Kiran Kumar Reddy: ಕಾಂಗ್ರೆಸ್ ತೊರೆದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ

|

Updated on: Mar 13, 2023 | 9:54 AM

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Kiran Kumar Reddy: ಕಾಂಗ್ರೆಸ್ ತೊರೆದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ
ಕಿರಣ್ ಕುಮಾರ್ ರೆಡ್ಡಿ
Image Credit source: NDTV
Follow us on

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರೆಡ್ಡಿ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ಮಾಣಿಕಂ ಟ್ಯಾಗೋರ್, ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಆಂಧ್ರಪ್ರದೇಶ ಕಾಂಗ್ರೆಸ್ ಅನ್ನು ನಾಶಪಡಿಸಿದವರು ಈಗ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ. ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆ ಎಂದು ಸ್ವೀಕರಿಸಿ ಎಂದು ರೆಡ್ಡಿ ಅವರು ಮಾರ್ಚ್ 11 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರವೊಂದನ್ನು ರವಾನಿಸಿದ್ದರು.

ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣವನ್ನು ರಚಿಸುವ ಅಂದಿನ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ನಿರ್ಧಾರದ ಮೇಲೆ ರೆಡ್ಡಿ ಈ ಹಿಂದೆ 2014 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.

ಅವರು ತಮ್ಮದೇ ಆದ ರಾಜಕೀಯ ಪಕ್ಷ ಜೈ ಸಮೈಕ್ಯ ಆಂಧ್ರ ಪಕ್ಷವನ್ನು ಸ್ಥಾಪಿಸಿದರು, ಆದರೆ 2018 ರಲ್ಲಿ ಕಾಂಗ್ರೆಸ್‌ಗೆ ಮರಳಿದ್ದರು. ದಿವಂಗತ ಮುಖ್ಯಮಂತ್ರಿ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಅವರ ಅವಧಿಯಲ್ಲಿ ಅವರು ಸಚಿವರಾಗಿದ್ದರು. ಆದರೆ, ನಂತರ ವಿಧಾನಸಭೆಯ ಸ್ಪೀಕರ್ ಜವಾಬ್ದಾರಿಯನ್ನೂ ನಿರ್ವಹಿಸಿದರು.

ಕಿರಣ್ ಕುಮಾರ್ ರೆಡ್ಡಿ ಅವರ ತಂದೆ ನಲ್ಲಾರಿ ಅಮರನಾಥ ರೆಡ್ಡಿ ಅವರು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ನರಸಿಂಹ ರಾವ್ ಅವರಿಗೆ ಅತ್ಯಂತ ನಿಕಟರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ