ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಸ್ವಲ್ಪ ಹೊತ್ತಲ್ಲೇ ಸಾವು

|

Updated on: Jan 28, 2024 | 2:01 PM

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಸ್ವಲ್ಪ ಹೊತ್ತಲ್ಲೇ ಸಾವು
ಮಗು
Image Credit source: Shutterstock
Follow us on

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

3 ತಿಂಗಳ ಹಿಂದೆ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದ ಇಂಜಿನಿಯರಿಂಗ್ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬಳು ಸೇರಿಕೊಂಡಿದ್ದಾಳೆ. ವಿದ್ಯಾರ್ಥಿನಿ ಗರ್ಭಿಣಿ ಎಂಬ ಅಂಶವನ್ನು ಕಾಲೇಜು ಆಡಳಿತ ಮಂಡಳಿ ಗುರುತಿಸದಿರುವುದು ಗಮನಾರ್ಹ.

ಹೆರಿಗೆಯಾಗುವವರೆಗೂ ಆಕೆ ಗರ್ಭಿಣಿ ಎಂದು ವಿದ್ಯಾರ್ಥಿಗಳಿಗೆ ತಿಳಿದಿರಲಿಲ್ಲ. ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಎರಡನೇ ವರ್ಷ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ಎಂದು ಶುಕ್ರವಾರ ತಡರಾತ್ರಿ ಪೋಷಕರಿಗೆ ಕರೆ ಮಾಡಿದ್ದಾಳೆ.

ಮತ್ತಷ್ಟು ಓದಿ: ಕೆಎಸ್​ಆರ್​​ಟಿಸಿ ಬಸ್​​ನಲ್ಲಿಯೇ ಹೆರಿಗೆ, ಮಹಿಳಾ ಕಂಡಕ್ಟರ್ ಸಮಯ ಪ್ರಜ್ಞೆಗೆ ಶ್ಲಾಘನೆ

ಅಷ್ಟರಲ್ಲಿ ಪೋಷಕರು ಹಾಸ್ಟೆಲ್​ಗೆ ಓಡೋಡಿ ಬಂದಿದ್ದಾರೆ, ಆದರೆ, ಹೊಟ್ಟೆ ನೋವು ಉಲ್ಬಣಗೊಂಡಿದ್ದರಿಂದ ರಾತ್ರಿ 9 ಗಂಟೆಗೆ ವಿದ್ಯಾರ್ಥಿನಿ ಬಾತ್ ರೂಮಿಗೆ ಹೋಗಿದ್ದಾಳೆ. ಸ್ವಲ್ಪ ಸಮಯವಾದರೂ ಹೊರಗೆ ಬರದ ಕಾರಣ, ಆಗಲೇ ಹಾಸ್ಟೆಲ್‌ಗೆ ಬಂದಿದ್ದ ಆತನ ಸ್ನೇಹಿತರು ಹಾಗೂ ಪೋಷಕರು ಬಾಗಿಲು ಒಡೆದಿದ್ದಾರೆ.

ಒಳಗಿನ ದೃಶ್ಯ ನೋಡಿ ಎಲ್ಲರೂ ಬೆಚ್ಚಿಬಿದ್ದರು. ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ವಿದ್ಯಾರ್ಥಿಯ ಪೋಷಕರು ಹಾಗೂ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಕರ್ನೂಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಶನಿವಾರ ಮೃತಪಟ್ಟಿದ್ದಾಳೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ