AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬ್ರೇಕಿಂಗ್: ಅಮರಾವತಿ ಇನ್ನರ್ ರಿಂಗ್ ರೋಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ 14 – ನಾರಾ ಲೋಕೇಶ್, ಬಂಧನದ ಭೀತಿ

Big Breaking: ಆಂದ್ರದಲ್ಲಿ ಈಗ ಭ್ರಷ್ಟಾಚಾರ ಪ್ರಕರಣಗಳ ಬೆನ್ನುಹತ್ತಿದ್ದು, ಬಂಧನಗಳು ಅವ್ಯಾಹತವಾಗಿ ನಡೆಯುತ್ತಿವೆ. ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಈಗಾಗಲೇ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಬಂಧನವಾಗಿದ್ದು, ಇದೀಗ ನಾರಾ ಲೋಕೇಶ್ ಅವರ ಹೆಸರು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬಿಗ್ ಬ್ರೇಕಿಂಗ್: ಅಮರಾವತಿ ಇನ್ನರ್ ರಿಂಗ್ ರೋಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ 14 - ನಾರಾ ಲೋಕೇಶ್, ಬಂಧನದ ಭೀತಿ
ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ 14 - ನಾರಾ ಲೋಕೇಶ್
ಸಾಧು ಶ್ರೀನಾಥ್​
|

Updated on:Sep 26, 2023 | 2:41 PM

Share

ಅಮರಾವತಿ ಐಆರ್‌ಆರ್: ಆಂದ್ರದಲ್ಲಿ ಈಗ ಭ್ರಷ್ಟಾಚಾರ (Corruption) ಪ್ರಕರಣಗಳ ಬೆನ್ನುಹತ್ತಿದ್ದು, ಬಂಧನಗಳು ಅವ್ಯಾಹತವಾಗಿ ನಡೆಯುತ್ತಿವೆ. ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಈಗಾಗಲೇ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು (Chandrababu Naidu) ಬಂಧನವಾಗಿದ್ದು, ಇದೀಗ ನಾರಾ ಲೋಕೇಶ್ ( Nara Lokesh) ಅವರ ಹೆಸರು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣದಲ್ಲಿ (Amaravati IRR) ನಾರಾ ಲೋಕೇಶ್ ಹೆಸರನ್ನು ಸಿಐಡಿ ಆರೋಪಿ14 (A14) ಎಂದು ಸೇರಿಸಿದೆ. ಸಿಐಡಿ ಎಸಿಬಿ ನ್ಯಾಯಾಲಯಕ್ಕೆ ಲೋಕೇಶ್ ಹೆಸರನ್ನು ಉಲ್ಲೇಖಿಸಿ ಮೆಮೊ ಸಲ್ಲಿಸಿದೆ. ಇದರಿಂದ ಚಂದ್ರಬಾಬು ನಾಯ್ಡು ವಾರಸುದಾರ ನಾರಾ ಲೋಕೇಶ್​ಗೆ ಬಂಧನದ ಭೀತಿ ಎದುರಾಗಿದೆ.

ಇದೇ ಐಆರ್ ಆರ್ ಅಲೈನ್ ಮೆಂಟ್ ಹಗರಣದಲ್ಲಿ ಚಂದ್ರಬಾಬು ವಿರುದ್ಧ ಸಿಐಡಿ ಈಗಾಗಲೇ ಪ್ರಕರಣ ದಾಖಲಿಸಿದೆ. ಇದೀಗ ನಾರಾ ಲೋಕೇಶ್ ಹೆಸರು ಸೇರ್ಪಡೆಯಾಗಿರುವುದು ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ನಾರಾಯಣ ಹಾಗೂ ಕೆಲವರ ವಿರುದ್ಧ ಆರೋಪಗಳಿವೆ. ಸರಣಿ ಭ್ರಷ್ಟಾಚಾರ ಪ್ರಕರಣಗಳಿಂದ ಟಿಡಿಪಿ ಸದ್ಯಕ್ಕೆ ಕಂಗಾಲಾಗಿದೆ. ಮುಂದಿನ ಬಂಧನ ನಾರಾ ಲೋಕೇಶ್ ಅವರದ್ದಾ ಎಂಬುದು ಇದೀಗ ಚರ್ಚೆಯ ವಿಷಯವಾಗಿದೆ.

ಚಂದ್ರಬಾಬು ಜಾಮೀನು ಕಸ್ಟಡಿ ಅರ್ಜಿಗಳ ವಿಚಾರಣೆ ಮುಂದೂಡಿಕೆ

ಕೌಶಲಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಚಂದ್ರಬಾಬು ಪರವಾಗಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರೆ, ಸಿಐಡಿ ಪರವಾಗಿ ವಕೀಲರು ಕಸ್ಟಡಿ ಅರ್ಜಿ ಸಲ್ಲಿಸಿದ್ದು, ಪ್ರಕರಣದ ತನಿಖೆ ಇನ್ನೂ ನಡೆಯಬೇಕಿದ್ದು, ಬಾಬು ಅವರನ್ನು ಕಸ್ಟಡಿಗೆ ನೀಡಬೇಕು ಎಂದು ಕೋರಿದೆ. ಈ ಅರ್ಜಿಗಳ ವಿಚಾರಣೆಯನ್ನು ಎಸಿಬಿ ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಚಂದ್ರಬಾಬು ಪರ ವಕೀಲರು ಕಸ್ಟಡಿ ಅರ್ಜಿಗೆ ಕೌಂಟರ್ ಸಲ್ಲಿಸಿದ್ದು, ಬುಧವಾರವೇ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ. ಏತನ್ಮಧ್ಯೆ, ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಂದ್ರಬಾಬು ಅವರನ್ನು ಎರಡು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದೆ. ಆದರೆ, ಸರಿಯಾದ ಮಾಹಿತಿ ಕಲೆ ಹಾಕಲು ಸಾಧ್ಯವಾಗಿಲ್ಲ, ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಸಿಐಡಿ ಇನ್ನೂ 5 ದಿನ ಕಸ್ಟಡಿಯಲ್ಲಿ ಇಡುವಂತೆ ಅರ್ಜಿ ಸಲ್ಲಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಚಂದ್ರಬಾಬು ಅರ್ಜಿ ಬುಧವಾರ ವಿಚಾರಣೆ, ಬಾಬು ಬಂಧನಕ್ಕೆ ರಾಜ್ಯಪಾಲರಿಂದ ಪೂರ್ವಾನುಮತಿ ಪಡೆದಿಲ್ಲ

ಮಾಜಿ ಸಿಎಂ ಚಂದ್ರಬಾಬು ನಾಯ್ಡು ತಮ್ಮ ಬಂಧನವಾದಾಗಿನಿಂದಲೂ ಕೌಶಲ ಹಗರಣ ಪ್ರಕರಣದಿಂದ ಹೊರಬರಲು ಎಲ್ಲ ಕಾನೂನು ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ, ಹೈಕೋರ್ಟ್ ಪ್ರಕರಣ ರದ್ದುಗೊಳಿಸುವ, ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿದ ನಂತರ, ಇದೀಗ ಚಂದ್ರಬಾಬು ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಚಂದ್ರಬಾಬು ಪರವಾಗಿ ವಕೀಲರು ಸಲ್ಲಿಸಿರುವ ಉಲ್ಲೇಖದ ಮೆಮೋ ಕುರಿತು ತೀರ್ಮಾನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಬುಧವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಚಂದ್ರಬಾಬು ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ರಾಜ್ಯಪಾಲರಿಂದ ಪೂರ್ವಾನುಮತಿ ಪಡೆಯದೆ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದ್ದು, ಪ್ರಕರಣವನ್ನು ವಜಾಗೊಳಿಸುವಂತೆ ಕೋರಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:27 pm, Tue, 26 September 23

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ