AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್​ನಲ್ಲಿ ಮಾತನಾಡುತ್ತಿರುವಾಗ ಗದರಿದ್ದಕ್ಕೆ ಗಂಡನನ್ನೇ ಹತ್ಯೆಗೈದ ಪತ್ನಿ

ಫೋನ್​ನಲ್ಲಿ ಯಾಕಿಷ್ಟು ಮಾತಾಡ್ತೀಯ ಎಂದು ಗದರಿದ್ದಕ್ಕೆ ಪತ್ನಿ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ನಡೆದಿದೆ. ಎಲ್ಲದಕ್ಕೂ ಪತಿ ಮೂಗು ತೂರಿಸಿಕೊಂಡು ಬರುತ್ತಾರೆ ಎಂದು ಕೋಪಗೊಂಡು ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾಳೆ. ಕುಟುಂಬ ಸದಸ್ಯರು ಆತನನ್ನು ಹುತಾ ಹುತಿನಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಫೋನ್​ನಲ್ಲಿ ಮಾತನಾಡುತ್ತಿರುವಾಗ ಗದರಿದ್ದಕ್ಕೆ ಗಂಡನನ್ನೇ ಹತ್ಯೆಗೈದ ಪತ್ನಿ
ಮೊಬೈಲ್
ನಯನಾ ರಾಜೀವ್
|

Updated on:Dec 12, 2025 | 2:52 PM

Share

ಚಿಂತಪಲ್ಲಿ, ಡಿಸೆಂಬರ್ 12:ಫೋನ್​ನಲ್ಲಿ ಯಾಕಿಷ್ಟು ಮಾತಾಡ್ತೀಯ ಎಂದು ಗದರಿದ್ದಕ್ಕೆ ಪತ್ನಿ ಪತಿಯನ್ನೇ ಹತ್ಯೆ(Murder) ಮಾಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ನಡೆದಿದೆ. ಎಲ್ಲದಕ್ಕೂ ಪತಿ ಮೂಗು ತೂರಿಸಿಕೊಂಡು ಬರುತ್ತಾರೆ ಎಂದು ಕೋಪಗೊಂಡು ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾಳೆ. ಕುಟುಂಬ ಸದಸ್ಯರು ಆತನನ್ನು ಹುತಾ ಹುತಿನಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅಲ್ಲೂರಿ ಜಿಲ್ಲೆಯ ಚಿಂತಪಲ್ಲಿ ಮಂಡಲದ ಮೇದೂರಿನ ನಿವಾಸಿ ರಾಜಾ ರಾವ್, ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಯಾವಾಗ ನೋಡಿದರೂ ಪತ್ನಿ ಮೊಬೈಲ್​ ಕಾಲ್​ನಲ್ಲಿಯೇ ಇರುತ್ತಿರುವುದನ್ನು ಕಂಡು ಕೋಪಗೊಂಡಿದ್ದ ಪತಿ ರಾಜಾ ರಾವ್ ಪತ್ನಿಗೆ ಗದರಿದ್ದರು.

ರಾಜಾ ರಾವ್ ಪತ್ನಿಗೆ ಮಾತನಾಡುವುದನ್ನು ಕಡಿಮೆ ಮಾಡಲು ಸಲಹೆ ನೀಡಿದರು. ಇದು ಇಬ್ಬರ ನಡುವೆ ಜಗಳಕ್ಕೆ ಕಾರಣವಾಗಿತ್ತು, ಜಗಳ ಅತಿರೇಕಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯಗೊಂಡಿದೆ.

ಮತ್ತಷ್ಟು ಓದಿ: ಗರ್ಭಿಣಿ ಪತ್ನಿಯಿಂದ ದೂರವಾಗಿದ್ದ ಪತಿಯಿಂದ ಆಕೆಯ ಲಿವ್-ಇನ್ ಸಂಗಾತಿಯ ಹತ್ಯೆ

ದೇವಿ ಕೂಡಲೇ ಹತ್ತಿರದಲ್ಲಿದ್ದ ಕೊಡಲಿಯನ್ನು ಕೈಲೆತ್ತಿಕೊಂಡು ಕೊಡಲಿಗೆ ಜೋಡಿಸಲಾದ ಕೋಲಿನಿಂದ ತನ್ನ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ರಾಜಾ ರಾವ್ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕಳುಹಿಸಲಾಯಿತು.

ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕೆಜಿಎಚ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ರಾಜಾ ರಾವ್ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:50 pm, Fri, 12 December 25

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್