ಸಾಮಾನ್ಯವಾಗಿ ಮಗಳ ಮದುವೆ(Marriage) ಎಂದು ಪೋಷಕರು ಸಂಭ್ರಮದಲ್ಲಿರುತ್ತಾರೆ, ಮದುವೆ ನಿರ್ವಿಘ್ನವಾಗಿ ನೆರವೇರಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತಾರೆ. ಆದರೆ ಆಂಧ್ರಪ್ರದೇಶದಲ್ಲಿ ನಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಆಂಧ್ರಪ್ರದೇಶದ ಗೋದಾವರಿಯಲ್ಲಿ ಮದುವೆ ಮನೆಯಲ್ಲಿ ಕುಟುಂಬದವರೇ ವಧುವನ್ನು ಅಪಹರಿಸಲು ಪ್ರಯತ್ನಿಸಿರುವ ಘಟನೆ ನಡೆದಿದೆ.
ಅವರನ್ನು ತಡೆಯಲು ಪ್ರಯತ್ನಿಸಿದವರ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ. ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯುತ್ತಿರುವ ದೃಶ್ಯ ಸೆರೆಯಾಗಿದೆ.
ಕಡಿಯಂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದಾಗ್ಯೂ, ಸ್ನೇಹಾ ಅವರ ಕುಟುಂಬವು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ದಾಳಿ ಮಾಡಿ ಅವಳನ್ನು ಅಪಹರಿಸಲು ಪ್ರಯತ್ನಿಸಿದಾಗ ಇರುವ ಸಂತೋಷವೆಲ್ಲವೂ ದೂರವಾಗಿತ್ತು.
ಆದರೆ, ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ.
ಮತ್ತಷ್ಟು ಓದಿ: ಇಲ್ಲಿ ನಡೆಯುತ್ತದೆ ಸತ್ತವರಿಗೂ ಮದುವೆ; ಇದು ತುಳುನಾಡಿನ ಪ್ರೇತ ಕಲ್ಯಾಣ
ಘಟನೆ ಕುರಿತು ಮಾತನಾಡಿದ ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್, ವೀರಬಾಬು ಕುಟುಂಬದವರು ಸ್ನೇಹಾ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ