ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು, ತನಿಖೆ ನಡೆಸಲು 9 ಸದಸ್ಯರ ತಂಡ ರಚಿಸಿದ ಆಂಧ್ರ ಸರ್ಕಾರ

|

Updated on: Sep 27, 2024 | 10:15 AM

ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪ ಬೆರೆಸಿರುವ ಕುರಿತು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಖಾರವು ತನಿಖಗೆಗಾಗಿ 9 ಸದಸ್ಯರು ಸಮಿತಿಯನ್ನು ರಚಿಸಿದೆ.

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು, ತನಿಖೆ ನಡೆಸಲು 9 ಸದಸ್ಯರ ತಂಡ ರಚಿಸಿದ ಆಂಧ್ರ ಸರ್ಕಾರ
ತಿರುಪತಿ ಲಡ್ಡು
Image Credit source: Mint
Follow us on

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತನಿಕೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚಿಸಿದೆ. ಗುಂಟೂರು ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತಿರುಮಲದಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಇತರ ಅಕ್ರಮಗಳ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸಲಿದೆ.

ಸರ್ವಶ್ರೇಷ್ಠ ತ್ರಿಪಾಠಿ, 2006ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ, ಈ ಹಿಂದೆ ಸಂಯೋಜಿತ ಗುಂಟೂರು ಮತ್ತು ಕೃಷ್ಣ ಜಿಲ್ಲೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸಿದ್ದರು. ತ್ರಿಪಾಠಿಯ ಹೊರತಾಗಿ, ಎಸ್‌ಐಟಿ ತಂಡವು ವಿಶಾಖಪಟ್ಟಣಂ ರೇಂಜ್‌ಗೆ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಗೋಪಿನಾಥ್ ಜಟ್ಟಿ, ಐಪಿಎಸ್ ಸೇರಿದಂತೆ ಇತರ ಪ್ರಮುಖ ಸದಸ್ಯರನ್ನು ಒಳಗೊಂಡಿದೆ.

ತಿರುಪತಿ ತಯಾರಿಕೆಯಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಿಸಲಾಗಿದೆ.

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಮತ್ತಷ್ಟು ಓದಿ: ತಿರುಪತಿ ಲಡ್ಡು ಪ್ರಕರಣ: ನಂದಿನಿ ಉತ್ಪನ್ನಗಳಿಗೆ ಬೇಡಿಕೆಯೋ ಬೇಡಿಕೆ!

ಐಪಿಸಿ ಸೆಕ್ಷನ್ 298 ಮತ್ತು 299 ರ ಅಡಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ತಂದಿರುವ ಮತ್ತು ಲಕ್ಷಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರುಣಾ ಸಾಗರ್ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ವೈಎಸ್ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪಕ್ಕೆ ಟೆಂಡರ್ ಕರೆಯಲಾಗಿತ್ತು. ಈ ಹಿಂದೆ ಟಿಟಿಡಿಗೆ ತುಪ್ಪ ಪೂರೈಸುತ್ತಿದ್ದ ಕರ್ನಾಟಕದ ಕೆಎಂಎಫ್‌ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿತ್ತು. ಇದರ ದರ ಒಂದು ಕಿಲೋ ತುಪ್ಪಕ್ಕೆ 600 ರೂಪಾಯಿಗೂ ಅಧಿಕ.

ಇದೇ ಟೆಂಡರ್‌ನಲ್ಲಿ ಭಾಗವಹಿಸಿದ್ದ ಮತ್ತೊಂದು ಸಂಸ್ಥೆ, ಒಂದು ಕೆಜಿ ಆಕಳಿನ ತುಪ್ಪವನ್ನು ಕೇವಲ 320 ರೂಪಾಯಿಗೆ ಪೂರೈಕೆ ಮಾಡುವುದಾಗಿ ಹೇಳಿತ್ತು. ಹೀಗಾಗಿ ಈ ಕಂಪನಿಗೆ ಟಿಟಿಡಿ ಈ ಟೆಂಡರ್ ಅನ್ನು ಅಂತಿಮಗೊಳಿಸಿತ್ತು. ಈ ತುಪ್ಪ ಕಳಪೆ ಎಂದು ಟಿಟಿಡಿ ಸಿಬ್ಬಂದಿಯೂ ಹಲವು ಬಾರಿ ಹೇಳಿರುವುದಾಗಿ ವರದಿಯಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ