ಚಂದ್ರಬಾಬು ನಾಯ್ಡು ಕಣ್ಣೀರಿಗೆ ಹತಾಶೆಯೇ ಕಾರಣ: ವ್ಯಂಗ್ಯವಾಡಿದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ

ಚಂದ್ರಬಾಬು ನಾಯ್ಡು ಅವರನ್ನು ಜನರು ತಿರಸ್ಕರಿಸಿದ್ದು, ತವರು ಕ್ಷೇತ್ರ ಕುಪ್ಪಂ ನಗರಸಭೆಯಲ್ಲಿ ಟಿಡಿಪಿ ಸೋತಿದೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಕಣ್ಣೀರಿಗೆ ಹತಾಶೆಯೇ ಕಾರಣ: ವ್ಯಂಗ್ಯವಾಡಿದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ
ಆಂಧ್ರ ಮುಖ್ಯಮಂತ್ರಿ ಜಗನ್​ಮೋಹನ್ ರೆಡ್ಡಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 20, 2021 | 3:54 PM

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನಿನ್ನೆ (ನ.19) ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದರು. ಇದಕ್ಕೆ ಈಗ ಆಂಧ್ರಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಚಂದ್ರಬಾಬು ನಾಯ್ಡು ಎಷ್ಟು ಹತಾಶರಾಗಿದ್ದಾರೆ ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ಜನರು ತಿರಸ್ಕರಿಸಿದ್ದು, ತವರು ಕ್ಷೇತ್ರ ಕುಪ್ಪಂ ನಗರಸಭೆಯಲ್ಲಿ ಟಿಡಿಪಿ ಸೋತಿದೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಆಂಧ್ರದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ತನ್ನ ಪಕ್ಷದ ನಾಯಕರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡಿದೆ ಎಂಬ ಚಂದ್ರಬಾಬು ನಾಯ್ಡು ಅವರ ಆರೋಪಕ್ಕೆ ಸಿಎಂ ಜಗನ್ ಮೋಹನ್ ರೆಡ್ಡಿ ತಿರುಗೇಟು ನೀಡಿದ್ದಾರೆ. ‘ನಾಯ್ಡು ಎಷ್ಟು ಹತಾಶರಾಗಿದ್ದಾರೆ ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ. ಚಂದ್ರಬಾಬು ನಾಯ್ಡು ಅವರನ್ನು ಜನರು ತಿರಸ್ಕರಿಸಿದ್ದಾರೆ. ತಮ್ಮ ತವರು ಕ್ಷೇತ್ರವಾದ ಕುಪ್ಪಂನಲ್ಲಿ ನಗರಸಭೆಯೂ ಅವರ ಅಧೀನದಲ್ಲಿಲ್ಲ. ವಿಧಾನ ಪರಿಷತ್ತಿನಲ್ಲೂ ಟಿಡಿಪಿ ಅಧಿಕಾರ ಕಳೆದುಕೊಂಡಿದೆ. ಹೀಗಾಗಿ ಅವರು ಏನು ಮಾಡುತ್ತಿದ್ದಾರೆ, ಮಾತನಾಡುತ್ತಿದ್ದಾರೆ ಅಥವಾ ಹೇಗೆ ವರ್ತಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ವಿಶ್ಲೇಷಿಸಿದರು.

ಸಂಬಂಧವಿಲ್ಲದ ಅನಗತ್ಯ ವಿಷಯಗಳ ಬಗ್ಗೆ ಮಾತನಾಡುವ ಮೂಲಕ ಚಂದ್ರಬಾಬು ನಾಯ್ಡು ಅವರೇ ಸದನದಲ್ಲಿ ಶಾಸಕರನ್ನು ಪ್ರಚೋದಿಸಿದ್ದಾರೆ. ಈಗ ಜನರು ಪ್ರತಿಕ್ರಿಯಿಸಿದಾಗ ಈ ರೀತಿ ವರ್ತಿಸುತ್ತಿದ್ದಾರೆ. ಚಂದ್ರಬಾಬು ನಾಯ್ಡು ಮತ್ತು ಟಿಡಿಪಿ ನಾಯಕರೇ ಇಂಥ ಗೊಂದಲಗಳಿಗೆ ಕಾರಣ ಎಂದು ಜಗನ್ ರೆಡ್ಡಿ ಪ್ರತಿಕ್ರಿಯಿಸಿದರು.

ವಿಧಾನಸಭೆ ಅಧಿವೇಷನದಲ್ಲಿ ತಮ್ಮ ಪತ್ನಿಯನ್ನು ಗುರಿಯಾಗಿಸಿ, ಕೀಳಾಗಿ ಮಾತನಾಡಲಾಗಿದೆ ಎಂದು ಶುಕ್ರವಾರ ಚಂದ್ರಬಾಬು ನಾಯ್ಡು ಹೇಳಿದ್ದರು. ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಸರ್ಕಾರವು ಶಾಸಕಾಂಗ ಸಭೆಯಲ್ಲಿ ತಮ್ಮನ್ನು ಸೇರಿದಂತೆ ತಮ್ಮ ಪಕ್ಷದ ನಾಯಕರ ಕುಟುಂಬ ಸದಸ್ಯರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದರು. ಇದು ಆಂಧ್ರಪ್ರದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆಂಧ್ರಪ್ರದೇಶ ವಿಧಾನಸಭೆಯನ್ನು ಕೌರವರ ಸಭೆಗೆ ಹೋಲಿಸಿದ್ದರು. ಆಂಧ್ರಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ತನಕ ವಿಧಾನಸಭೆ ಪ್ರವೇಶ ಮಾಡಲ್ಲ ಎಂದು ಚಂದ್ರಬಾಬು ನಾಯ್ಡು ಶಪಥ ಮಾಡಿದ್ದರು.

ಇದನ್ನೂ ಓದಿ: Chandrababu Naidu: ನಾನು ಮತ್ತೆ ಮುಖ್ಯಮಂತ್ರಿಯಾಗಿಯೇ ಬರುತ್ತೇನೆ: ಸವಾಲು ಹಾಕಿ ವಿಧಾನಸಭೆಯಿಂದ ಹೊರನಡೆದ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಇದನ್ನೂ ಓದಿ: ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಟೀಕೆ: ಟಿಡಿಪಿ ಕಚೇರಿಗೆ ನುಗ್ಗಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರ ದಾಂಧಲೆ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ