ಆಂಧ್ರಪ್ರದೇಶ: ವಿಜಯವಾಡದಲ್ಲಿ ಮಂಕಿಪಾಕ್ಸ್? ಸೋಂಕಿತ ಮಗುವಿನ ಮಾದರಿ ಪುಣೆ ಲ್ಯಾಬ್‌ಗೆ ಸಾಗಣೆ

ಜಗತ್ತಿನಾದ್ಯಂತ ಕೆಲ ದೇಶಗಳನ್ನು ತಲ್ಲಣಗೊಳಿಸಿರುವ ಮಂಕಿಪಾಕ್ಸ್ ವೈರಸ್ ಆಂಧ್ರದ ವಿಜಯವಾಡದಲ್ಲಿ ತಲ್ಲಣ ಮೂಡಿಸಿದೆ. ಮಗುವಿನಲ್ಲಿ ರೋಗದ ಲಕ್ಷಣಗಳಿವೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಆಂಧ್ರಪ್ರದೇಶ: ವಿಜಯವಾಡದಲ್ಲಿ ಮಂಕಿಪಾಕ್ಸ್? ಸೋಂಕಿತ ಮಗುವಿನ ಮಾದರಿ ಪುಣೆ ಲ್ಯಾಬ್‌ಗೆ ಸಾಗಣೆ
ಆಂಧ್ರಪ್ರದೇಶ: ವಿಜಯವಾಡದಲ್ಲಿ ಮಂಕಿಪಾಕ್ಸ್? ಸೋಂಕಿತ ಮಗುವಿನ ಮಾದರಿ ಪುಣೆ ಲ್ಯಾಬ್‌ಗೆ ಸಾಗಣೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 17, 2022 | 3:58 PM

ಜಗತ್ತಿನಾದ್ಯಂತ ನಾನಾ ದೇಶಗಳನ್ನು ತಲ್ಲಣಗೊಳಿಸುತ್ತಿರುವ ಮಂಕಿಪಾಕ್ಸ್ ಸೋಂಕು (Monkey pox) ಆಂಧ್ರದ ವಿಜಯವಾಡದಲ್ಲಿ (Vijayawada) ತಲ್ಲಣ ಮೂಡಿಸಿದೆ. ಮಗುವಿನಲ್ಲಿ ರೋಗದ ಲಕ್ಷಣಗಳಿವೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ದುಬೈನಿಂದ ಬಂದಿದ್ದ ಕುಟುಂಬದ ಮಗುವಿನ ಮೈಮೇಲೆ ದದ್ದು ಕಾಣಿಸಿಕೊಂಡಿದ್ದು, ಮಂಕಿಪಾಕ್ಸ್ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ತಕ್ಷಣ ಎಚ್ಚೆತ್ತ ವೈದ್ಯಾಧಿಕಾರಿಗಳು ಮಗುವನ್ನು ವಿಜಯವಾಡದ ಹಳೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಮಾದರಿಗಳನ್ನು ಸಂಗ್ರಹಿಸಿ ಪುಣೆಯ ಲ್ಯಾಬ್‌ಗೆ ಕಳುಹಿಸಲಾಗಿದೆ.

ಮಂಕಿಪಾಕ್ಸ್ ಸಿಡುಬು ಕುಟುಂಬಕ್ಕೆ ಸೇರಿದ ವೈರಲ್ ಕಾಯಿಲೆಯಾಗಿದೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಇಲಿ, ಜಿರಳೆ, ಅಳಿಲು ಮುಂತಾದ ಜೀವಿಗಳ ಮೂಲಕ ಈ ವೈರಸ್ ಹರಡುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ತಜ್ಞರು. ಏತನ್ಮಧ್ಯೆ, ಕೆಲವು ಪ್ರದೇಶಗಳಲ್ಲಿ ಮಂಪ್ಸ್ ಹೆಚ್ಚು ಹರಡಲು ಲೈಂಗಿಕತೆಯು ಮುಖ್ಯ ಕಾರಣ ಎಂದೂ WHO ಹೇಳಿದೆ. ಸಿಡುಬಿನಂತೆಯೇ, ಸಿಡುಬು ರೋಗಕ್ಕೆ ತುತ್ತಾದ ವ್ಯಕ್ತಿಯು ಜ್ವರ, ತಲೆನೋವು, ಊತ, ಬೆನ್ನು ನೋವು, ಸ್ನಾಯು ನೋವು ಮತ್ತು ಆಲಸ್ಯದಂತಹ ಲಕ್ಷಣಗಳನ್ನು ಹೊಂದಿರುತ್ತಾರೆ. ಮುಖ, ಕೈ ಮತ್ತು ಕಾಲುಗಳ ಮೇಲೆ ದದ್ದುಗಳು ಮತ್ತು ಗುಳ್ಳೆಗಳು ಉಂಟಾಗುತ್ತವೆ. ಸೋಂಕಿತರಲ್ಲಿ ಹೆಚ್ಚಿನವರು ಚೇತರಿಸಿಕೊಳ್ಳುತ್ತಾರೆ. ಕೆಲವರಿಗೆ ಮಾತ್ರ ಮಾರಣಾಂತಿಕವಾಗುವ ಸಾಧ್ಯತೆ ಇರುತ್ತದೆ.

ದೇಶದಲ್ಲಿ ಮಂಕಿಪಾಕ್ಸ್ ಹರಡುತ್ತಿರುವ ಬಗ್ಗೆ ತೆಲಂಗಾಣ ಸರ್ಕಾರ ಎಚ್ಚೆತ್ತುಕೊಂಡಿದೆ. ಇದುವರೆಗೆ ವಿಶ್ವದಾದ್ಯಂತ ಆರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ವೈರಸ್‌ನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಸಿಕಂದರಾಬಾದ್ ಗಾಂಧಿ ಆಸ್ಪತ್ರೆಯಲ್ಲಿ ಮಂಕಿಪಾಕ್ಸ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ತೆಲಂಗಾಣದಲ್ಲಿ ಮಂಕಿಪಾಕ್ಸ್ ಹರಡುವ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಿ, ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಕರೋನಾ RTPCR ಪರೀಕ್ಷೆಗಳಂತೆಯೇ, ಮಂಕಿಪಾಕ್ಸ್ ಪರೀಕ್ಷೆಗಳನ್ನು ಮಾಡಲಾಗುತ್ತದೆ.

ಇದೇ ವೇಳೆ ವೇಗವಾಗಿ ಹರಡುತ್ತಿರುವ ಮಂಕಿಪಾಕ್ಸ್ ಈಗಾಗಲೇ 59 ದೇಶಗಳಿಗೆ ವ್ಯಾಪಿಸಿದೆ. ಈ ಪ್ರಕರಣಗಳು ಹೆಚ್ಚಾಗಿ ಯುರೋಪ್ ಮತ್ತು ಆಫ್ರಿಕಾದಲ್ಲಿ ದಾಖಲಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಹಿರಂಗಪಡಿಸಿದೆ. ಆದಾಗ್ಯೂ, ಈ ಪ್ರಕರಣಗಳು ಸಲಿಂಗಕಾಮಿಗಳಲ್ಲಿ ವಿಶೇಷವಾಗಿ ಪ್ರಚಲಿತವಾಗಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

To read in Telugu Click here

Published On - 3:32 pm, Sun, 17 July 22

ಈ ರಾಶಿಯವರು ಇಂದು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ
ಈ ರಾಶಿಯವರು ಇಂದು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ ಇದೆ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ