.

ಹರ್ಯಾಣ: ಕಾರಿಗೆ ಬಸ್​ ಡಿಕ್ಕಿ, ಐವರು ಸ್ಥಳದಲ್ಲೇ ಸಾವು ಹರ್ಯಾಣದ ರೇವಾರಿಯಲ್ಲಿ ಹರ್ಯಾಣ ಬಸ್​ ಒಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಐವರು ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಮಹೇಂದ್ರಗಢ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬಲೆನೊ ಕಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಐವರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಅವರು ಹರ್ಯಾಣದ ಚಾರ್ಕಿ ದಾದ್ರಿ ನಿವಾಸಿಗಳಾಗಿದ್ದರು.

ದೆಹಲಿಯ ಬದರ್‌ಪುರದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ, 3 ಮಂದಿ ಸಾವು

ದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ಬರುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿ 12.48 ಕ್ಕೆ ಈ ಘಟನೆ ನಡೆದಿದೆ. ಆಲ್ಟೊದಲ್ಲಿದ್ದ ಏಳು ಮಂದಿ ಫರಿದಾಬಾದ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ದೆಹಲಿಗೆ ಹಿಂತಿರುಗುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ನಿಯಂತ್ರಣ ತಪ್ಪಿ ಬದರ್‌ಪುರ ಮೇಲ್ಸೇತುವೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಕರೆ ಬಂದ ನಂತರ ಅಪಘಾತದ ಬಗ್ಗೆ ಪೊಲೀಸರಿಗೆ ತಿಳಿಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ