AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Margadarsi Chit Fund: ಮಾರ್ಗದರ್ಶಿ ಚಿಟ್​ ಫಂಡ್​ನ 793 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆಂಧ್ರ ಪ್ರದೇಶ ಸರ್ಕಾರ ಆದೇಶ

ಮಾರ್ಗದರ್ಶಿ ಚಿಟ್​ಫಂಡ್​(Margadarshi Chit Fund)ನ 793 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡುವಂತೆ ಆಂಧ್ರಪ್ರದೇಶ ಸರ್ಕಾರ ಆದೇಶಿಸಿದೆ

Margadarsi Chit Fund: ಮಾರ್ಗದರ್ಶಿ ಚಿಟ್​ ಫಂಡ್​ನ 793 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆಂಧ್ರ ಪ್ರದೇಶ ಸರ್ಕಾರ ಆದೇಶ
ರಾಮೋಜಿ ರಾವ್
Follow us
ನಯನಾ ರಾಜೀವ್
|

Updated on: May 30, 2023 | 10:19 AM

ಮಾರ್ಗದರ್ಶಿ ಚಿಟ್​ಫಂಡ್​(Margadarsi Chit Fund)ನ 793 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡುವಂತೆ ಆಂಧ್ರಪ್ರದೇಶ ಸರ್ಕಾರ ಆದೇಶಿಸಿದೆ.  ಮಾರ್ಗದರ್ಶಿ ಚಿಟ್​ಫಂಡ್​ಗಳ ಚಂದಾದಾರರು ಹಾಗೂ ಠೇವಣಿದಾರರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಚಿಟ್​ಫಂಡ್​ಗಳಿಗೆ ಸೇರಿದ 793.50 ಕೋಟಿ ರೂ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಿಐಡಿಗೆ ಅವಕಾಶ ಮಾಡಿಕೊಟ್ಟಿದೆ. ಅವರ ಪ್ರಕಾರ, ಹಣಕಾಸು ಅವ್ಯವಹಾರ ಮತ್ತು ಚಂದಾದಾರರ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಚಿಟ್ ಫಂಡ್ ಕಂಪನಿಯನ್ನು ತನಿಖೆ ನಡೆಸುತ್ತಿರುವ ಸಿಐಡಿ ಮುಖ್ಯಸ್ಥ ಎನ್ ಸಂಜಯ್ ಅವರಿಂದ ರಾಜ್ಯ ಸರ್ಕಾರವು ಮನವಿಯನ್ನು ಸ್ವೀಕರಿಸಿದ ನಂತರ ಈ ಆದೇಶವನ್ನು ಹೊರಡಿಸಲಾಗಿದೆ.

ಎಂಸಿಎಫ್‌ಪಿಎಲ್ ಅಧ್ಯಕ್ಷ ಸಿಎಚ್ ರಾಮೋಜಿರಾವ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶೈಲಜಾ ಕಿರಣ್ ಅವರ ವಿರುದ್ಧ ದೂರು ದಾಖಲಾಗಿದೆ. ಇವುಗಳಲ್ಲಿ ಮಾರ್ಗದರ್ಶಿ ಚಿಟ್​ಫಂಡ್ ನಗದು, ಬ್ಯಾಂಕ್​ ಖಾತೆಗಳಲ್ಲಿನ ಹಣ ಹಾಗೂ ನಿಯಮಗಳಿಗೆ ವಿರುದ್ಧವಾಗಿ ಮ್ಯೂಚುವಲ್​ ಫಂಡ್​ಗಳಲ್ಲಿ ಮಾಡಿರುವ ಹೂಡಿಕೆಗಳು ಕೂಡ ಸೇರಿವೆ.

ಚಿಟ್ ಚಂದಾದಾರರ ಮೊತ್ತವನ್ನು ಪಾವತಿಸುವ ಸ್ಥಿತಿಯಲ್ಲಿ ಮಾರ್ಗದರ್ಶಿ ಚಿಟ್​ಫಂಡ್​ಗಳು ಇಲ್ಲದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಠೇವಣಿದಾರರ ಹಕ್ಕುಗಳ ಸಂರಕ್ಷಣಾ ಕಾಯ್ದೆ 1999ರ ಅಡಿಯಲ್ಲಿ ಗೃಹ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ.

50 ಬ್ಯಾಂಕ್​ಗಳು ಹಾಗೂ ಮ್ಯೂಚುವಲ್ ಫಂಡ್ ಕಂಪನಿಗೂ ಮಾಹಿತಿ ನೀಡಲಾಗಿದೆ. ಬ್ಯಾಂಕುಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಹಣವನ್ನು ಬೇರೆಡೆಗೆ ತಿರುಗಿಸದೆ ಠೇವಣಿದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೇಂದ್ರ ಚಿಟ್​ ಫಂಡ್ ಕಾಯ್ದೆಯನ್ನು ಉ್ಲಲಂಘಿಸಿ ಮಾರ್ಗದರ್ಶಿ ಚಿಟ್​ ಫಂಡ್​ಗಳು ದಶಕಗಳಿಂದ ಹಣಕಾಸು ಅವ್ಯವಹಾರ ನಡೆಸುತ್ತಿರುವುದು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ತಪಾಸಣೆಯಿಂದ ತಿಳಿದುಬಂದಿದೆ.

ಕಳೆದ ವರ್ಷ ಡಿಸೆಂಬರ್​ನಿಂದ ರಾಜ್ಯದಲ್ಲಿ ಹೊಸ ಚಿಟ್​ಗಳನ್ನು ನೀಡುವುದನ್ನು ನಿಲ್ಲಿಸಿವೆ. 6 ತಿಂಗಳಿನಲ್ಲಿ 400 ಕೋಟಿ ರೂ. ವಹಿವಾಟು ಸ್ಥಗಿತಗೊಂಡಿದೆ. ಮತ್ತೊಂದೆಡೆ ಇವುಗಳನ್ನು ಪರಿಶೀಲಿಸಿದ ಸಿಐಡಿ ಮಾರ್ಗದರ್ಶಿ ಚಿಟ್ ಫಂಡ್​ಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡುವಂತೆ ಸರ್ಕಾರವನ್ನು ಕೋರಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ