ವಿಜಯವಾಡ ಭೇಟಿ ವೇಳೆ ಕೂದಲೆಳೆ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಜಯವಾಡದ ಮಧುರಾನಗರದ ಪ್ರವಾಹ ಪೀಡಿತ ಪ್ರದೇಶವನ್ನು ಪರಿಶೀಲಿಸುವ ಸಂದರ್ಭದಲ್ಲಿ ವೇಗದ ರೈಲು ಕೆಲವು ಅಡಿ ದೂರದಲ್ಲಿ ಹಾದುಹೋಗುವಾಗ ರೈಲು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ವಿಜಯವಾಡ ಭೇಟಿ ವೇಳೆ ಕೂದಲೆಳೆ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
Follow us
ಸುಷ್ಮಾ ಚಕ್ರೆ
|

Updated on: Sep 05, 2024 | 10:14 PM

ಹೈದರಾಬಾದ್: ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ತಂಡವು ರೈಲ್ವೇ ಹಳಿಯೊಂದರ ಕೆಳಗೆ ಜಲಾವೃತಗೊಂಡಿರುವ ಹೊಳೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ರೈಲ್ವೆ ಹಳಿಯ ಮೇಲೆ ರೈಲು ಬಂದಿದೆ. ಆ ವೇಳೆ ಈ ಘಟನೆ ಸಂಭವಿಸಿದೆ. ಕೂದಲೆಳೆ ಅಂತರದಿಂದ ಸಿಎಂ ಚಂದ್ರಬಾಬು ನಾಯ್ಡು ಅಪಘಾತದಿಂದ ಪಾರಾಗಿದ್ದಾರೆ. ಈ ಪ್ರವಾಹವು 2005ರ ವಿಜಯವಾಡ ಪ್ರವಾಹಕ್ಕಿಂತ ಭೀಕರವಾಗಿದೆ ಎಂದು ವಿವರಿಸಲಾಗಿದೆ.

ಇದ್ದಕ್ಕಿದ್ದಂತೆ, ಒಂದು ರೈಲು ವಿರುದ್ಧ ದಿಕ್ಕಿನಿಂದ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಸಮೀಪಿಸಿತು. ಆಗ ಅವರ ಜೊತೆಗಿದ್ದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ರೈಲು ಮಾರ್ಗದಿಂದ ತ್ವರಿತವಾಗಿ ಹಿಂದೆ ಸರಿದಿದ್ದರಿಂದ ದುರಂತವೊಂದು ತಪ್ಪಿದಂತಾಗಿದೆ. ರೈಲು ಹಾದುಹೋದ ನಂತರ, ಆ ತಂಡವು ತಮ್ಮ ತಪಾಸಣೆಯನ್ನು ಮುಂದುವರೆಸಿತು.

ಇದನ್ನೂ ಓದಿ: Crime News: ಮಗುವಿನ ಮೇಲೆ ಅತ್ಯಾಚಾರ, ಕೊಲೆ; ತನಗೆ ಗಲ್ಲು ಶಿಕ್ಷೆ ನೀಡಲು ಅಪರಾಧಿಯಿಂದ ನ್ಯಾಯಾಧೀಶರಿಗೆ ಮನವಿ

ಸಿಎಂ ಚಂದ್ರಬಾಬು ನಾಯ್ಡು ಅವರು ಕಳೆದ ಕೆಲವು ದಿನಗಳಿಂದ ವಿಜಯವಾಡದಲ್ಲಿಯೇ ಉಳಿದುಕೊಂಡಿದ್ದು, ನಗರ ಮತ್ತು ಇತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮತ್ತು ಪರಿಹಾರ ಪ್ರಯತ್ನಗಳು ಮುಂದುವರಿದಿವೆ.

ವಿಜಯವಾಡದಲ್ಲಿ ಭಾನುವಾರವೊಂದರಲ್ಲೇ 37 ಸೆಂ.ಮೀ ಮಳೆ ಸುರಿದಿದ್ದು, ಬುಡಮೇರು ನದಿ ಉಕ್ಕಿ ಹರಿಯಲು ಕಾರಣವಾಗಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಹುಟ್ಟುವ ಈ ನದಿಯು ಒಡ್ಡು ಒಡೆದು ಭಾರಿ ಪ್ರವಾಹಕ್ಕೆ ಕಾರಣವಾಗಿದೆ. ಇದರಿಂದ ರಕ್ಷಣಾ ತಂಡಗಳಿಗೆ ಜನರನ್ನು ತಲುಪಲು ಕಷ್ಟವಾಗುತ್ತಿದೆ.

ಇದನ್ನೂ ಓದಿ: Shocking Video: ಹೆಗಲ ಮೇಲೆ ಮಕ್ಕಳ ಶವ ಹೊತ್ತು 15 ಕಿ.ಮೀ ನಡೆದ ಪೋಷಕರು; ಆಘಾತಕಾರಿ ವಿಡಿಯೋ ವೈರಲ್

ಈ ಪ್ರವಾಹವು 2005ರ ವಿಜಯವಾಡ ಪ್ರವಾಹಕ್ಕಿಂತ ಭೀಕರವಾಗಿದೆ ಎಂದು ವಿವರಿಸಲಾಗಿದೆ. ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯ ಸರ್ಕಾರಕ್ಕೆ ಮೊದಲ ಭಾರಿ ಸವಾಲನ್ನು ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್!
ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್!
ವಿಷಯ ಪ್ರಸ್ತಾಪಿಸಿ ಸಮರ್ಥಿಸಿಕೊಳ್ಳಲು ಹೆಣಗುತ್ತಿರುವ ವಿಪಕ್ಷ ನಾಯಕ ಅಶೋಕ
ವಿಷಯ ಪ್ರಸ್ತಾಪಿಸಿ ಸಮರ್ಥಿಸಿಕೊಳ್ಳಲು ಹೆಣಗುತ್ತಿರುವ ವಿಪಕ್ಷ ನಾಯಕ ಅಶೋಕ
ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ
ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ
ಮದವೇರಿದಾಗ ಸ್ಮಶಾನದಲ್ಲಿ ಸುತ್ತು ಹಾಕಬೇಕು: ಹೀಗೆಂದಿದ್ದೇಕೆ ಅಶೋಕ್?
ಮದವೇರಿದಾಗ ಸ್ಮಶಾನದಲ್ಲಿ ಸುತ್ತು ಹಾಕಬೇಕು: ಹೀಗೆಂದಿದ್ದೇಕೆ ಅಶೋಕ್?
ಹಿಂದೆ ನೀವು ಸದನವನ್ನು ಹೀಗಾ ನಡೆಸಿದ್ದು ಅಂತ ಸಿಎಂರನ್ನು ಪ್ರಶ್ನಿಸಿದ ಅಶೋಕ
ಹಿಂದೆ ನೀವು ಸದನವನ್ನು ಹೀಗಾ ನಡೆಸಿದ್ದು ಅಂತ ಸಿಎಂರನ್ನು ಪ್ರಶ್ನಿಸಿದ ಅಶೋಕ
ತಮ್ಮದೇ ಪಕ್ಷದ ಮಂತ್ರಿಯನ್ನು ಮಾತಾಡಲುಮ ಬಿಡದ ನರೇಂದ್ರ ಸ್ವಾಮಿ
ತಮ್ಮದೇ ಪಕ್ಷದ ಮಂತ್ರಿಯನ್ನು ಮಾತಾಡಲುಮ ಬಿಡದ ನರೇಂದ್ರ ಸ್ವಾಮಿ
ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ
ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ