Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಮದುವೆಮನೆಯಿಂದ ವಧುವನ್ನು ಅಪಹರಿಸಲು ಯತ್ನಿಸಿದ ಕುಟುಂಬ, ಮೆಣಸಿನ ಪುಡಿ ಎರಚಿ ಹಲ್ಲೆ

ಮದುವೆ ಮನೆಯಲ್ಲಿ ಕುಟುಂಬದವರೇ ವಧುವನ್ನು ಅಪಹರಿಸಲು ಪ್ರಯತ್ನ ಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆದರೆ ಕೊನೆಗೂ ವರನ ಕಡೆಯವರು ಆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ. ಆದರೆ ವಧುವಿನ ಕುಟುಂಬ ಈ ರೀತಿ ನಡೆದುಕೊಳ್ಳಲು ಕಾರಣ ಏನೆಂಬುದರ ಕುರಿತು ತನಿಖೆ ನಡೆಯುತ್ತಿದೆ.

ಆಂಧ್ರಪ್ರದೇಶ: ಮದುವೆಮನೆಯಿಂದ ವಧುವನ್ನು ಅಪಹರಿಸಲು ಯತ್ನಿಸಿದ ಕುಟುಂಬ, ಮೆಣಸಿನ ಪುಡಿ ಎರಚಿ ಹಲ್ಲೆ
ವಧುವಿನ ಅಪಹರಣಕ್ಕೆ ಯತ್ನImage Credit source: India Today
Follow us
ನಯನಾ ರಾಜೀವ್
|

Updated on: Apr 23, 2024 | 7:48 AM

ಸಾಮಾನ್ಯವಾಗಿ ಮಗಳ ಮದುವೆ(Marriage) ಎಂದು ಪೋಷಕರು ಸಂಭ್ರಮದಲ್ಲಿರುತ್ತಾರೆ, ಮದುವೆ ನಿರ್ವಿಘ್ನವಾಗಿ ನೆರವೇರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಾರೆ. ಆದರೆ ಆಂಧ್ರಪ್ರದೇಶದಲ್ಲಿ ನಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಆಂಧ್ರಪ್ರದೇಶದ ಗೋದಾವರಿಯಲ್ಲಿ ಮದುವೆ ಮನೆಯಲ್ಲಿ ಕುಟುಂಬದವರೇ ವಧುವನ್ನು ಅಪಹರಿಸಲು ಪ್ರಯತ್ನಿಸಿರುವ ಘಟನೆ ನಡೆದಿದೆ.

ಅವರನ್ನು ತಡೆಯಲು ಪ್ರಯತ್ನಿಸಿದವರ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ. ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯುತ್ತಿರುವ ದೃಶ್ಯ ಸೆರೆಯಾಗಿದೆ.

ಕಡಿಯಂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದಾಗ್ಯೂ, ಸ್ನೇಹಾ ಅವರ ಕುಟುಂಬವು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ದಾಳಿ ಮಾಡಿ ಅವಳನ್ನು ಅಪಹರಿಸಲು ಪ್ರಯತ್ನಿಸಿದಾಗ ಇರುವ ಸಂತೋಷವೆಲ್ಲವೂ ದೂರವಾಗಿತ್ತು.

ಆದರೆ, ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಇಲ್ಲಿ ನಡೆಯುತ್ತದೆ ಸತ್ತವರಿಗೂ ಮದುವೆ; ಇದು ತುಳುನಾಡಿನ ಪ್ರೇತ ಕಲ್ಯಾಣ

ಘಟನೆ ಕುರಿತು ಮಾತನಾಡಿದ ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್, ವೀರಬಾಬು ಕುಟುಂಬದವರು ಸ್ನೇಹಾ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ