ನ್ಯಾಯಾಂಗ ನಿಂದನೆ ಪ್ರಕರಣ: ಆಂಧ್ರ ಪ್ರದೇಶದ ನಾಲ್ವರು ಐಎಎಸ್ ಅಧಿಕಾರಿ, ಓರ್ವ ನಿವೃತ್ತ ಅಧಿಕಾರಿಗೆ ಜೈಲು

Andhra Pradesh: ಶಿಕ್ಷೆಗೊಳಗಾದ ಐಎಎಸ್ ಅಧಿಕಾರಿಗಳಲ್ಲಿ ಪ್ರಧಾನ ಹಣಕಾಸು ಕಾರ್ಯದರ್ಶಿ ಶಂಶೇರ್ ಸಿಂಗ್ ರಾವತ್, ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ರೇವು ಮುತ್ಯಾಲ ರಾಜು, ಎಸ್ಪಿಎಸ್ ನೆಲ್ಲೂರು ಜಿಲ್ಲಾಧಿಕಾರಿ ಕೆವಿಎನ್ ಚಕ್ರಧರ ಬಾಬು ಮತ್ತು ಮಾಜಿ ಕಲೆಕ್ಟರ್ ಎಂ. ವಿ ಶೇಷಗಿರಿ ಬಾಬು ಸೇರಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣ: ಆಂಧ್ರ ಪ್ರದೇಶದ ನಾಲ್ವರು ಐಎಎಸ್ ಅಧಿಕಾರಿ, ಓರ್ವ ನಿವೃತ್ತ ಅಧಿಕಾರಿಗೆ ಜೈಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 03, 2021 | 12:01 PM

ಅಮರಾವತಿ: ಫೆಬ್ರವರಿ 10, 2017 ರ ನ್ಯಾಯಾಲಯದ ಆದೇಶ “ಉದ್ದೇಶಪೂರ್ವಕ ಅಸಹಕಾರ”  ಆರೋಪದಲ್ಲಿ ತಪ್ಪಿತಸ್ಥರೆಂದು ಕಂಡುಕೊಂಡ ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ನಾಲ್ವರು ಐಎಎಸ್ ಅಧಿಕಾರಿಗಳಿಗೆ ಮತ್ತು ಒಬ್ಬ ನಿವೃತ್ತ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ. ಮುಖ್ಯ ಕಾರ್ಯದರ್ಶಿ ಆದಿತ್ಯ ನಾಥ್ ದಾಸ್ ಸೇರಿದಂತೆ ಇತರ ಮೂವರು ಐಎಎಸ್ ಅಧಿಕಾರಿಗಳನ್ನು ಈ ಪ್ರಕರಣದಲ್ಲಿ ಬಿಡುಗಡೆ ಮಾಡಲಾಗಿದೆ. ಏಕೆಂದರೆ ಅವರ ಮೇಲಿನ ಆರೋಪವನ್ನು ವಜಾಗೊಳಿಸಲಾಗಿದೆ. ಶಿಕ್ಷೆಗೊಳಗಾದ ಐಎಎಸ್ ಅಧಿಕಾರಿಗಳಲ್ಲಿ ಪ್ರಧಾನ ಹಣಕಾಸು ಕಾರ್ಯದರ್ಶಿ ಶಂಶೇರ್ ಸಿಂಗ್ ರಾವತ್, ಮುಖ್ಯಮಂತ್ರಿಯವರ ಹೆಚ್ಚುವರಿ ಕಾರ್ಯದರ್ಶಿ ರೇವು ಮುತ್ಯಾಲ ರಾಜು, ಎಸ್ಪಿಎಸ್ ನೆಲ್ಲೂರು ಜಿಲ್ಲಾಧಿಕಾರಿ ಕೆವಿಎನ್ ಚಕ್ರಧರ ಬಾಬು ಮತ್ತು ಮಾಜಿ ಕಲೆಕ್ಟರ್ ಎಂ. ವಿ ಶೇಷಗಿರಿ ಬಾಬು ಸೇರಿದ್ದಾರೆ.

ಮುತ್ಯಾಲ ರಾಜು ಈ ಹಿಂದೆ ಎಸ್ಪಿಎಸ್ ನೆಲ್ಲೂರು ಜಿಲ್ಲೆಯ ಕಲೆಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದರು. 2017 ರಲ್ಲಿ ಆಗಿನ ಪ್ರಧಾನ ಕಾರ್ಯದರ್ಶಿ (ಕಂದಾಯ) ಆಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಮನಮೋಹನ್ ಸಿಂಗ್ ಕೂಡ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾರೆ.

ನ್ಯಾಯಮೂರ್ತಿ ಬಟ್ಟು ದೇವಾನಂದ್ ಅವರು ಎಸ್‌ಪಿಎಸ್ ನೆಲ್ಲೂರು ಜಿಲ್ಲೆಯ ಕೃಷಿಕ ತಲ್ಲಪಕ ಸಾವಿತ್ರಮ್ಮ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ಮೇಲೆ ಆದೇಶವನ್ನು ಪ್ರಕಟಿಸಿದರು. ರಾವತ್ ಮತ್ತು ಸಿಂಗ್ ಅವರಿಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ ಇತರರಿಗೆ ಎರಡು ವಾರಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರತಿಯೊಬ್ಬರಿಗೂ ₹ 1,000 ದಂಡವನ್ನೂ ವಿಧಿಸಲಾಗಿದೆ.

ಅರ್ಜಿದಾರರ ವಕೀಲ ಸಿ ವಾಣಿ ರೆಡ್ಡಿ ಪ್ರಕಾರ ನ್ಯಾಯಾಧೀಶರಾದ ದೇವಾನಂದ್, ಶಿಕ್ಷೆಗೊಳಗಾದವರಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲ ಶಿಕ್ಷೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದರು. ತಲ್ಲಪಕ ಸಾವಿತ್ರಮ್ಮ ಅವರು 2017 ರಲ್ಲಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಮೂರು ಎಕರೆ ಅಳತೆಯ ಭೂಮಿಯನ್ನು ಕಂದಾಯ ಅಧಿಕಾರಿಗಳು ಯಾವುದೇ ಸೂಚನೆ ಅಥವಾ ಪರಿಹಾರ ಪಾವತಿಯಿಲ್ಲದೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಗೆ ಮಂಜೂರು ಮಾಡಿದ್ದಾರೆ.

ಡಿಸೆಂಬರ್ 2016 ರಲ್ಲಿ, ಕಂದಾಯ ಅಧಿಕಾರಿಗಳು ಭೂಮಿಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು ಮತ್ತು ಅದನ್ನು ಲೋಕಾಯುಕ್ತಕ್ಕೆ ವರದಿ ಮಾಡಲಾಯಿತು ಎಂದು ಅವರು ಹೇಳಿದರು.

ಹೈಕೋರ್ಟ್‌ನ ನ್ಯಾಯಮೂರ್ತಿ ಎ ರಾಜಶೇಖರ್ ರೆಡ್ಡಿ, ಫೆಬ್ರವರಿ 10, 2017 ರಂದು ಅರ್ಜಿದಾರರ ಪರವಾಗಿ ತೀರ್ಪು ನೀಡಿದರು ಮತ್ತು ಮೂರು ತಿಂಗಳಲ್ಲಿ ಆಕೆಗೆ ಪರಿಹಾರವನ್ನು ಪಾವತಿಸುವಂತೆ ಸಂಬಂಧಿಸಿದ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.

2018 ರಲ್ಲಿ ಕಂದಾಯ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಅನುಷ್ಠಾನಗೊಳಿಸದ ಕಾರಣ ತಲ್ಲಪಕ ಸಾವಿತ್ರಮ್ಮ ಅವರು ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಿದ್ದಾರೆ.  ಈ ವರ್ಷ ಜೂನ್ ನಲ್ಲಿ ನ್ಯಾಯಮೂರ್ತಿ ದೇವಾನಂದ್ ಅವಹೇಳನ ಪ್ರಕರಣವನ್ನು ಆಲಿಸುವಾಗ, ದಾಖಲೆಗಳಲ್ಲಿ ಲಭ್ಯವಿರುವ ವಸ್ತುಗಳಿಂದ ಕಂದಾಯ ವಿಭಾಗೀಯ ಅಧಿಕಾರಿಯು ಜುಲೈ 6, 2020 ರಂದು ಖಾತೆಗಳಿಗೆ ಬಿಲ್​​ಗಳನ್ನು ಸಲ್ಲಿಸಿದ್ದನ್ನು ಗಮನಿಸಿದರು. ಆದರೆ ಅವುಗಳನ್ನು ಮಾರ್ಚ್ 30, 2021 ರವರೆಗೆ ತೆರವುಗೊಳಿಸಲಾಗಿಲ್ಲ.

ನ್ಯಾಯಾಲಯದ ಅಭಿಪ್ರಾಯದಲ್ಲಿ, ಬಿಲ್ ಗಳನ್ನು ತೆರವುಗೊಳಿಸಲು ಮತ್ತು ಅರ್ಜಿದಾರರಿಗೆ ಪರಿಹಾರವನ್ನು ಪಾವತಿಸಲು ಪ್ರಧಾನ ಲೆಕ್ಕಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಎಂಟು ತಿಂಗಳು ವಿಳಂಬವಾಯಿತು ಎಂದು ಅವರು ಗಮನಿಸಿದರು. ಆಗಸ್ಟ್ ನಲ್ಲಿ ನ್ಯಾಯಾಧೀಶರು ಪ್ರತಿವಾದಿಗಳ ವಾದಗಳನ್ನು ಆಲಿಸಿದರು ಮತ್ತು ತೀರ್ಪನ್ನು ಕಾಯ್ದಿರಿಸಿದ್ದರು.

ಇದನ್ನೂ ಓದಿ:  ನನ್ನ ಉತ್ತರಾಧಿಕಾರಿಯನ್ನು ಈಗ ನೇಮಕ ಮಾಡುತ್ತಿಲ್ಲ, ಆದರೆ ಅವರು ದಲಿತ ಸಮುದಾಯದವರೇ ಆಗಿರುತ್ತಾರೆ: ಮಾಯಾವತಿ

ಇದನ್ನೂ ಓದಿ: ಗಲ್ಲಿಗಲ್ಲಿಯಲ್ಲಿ ಗಣೇಶ ಮೂರ್ತಿ ಕೂರಿಸುವಂತಿಲ್ಲ; ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ

(Andhra Pradesh High Court sentenced four serving IAS officers 1 Retired For guilty of contempt)

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ