ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ

|

Updated on: May 07, 2020 | 3:03 PM

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. […]

ವಿಶಾಖಪಟ್ಟಣಂ ಅನಿಲ ದುರಂತ: ಮೃತರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರ
Follow us on

ಆಂಧ್ರಪ್ರದೇಶ: ವಿಶಾಖಪಟ್ಟಣಂ ಸಮೀಪ ಇಂದು ಬೆಳಗ್ಗೆ ವಿಷ ಅನಿಲ ಸೋರಿಕೆಯಾಗಿ ಘೋರ ದುರಂತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎನ್ನಲಾಗಿದೆ. ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವ ಆಂಧ್ರಪ್ರದೇಶ ಸಿಎಂ ಜಗನ್ ​ಮೋಹನ್​ ರೆಡ್ಡಿ ಮೃತಪಟ್ಟವರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಸ್ವಸ್ಥರಿಗೆ ಸರ್ಕಾರದ ವತಿಯಿಂದಲೇ ಉಚಿತ ಚಿಕಿತ್ಸೆ ನೀಡಲಾಗುವುದು. ವೆಂಟಿಲೇಟರ್​ ಮೂಲಕ ಚಿಕಿತ್ಸೆ ಪಡೆಯುತ್ತಿರುವವರು ಮತ್ತು ತೀವ್ರವಾಗಿ ಅಸ್ವಸ್ಥಗೊಂಡವರಿಗೆ ಸಿಎಂ ಜಗನ್​ಮೋಹನ್​ ರೆಡ್ಡಿ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಸ್ಪತ್ರೆಯಲ್ಲಿ 2-3 ದಿನ ಉಳಿದವರಿಗೆ 5 ಲಕ್ಷ ಪರಿಹಾರ. ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಸಹ ಘೋಷಣೆಯಾಗಿದೆ. ಪ್ರಾಥಮಿಕ ಚಿಕಿತ್ಸೆಗೆ 25 ಸಾವಿರ ರೂಪಾಯಿ ನೀಡುತ್ತೇವೆ ಎಂದೂ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.