ಆಂಧ್ರಪ್ರದೇಶ: ಹಸುಗಳನ್ನು ತುಂಬಿದ್ದ ಲಾರಿ ಪಲ್ಟಿ, ಚಾಲಕ, ಕ್ಲೀನರ್, 40 ಜಾನುವಾರುಗಳು ಸಾವು
ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ದನಗಳನ್ನು ಹೊತ್ತೊಯ್ಯುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ, ಕ್ಲೀನರ್ ಹಾಗೂ 40 ಜಾನುವಾರುಗಳು ಸಾವನ್ನಪ್ಪಿವೆ. ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದ್ದು, ಚಾಲಕ ಮತ್ತು ಕ್ಲೀನರ್ ಗುರುತು ಇನ್ನೂ ಪತ್ತೆಯಾಗಿಲ್ಲ.
ಹಸುಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಹೊಡೆದಿದ್ದು, ಚಾಲಕ, ಕ್ಲೀನರ್ ಹಾಗೂ 40 ಹಸುಗಳು(Cows) ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪರಂ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ಕಾಸೆಪಲ್ಲಿ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ, ಚಾಲಕಹಾಗೂ ಕ್ಲೀನರ್ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಕ್ರೇನ್‌ಗಳ ಸಹಾಯದಿಂದ ಜಾನುವಾರುಗಳ ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಯಿತು. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪಾಮಿಡಿ ಸರ್ಕಲ್ ಇನ್ಸ್‌ಪೆಕ್ಟರ್ ರೋಶನ್ ತಿಳಿಸಿದ್ದಾರೆ.
ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 9 ಹಸುಗಳು ಸಾವು ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು (Cows) ಮೃತಪಟ್ಟಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ನಡೆದಿದೆ. ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ. ಕೊಟ್ಟಿಗೆಯಲ್ಲಿ 15 ಹಸುಗಳನ್ನ ಕಟ್ಟಿಹಾಕಲಾಗಿತ್ತು. ಇದೆ ಕೊಟ್ಟಿಗೆಯಲ್ಲಿ ಎರಡು ಬೈಕ್ಗಳನ್ನು ಕೂಡ ನಿಲ್ಲಿಸಲಾಗಿತ್ತು. ತಡರಾತ್ರಿ 2 ಗಂಟೆ ಸುಮಾರಿಗೆ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಹಸುಗಳ ಜೊತೆ ಬೈಕ್ಗಳು ಕೂಡ ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು. ಕಳೆದ ವರ್ಷ ಈ ಘಟನೆ ನಡೆದಿತ್ತು.
ಮತ್ತಷ್ಟು ಓದಿ: ದುರ್ಗದಲ್ಲಿ ಎರಡು ಲಾರಿಗಳ ನಡುವೆ ಡಿಕ್ಕಿ: ಸಹ ಚಾಲಕ ಸೇರಿದಂತೆ 9 ಜಾನುವಾರು ಸಾವು
ಎರಡು ಲಾರಿಗಳ ನಡುವೆ ಡಿಕ್ಕಿ: 9 ಜಾನುವಾರು ಸಾವು 2 ಲಾರಿಗಳ ನಡುವೆ ಡಿಕ್ಕಿ (collision) ಹೊಡೆದ ಪರಿಣಾಮ ಓರ್ವ ವ್ಯಕ್ತಿ, 9 ಜಾನುವಾರುಗಳು ಸಾವಪ್ಪಿರುವಂತಹ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್ಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ. ಮಹರಾಷ್ಟ್ರದಿಂದ ಕೋಲಾರಕ್ಕೆ ಲಾರಿಯಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಮಹಾರಾಷ್ಟ್ರ ಮೂಲದ ಸಹ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದ. 10 ಜಾನುವಾರುಗಳ ಪೈಕಿ 9 ಸಾವಪ್ಪಿದ್ದು, ಗಾಯಗೊಂಡಿರುವ 1 ಜಾನುವಾರನ್ನು ಚಳ್ಳಕೆರೆ ಬಳಿಯ ಗೋಶಾಲೆಗೆ ಶಿಫ್ಟ್ ಮಾಡಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ