ಆಂಧ್ರಪ್ರದೇಶ: ಸಭೆಯೊಂದರಲ್ಲಿ ಚಪ್ಪಲಿಯಿಂದ ತನ್ನ ಕಪಾಳಕ್ಕೆ ತಾನೇ ಹೊಡೆದುಕೊಂಡ ಕಾರ್ಪೊರೇಟರ್, ಕಾರಣವೇನು?

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕಾರ್ಪೊರೇಟರ್ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸದ ಕಾರಣಕ್ಕೆ ತಮಗೆ ತಾವೇ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ.

ಆಂಧ್ರಪ್ರದೇಶ: ಸಭೆಯೊಂದರಲ್ಲಿ ಚಪ್ಪಲಿಯಿಂದ ತನ್ನ ಕಪಾಳಕ್ಕೆ ತಾನೇ ಹೊಡೆದುಕೊಂಡ ಕಾರ್ಪೊರೇಟರ್, ಕಾರಣವೇನು?
ಮುಳಪರ್ತಿ ರಾಮರಾಜು
Image Credit source: NDTV

Updated on: Aug 01, 2023 | 8:30 AM

ಆಂಧ್ರಪ್ರದೇಶ(Andhra Pradesh)ದ ಅನಕಪಲ್ಲಿ ಜಿಲ್ಲೆಯ ಕಾರ್ಪೊರೇಟರ್ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸದ ಕಾರಣಕ್ಕೆ ತಮಗೆ ತಾವೇ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ನರಸೀಪಟ್ಟಣ ಪುರಸಭೆಯ ವಾರ್ಡ್ 20ರ ಕೌನ್ಸಿಲರ್ ಮುಲಪರ್ತಿ ರಾಮರಾಜು ಕೌನ್ಸಿಲ್ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿ ಈ ವೇಳೆ ಚಪ್ಪಲಿಯಿಂದ ತಾವೇ ಹೊಡೆದುಕೊಂಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.

ಕಪಾಳಮೋಕ್ಷಕ್ಕೆ ಕಾರಣ ನೀಡಿದ ರಾಮರಾಜು, ‘ನಾನು ಕಾರ್ಪೊರೇಟರ್ ಆಗಿ ಆಯ್ಕೆಯಾಗಿ 31 ತಿಂಗಳು ಕಳೆದರೂ ನನ್ನ ವಾರ್ಡ್‌ನಲ್ಲಿನ ನಾಗರಿಕ ಸಮಸ್ಯೆಗಳಾದ ಒಳಚರಂಡಿ, ವಿದ್ಯುತ್, ಸ್ವಚ್ಛತೆ, ರಸ್ತೆ ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ’ ಎಂದು ಪಿಟಿಐಗೆ ತಿಳಿಸಿದರು.

ಆಟೋ ರಿಕ್ಷಾ ಓಡಿಸಿ ಜೀವನ ಸಾಗಿಸುತ್ತಿರುವ 40 ವರ್ಷದ ಕಾರ್ಪೊರೇಟರ್ ಅವರು ಎಲ್ಲ ರೀತಿಯಲ್ಲಿ ಪ್ರಯತ್ನಿಸಿದರೂ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. 20ನೇ ವಾರ್ಡ್ ಅನ್ನು ಸ್ಥಳೀಯ ಪುರಸಭೆ ಅಧಿಕಾರಿಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ, ಇದರಿಂದಾಗಿ ಯಾವುದೇ ಮತದಾರರಿಗೆ ನೀರಿನ ಸಂಪರ್ಕವನ್ನು ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮತದಾರರು ಒತ್ತಾಯಿಸುತ್ತಿದ್ದು, ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದೆ ಕೌನ್ಸಿಲ್ ಸಭೆಯಲ್ಲಿ ಸಾಯುವುದೇ ಲೇಸು ಎಂದು ರಾಮರಾಜು ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಕೌನ್ಸಿಲರ್‌ಗೆ ಟಿಡಿಪಿ ಬೆಂಬಲವಿತ್ತು. ಮುಳಪರ್ತಿ ರಾಮರಾಜು ಅವರು ತಮ್ಮ ಹುಟ್ಟೂರು ಲಿಂಗಪುರದ 20ನೇ ವಾರ್ಡ್‌ನಲ್ಲಿ ಗೆದ್ದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us