ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹೆಣ್ಣುಮಕ್ಕಳ ಹಾಸ್ಟೆಲ್‌ನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಪ್ರತಿಭಟನೆ ಭುಗಿಲೆದ್ದಿದೆ ಮತ್ತು ವೀಡಿಯೊಗಳು ವಿದ್ಯಾರ್ಥಿಗಳಿಗೆ ತಲುಪಿತ್ತು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಅಂತಿಮ ವರ್ಷದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಗುಡ್ಲವಲ್ಲೇರು ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ ಹಾಸ್ಟೆಲ್‌ನಲ್ಲಿ ಹಾಕಲಾಗಿದ್ದ ಕ್ಯಾಮೆರಾ ವಿದ್ಯಾರ್ಥಿಯೊಬ್ಬನಿಗೆ ಸಿಕ್ಕಿದ್ದು, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಖಾಸಗಿತನದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಕ್ಯಾಮರಾದಲ್ಲಿ ದಾಖಲಾಗಿರುವ ಕೆಲವು ವಿಡಿಯೋಗಳು ಬಾಲಕರ ಹಾಸ್ಟೆಲ್‌ನಲ್ಲಿ ಹರಿದಾಡಿವೆ ಎನ್ನಲಾಗಿದೆ.
ನಮಗೆ ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗುತ್ತಾ ಕಾಲೇಜಿನಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಹಿಡನ್ ಕ್ಯಾಮೆರಾ ಇಟ್ಟವರು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.
ಮತ್ತಷ್ಟು ಓದಿ: ಉತ್ತರ ಪ್ರದೇಶ: ಕರೆಂಟ್ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಕ್ಯಾಮರಾ ಇರಿಸಿದ್ದ ಎಂದು ಹೇಳಲಾದ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಯಿತು. ವಿದ್ಯಾರ್ಥಿಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಯಾವುದೇ ಹಿಡನ್ ಕ್ಯಾಮೆರಾಗಳು ಪತ್ತೆಯಾಗಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೊಂಡಿದ್ದು, ಪೊಲೀಸ್ ತನಿಖೆಗೆ ಸಹಕರಿಸುವುದಾಗಿ ತಿಳಿಸಿದೆ. ಅವರು ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಭರವಸೆ ನೀಡಿದರು.
ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಯ ಸಮ್ಮುಖದಲ್ಲಿ ಆರೋಪಿಗಳ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರಿಶೀಲಿಸಲಾಗಿದ್ದು, ಯಾವುದೇ ಸಾಕ್ಷ್ಯಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ