AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಸಿಂಹದ ಜತೆ ಸೆಲ್ಫಿ ತೆಗೆಯಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ (ಎಸ್‌ವಿ ಮೃಗಾಲಯ) ಗುರುವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ಸಿಂಹದ ದಾಳಿಯಿಂದ ಸಾವನ್ನಪ್ಪಿದ್ದಾರೆ. ವ್ಯಕ್ತಿ ಆ ಸಂದರ್ಭದಲ್ಲಿ ಮತ್ತಿನಲ್ಲಿದ್ದರು ಎಂಬುದು ತಿಳಿದುಬಂದಿದೆ.

ಆಂಧ್ರಪ್ರದೇಶ: ಸಿಂಹದ ಜತೆ ಸೆಲ್ಫಿ ತೆಗೆಯಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ
ಸಿಂಹImage Credit source: San Francisco Zoo & Gardens
Follow us
ನಯನಾ ರಾಜೀವ್
|

Updated on: Feb 16, 2024 | 9:01 AM

ಸಿಂಹ(Lion)ದ ಜತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿಯೊಬ್ಬ ಪ್ರಾಣವನ್ನೇ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಝೂಲಾಜಿಕಲ್ ಪಾರ್ಕ್‌ನಲ್ಲಿ ನಡೆದಿದೆ. ಅಮಲೇರಿದ ಸ್ಥಿತಿಯಲ್ಲಿದ್ದ ಪ್ರಹ್ಲಾದ್ ಗುಲ್ಜಾರ್ ಸಿಂಹಗಳಿಗೆ ಸೆಲ್ಫಿ ತೆಗೆದುಕೊಳ್ಳಲು ಸಿಂಹಕ್ಕೆ ಮೀಸಲಾದ ಆವರಣವನ್ನು ಪ್ರವೇಶಿಸಿದ್ದಾರೆ. ಈ ಆವರಣವು ಮೃಗಾಲಯದ ಅಧಿಕಾರಿಗಳು ಪ್ರಾಣಿಗಳಿಗೆ ಆಹಾರವನ್ನು ಒದಗಿಸುವ ಸ್ಥಳವಾಗಿತ್ತು, ಸಿಂಹದ ಬಳಿ ಹೋಗಲು ತಲುಪಲು ಗುಲ್ಜಾರ್ ಕೊನೆಯ ಗೇಟ್ ಕೂಡ ದಾಟಿದ್ದರು.  ಸಿಂಹವು ಅವರ ಮೇಲೆ ದಾಳಿ ದಾಳಿ ನಡೆಸಿ ಕೊಂದು ಹಾಕಿದೆ.

ಪ್ರಾಣ ಉಳಿಸಿಕೊಳ್ಳಲು ಪಕ್ಕದಲ್ಲಿದ್ದ ಮರವನ್ನು ಹತ್ತಿದ್ದರು ಆದರೆ ಭಯದಿಂದ ಮರದಿಂದ ಬಿದ್ದು ಕೆಲವೇ ನಿಮಿಷಗಳಲ್ಲಿ ಸಿಂಹ ದಾಳಿ ಮಾಡಿತು. ಸಿಂಹ ಆತನನ್ನು ಶರ್ಟ್ ಮತ್ತು ಪ್ಯಾಂಟ್ ಸಹಾಯದಿಂದ ಮೇಲಕ್ಕೆಳೆದು ಕುತ್ತಿಗೆಗೆ ದಾಳಿ ಮಾಡಿತ್ತು. ಘಟನೆಯನ್ನು ನೋಡಿದ ನಂತರ ಮೃಗಾಲಯದಲ್ಲಿದ್ದ ಅಧಿಕಾರಿಗಳು ಭಯಗೊಂಡರು.

ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಗಳು ಆರಂಭಿಸಿದ್ದಾರೆ, ಘಟನೆ ನಡೆದ ನಂತರ ಯಾರಿಗೂ ಆ ಸ್ಥಳಕ್ಕೆ ಪ್ರವೇಶಿಸಲು ಅವಕಾಶ ನೀಡಿರಲಿಲ್ಲ. ಉದ್ಯಾನದ ಅಧಿಕಾರಿಗಳ ಪ್ರಕಾರ, ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಸಿಂಹಗಳು ಮತ್ತು ಹುಲಿಗಳು ಸೇರಿದಂತೆ ಕಾಡು ಪ್ರಾಣಿಗಳಿಗೆ ಪ್ರತ್ಯೇಕ ಆವರಣಗಳಿವೆ.

ಮತ್ತಷ್ಟು ಓದಿ: ಚಾಮರಾಜನಗರ: ಕುರಿಗಾಹಿಗಳ ಮೇಲೆ ಹುಲಿ ದಾಳಿ: ಇಬ್ಬರಿಗೆ ಗಾಯ

ಆದರೆ ಸಿಂಹದೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಉತ್ಸಾಹದಿಂದ ಪ್ರಹ್ಲಾದ್ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಧಿಕ್ಕರಿಸಿ ಅದರ ಆವರಣವನ್ನು ಪ್ರವೇಶಿಸಿ ದುರಂತ ಕಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್