AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ

ಸ್ಕಿಲ್​ ಹಗರಣದ ಎ1 ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ
ಮಾಜಿ ಸಿಎಂ ಚಂದ್ರಬಾಬು ನಾಯ್ಡು
TV9 Web
| Updated By: ವಿವೇಕ ಬಿರಾದಾರ|

Updated on:Sep 09, 2023 | 9:29 AM

Share

ಅಮರಾವತಿ​ ಸೆ.09: ಸ್ಕಿಲ್​ ಹಗರಣದ ಎ1  ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು (N. Chandrababu Naidu) ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ರೂ. ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿಬಂದಿತ್ತು. ಈ  ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಇನ್ನು ಸಿಐಡಿ ಅಧಿಕಾರಿಗಳು ಬಂಧಿಸಲು ಆಗಮಿಸಿದ ವೇಳೆ ಚಂದ್ರಬಾಬು ನಾಯ್ಡು ಹೈಡ್ರಾಮಾ ಸೃಷ್ಟಿಸಿದ್ದಾರೆ. ನನ್ನ ಹಕ್ಕನ್ನು ಕಸಿಯುವ ಕೆಲಸ ಆಗಿದೆ. ಎಫ್​ಐಆರ್​ ಮಾಡಿಲ್ಲ, ನೋಟಿಸ್​ ನೀಡದೆ ಬಂಧಿಸಲಾಗಿದೆ ಎಂದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ಸಿಎಂ ಜಗನ್ ಡೌನ್​ ಡೌನ್​,   ಪೊಲೀಸ್​ ಡೌನ್​ ಡೌನ್​ ಎಂದು ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

Published On - 6:31 am, Sat, 9 September 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ