ಆಂಧ್ರಕ್ಕೆ 25 ಲಕ್ಷ ಡೋಸ್​ ಕೊರೊನಾ ಲಸಿಕೆ ನೀಡುವಂತೆ ಪ್ರಧಾನಿಗೆ ಪತ್ರ; ಅಮೆರಿಕಾದಲ್ಲಿ 12-15 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಮನವಿ

ಆಂಧ್ರ ಪ್ರದೇಶಕ್ಕೆ 25 ಲಕ್ಷ ಡೋಸ್ ಕೊವಿಡ್ ಲಸಿಕೆ ಪೂರೈಕೆ ಮಾಡುವಂತೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್​ ರೆಡ್ಡಿ​ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆಂಧ್ರಕ್ಕೆ 25 ಲಕ್ಷ ಡೋಸ್​ ಕೊರೊನಾ ಲಸಿಕೆ ನೀಡುವಂತೆ ಪ್ರಧಾನಿಗೆ ಪತ್ರ; ಅಮೆರಿಕಾದಲ್ಲಿ 12-15 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಮನವಿ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
Follow us
Skanda
| Updated By: preethi shettigar

Updated on: Apr 10, 2021 | 7:38 AM

ಹೈದರಾಬಾದ್: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಕೊವಿಡ್​ ಎರಡನೇ ಅಲೆ ಬಹುತೇಕ ಎಲ್ಲಾ ರಾಜ್ಯಗಳನ್ನೂ ಬಾಧಿಸುತ್ತಿದೆ. ಕೊರೊನಾದಿಂದ ರಕ್ಷಣೆ ಪಡೆಯಲು ಲಸಿಕೆ ಪಡೆಯುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಈಗಾಗಲೇ ಮನವಿ ಮಾಡಿವೆ. ಏತನ್ಮಧ್ಯೆ, ಆಂಧ್ರ ಪ್ರದೇಶಕ್ಕೆ 25 ಲಕ್ಷ ಡೋಸ್ ಕೊವಿಡ್ ಲಸಿಕೆ ಪೂರೈಕೆ ಮಾಡುವಂತೆ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್​ ರೆಡ್ಡಿ​ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಾಷಿಂಗ್ಟನ್​: ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಸಲುವಾಗಿ ವಿಶ್ವಾದ್ಯಂತ ಕೊವಿಡ್ ಲಸಿಕೆ ವಿತರಣೆ ಆಗುತ್ತಿದೆ. ಅನೇಕ ಸಂಸ್ಥೆಗಳು ಕೊರೊನಾ ಲಸಿಕೆ ತಯಾರಿಸಿ ಬಹುಪಾಲು ದೇಶಗಳಿಗೆ ಹಂಚಿವೆ. ಸಾಧಾರಣವಾಗಿ ಎಲ್ಲಾ ದೇಶಗಳಲ್ಲೂ ಆದ್ಯತೆ ಮೇರೆಗೆ ಹಿರಿಯರಿಗೆ ಮೊದಲು ಕೊರೊನಾ ಲಸಿಕೆ ನೀಡಲಾಗುತ್ತಿದೆ. ಏತನ್ಮಧ್ಯೆ, ಅಮೆರಿಕಾದಲ್ಲಿ 12ರಿಂದ 15 ವರ್ಷ ಪ್ರಾಯದ ಮಕ್ಕಳಿಗೆ ಫೈಝರ್ ಲಸಿಕೆ ಕೊಡಲು ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ತಜ್ಞರಿಗೆ ಮನವಿ ಮಾಡಿರುವ ಅಮೆರಿಕಾ ಕೊರೊನಾ ಲಸಿಕೆ ತುರ್ತು ಬಳಕೆಗೆ ಬೇಡಿಕೆ ಇಟ್ಟಿದೆ.

ಭಾರತದಲ್ಲಿ ಯುವಜನತೆಗೆ ಕೊರೊನಾ ಲಸಿಕೆ ನೀಡಲು ಆಗ್ರಹ ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಅನೇಕ ರಾಜ್ಯಗಳು ಕಠಿಣ ನಿಯಮಾವಳಿಗಳ ಮೂಲಕ ಕೊರೊನಾ ನಿಯಂತ್ರಿಸುವ ಕ್ರಮಕ್ಕೆ ಮುಂದಾಗಿವೆ. ಜೊತೆಗೆ ಕೊರೊನಾ ಲಸಿಕೆ ವಿತರಣೆಯ ವೇಗವನ್ನೂ ಹೆಚ್ಚಿಸಿದ್ದು 45 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ಲಸಿಕೆ ತೆಗೆದುಕೊಳ್ಳಲು ಪ್ರೇರೇಪಿಸುತ್ತಿವೆ. ಈ ನಡುವೆಯೇ ಲಸಿಕೆ ವಿತರಣೆ ಬಗ್ಗೆ ಧ್ವನಿ ಎತ್ತಿರುವ ಕಾಂಗ್ರೆಸ್ ಲೋಕಸಭಾ ಸದಸ್ಯ ಮನೀಶ್ ತಿವಾರಿ, ಯುವಜನತೆಗೆ ಕೊರೊನಾ ಲಸಿಕೆ ನೀಡುವಂತೆ ಈಗಾಗಲೇ ಆಗ್ರಹಿಸಿದ್ದಾರೆ.

ಇದೇ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಮನೀಶ್ ತಿವಾರಿ‌, ಯುವಜನತೆಗೆ ಏಕೆ ಕೊರೊನಾ ಲಸಿಕೆ ನೀಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಭೀತಿ ಶುರುವಾಗಿರುವ ಹೊತ್ತಿನಲ್ಲಿ ಯುವಜನತೆಗೆ ಕೊರೊನಾ ಲಸಿಕೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಸರ್ಕಾರಿ/ ಖಾಸಗಿ ಕಚೇರಿಯ, 45 ವರ್ಷ ಮೇಲ್ಪಟ್ಟ ಉದ್ಯೋಗಿಗಳಿಗೆ ಕೊರೊನಾ ಲಸಿಕೆ; 100 ಕ್ಕೂ ಹೆಚ್ಚು ಫಲಾನುಭವಿಗಳಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯ

(Andhra Pradesh CM YS Jagan Mohan Reddy writes letter to PM Narendra Modi to provide 25 lakh doses of Covid 19 Vaccine)

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ