Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆಯನ್ನು ಅ.19ಕ್ಕೆ ಮುಂದೂಡಿದ ಆಂಧ್ರ ಹೈಕೋರ್ಟ್​

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು(Chandrababu Naidu) ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಅಕ್ಟೋಬರ್ 19ಕ್ಕೆ ಮುಂದೂಡಿದೆ. ಚಂದ್ರಬಾಬು ನಾಯ್ಡು ಅವರ ಕಾನೂನು ತಂಡದ ಕೆಲವು ಸದಸ್ಯರು ಗೈರಾದ ಕಾರಣ, ಉಳಿದ ತಂಡಗಳು ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದವು. ಫೈಬರ್ ನೆಟ್ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಅಕ್ಟೋಬರ್ 18 ರವರೆಗೆ ಬಂಧಿಸುವುದಿಲ್ಲ ಎಂದು ಆಂಧ್ರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.

ಚಂದ್ರಬಾಬು ನಾಯ್ಡು
Follow us
ನಯನಾ ರಾಜೀವ್
|

Updated on: Oct 17, 2023 | 3:03 PM

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು(Chandrababu Naidu) ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಅಕ್ಟೋಬರ್ 19ಕ್ಕೆ ಮುಂದೂಡಿದೆ. ಚಂದ್ರಬಾಬು ನಾಯ್ಡು ಅವರ ಕಾನೂನು ತಂಡದ ಕೆಲವು ಸದಸ್ಯರು ಗೈರಾದ ಕಾರಣ, ಉಳಿದ ತಂಡಗಳು ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದವು. ಫೈಬರ್ ನೆಟ್ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಅಕ್ಟೋಬರ್ 18 ರವರೆಗೆ ಬಂಧಿಸುವುದಿಲ್ಲ ಎಂದು ಆಂಧ್ರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾಯ್ಡು ಸಲ್ಲಿಸಿದ ಮನವಿಯ ಮೇರೆಗೆ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಅಕ್ಟೋಬರ್ 17 ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

ಈ ವಾರದ ಆರಂಭದಲ್ಲಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್ ಆದೇಶದ ವಿರುದ್ಧ ನಾಯ್ಡು ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಅಂಗಲ್ಲು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಕಳೆದ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಮತ್ತಷ್ಟು ಓದಿ: Chandrababu Naidu: ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಿದ ಆಂಧ್ರ ಹೈಕೋರ್ಟ್, ಆದರೆ ಸದ್ಯಕ್ಕಿಲ್ಲ ಬಿಡುಗಡೆ

ಅಂಗಲ್ಲು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರೂ, ಚಂದ್ರಬಾಬು ನಾಯ್ಡು ಅವರನ್ನು ಕಳೆದ ತಿಂಗಳು ಸಿಐಡಿ ಬಂಧಿಸಿತ್ತು. ಇದೇ ವೇಳೆ ಕೌಶಲಾಭಿವೃದ್ಧಿ ಹಗರಣ ಸೇರಿದಂತೆ ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಂದ್ರಬಾಬುಗೆ ನ್ಯಾಯಾಂಗ ಬಂಧನ ಮುಂದುವರೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ

ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ

ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್

RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!

ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ

ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್

ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ

ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ

ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು

6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ