ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್​ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್​ಮೋಹನ್ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಟಿಡಿಪಿ ಶಾಸಕರೊಬ್ಬರ ದೂರಿನ ಮೇರೆಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್​ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು
ಜಗನ್​ಮೋಹನ್ ರೆಡ್ಡಿ
Follow us
|

Updated on: Jul 12, 2024 | 3:17 PM

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್​ಮೋಹನ್ ರೆಡ್ಡಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಟಿಡಿಪಿ ಶಾಸಕ ಕೆ ರಘುರಾಮ ಕೃಷ್ಣರಾಜು ದೂರಿನ ಮೇರೆಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಸಿಐಡಿ ಮಾಜಿ ಮುಖ್ಯಸ್ಥ ಪಿವಿ ಸುನೀಲ್ ಕುಮಾರ್ ಮತ್ತು ಗುಪ್ತಚರ ಮಾಜಿ ಮುಖ್ಯಸ್ಥ ಪಿಎಸ್ಆರ್ ಆಂಜನೇಯುಲು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಗನ್ ಮೋಹನ್ ರೆಡ್ಡಿ ಮತ್ತು ಇತರ ಅಧಿಕಾರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪಿತೂರಿ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

2021ರಲ್ಲಿ ಸಿಐಡಿ ಅಧಿಕಾರಿಗಳು ಅವರನ್ನು ಹೈದರಾಬಾದ್‌ನಿಂದ ಬಂಧಿಸಿದ್ದರು ಎಂದು ಶಾಸಕ ರಾಜು ತಿಳಿಸಿದ್ದಾರೆ. ಉಂಡಿ ಶಾಸಕ ಕೆ ರಘುರಾಮ ಕೃಷ್ಣರಾಜು ಈ ದೂರು ನೀಡಿದ್ದು, 2021ರ ಮೇ ತಿಂಗಳಲ್ಲಿ ನನ್ನನ್ನು ಬಂಧಿಸಿದ್ದರು. ನನ್ನನ್ನು ಎಳೆದುಕೊಂಡು ಹೋಗಿ ದೈಹಿಕವಾಗಿ ಥಳಿಸಿದ್ದರು.

ಮತ್ತಷ್ಟು ಓದಿ: ರಾಜಕೀಯ ಕುರುಕ್ಷೇತ್ರದಲ್ಲಿ ಜನರೇ ಕೃಷ್ಣ, ನಾನೇ ಅರ್ಜುನ ಎಂದ ಜಗನ್ ರೆಡ್ಡಿ

ಬೆಲ್ಟ್​, ದೊಣ್ಣೆಯಿಂದ ಥಳಿಸಿದ್ದರು. ಹೃದಯ ಸಂಬಂಧಿ ಸಮಸ್ಯೆ ಇದ್ದರೂ ಔಷಧಿ ತೆಗೆದುಕೊಳ್ಳಲು ಕೂಡ ಅವಕಾಶ ಮಾಡಿಕೊಡಲಿಲ್ಲ, ನಾನು ಬೈಪಾಸ್ ಸರ್ಜರಿಗೆ ಒಳಗಾಗಿರುವುದು ಕೂಡ ಅವರಿಗೆ ತಿಳಿದಿತ್ತು ಎಂದು ಆರೋಪಿಸಿದ್ದಾರೆ.

ನಂತರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯೆ ಪ್ರಭಾವತಿ ಎಂಬುವವರು ಉತ್ತಮ ಚಿಕಿತ್ಸೆಯನ್ನೂ ನೀಡಲಿಲ್ಲ, ಅಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಟೀಕಿಸಿದರೆ ಕೊಲೆ ಮಾಡುವುದಾಗಿ ಪಿವಿ ಸುನೀಲ್ ಕುಮಾರ್ ಬೆದರಿಕೆ ಹಾಕಿದ್ದರು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
‘ಮಾರ್ಟಿನ್’ ಖದರ್ ಬೇರೆಯದ್ದೇ ರೀತಿ ಇರುತ್ತದೆ: ಧ್ರುವ ಸರ್ಜಾ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
PSI ಪರಶುರಾಮ್ ಮೃತ ದೇಹ ನೋಡಿ ಕಣ್ಣೀರಿಟ್ಟ ಅಮ್ಮ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಊರುಗೋಲಿನ ಸಹಾಯದಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಿಜೆಪಿ ಕಾರ್ಯಕರ್ತ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಲ್ಯಾಬ್ ಟೆಕ್ನಿಷಿಯನ್‌; ದಂಗಾದ ರೋಗಿಗಳು
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ನನ್ನ ಗಂಡನಿಗೆ MLA ಮತ್ತು ಮಗ 30 ಲಕ್ಷಕ್ಕೆ ಟಾರ್ಚರ್ ಕೊಟ್ಟವ್ರೆ ಸರ್
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ಕೊಡುತ್ತಾರೆ: ಯಡಿಯೂರಪ್ಪ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
BJP JDS Padayatra: ಮೈಸೂರು ಚಲೋ ಸಮಾವೇಶದಲ್ಲಿ ಪ್ರಹ್ಲಾದ್ ಜೋಶಿ ಭಾಷಣ
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ನಥಿಂಗ್ ಫೋನ್ ಸಿರೀಸ್​ನಲ್ಲಿ ಬಂತು ಮತ್ತೊಂದು ಸೂಪರ್ ಡಿಸೈನ್ ಫೋನ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ
ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಜೋಡಿ