AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ಉದಯಗಿರಿಯ ಆನಕಟ್ಟಾ ಪ್ರದೇಶದ ಬಳಿ ಛಿದ್ರಗೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಮತ್ತು ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳು ಅಕ್ರಮ ಗರ್ಭಪಾತ ಮತ್ತು ನಿರ್ಲಕ್ಷ್ಯ ಕುರಿತು ಆರೋಪ ಮಾಡಲಾಗಿದೆ.

ಆಂಧ್ರಪ್ರದೇಶ: ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ಮಗು
ನಯನಾ ರಾಜೀವ್
|

Updated on: May 20, 2024 | 8:03 AM

Share

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಚರಂಡಿಯಲ್ಲಿ ನವಜಾತ ಶಿಶು(New Born Baby)ವಿನ ಶವ ಪತ್ತೆಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಉದಯಗಿರಿಯ ಆನಕಟ್ಟಾ ಪ್ರದೇಶದ ಬಳಿ ಛಿದ್ರಗೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಮತ್ತು ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಗಳು ಅಕ್ರಮ ಗರ್ಭಪಾತ ಮತ್ತು ನಿರ್ಲಕ್ಷ್ಯ ಕುರಿತು ಆರೋಪ ಮಾಡಲಾಗಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಗಿರಿಬಾಬು ತನಿಖೆಯ ನೇತೃತ್ವ ವಹಿಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತೊಂದು ಘಟನೆ

 ಚರಂಡಿಯಲ್ಲಿ 4 ವರ್ಷದ ಮಗುವಿನ ಶವ ಪತ್ತೆ, ಬಿಹಾರದಲ್ಲಿ ಭುಗಿಲೆದ್ದ ಪ್ರತಿಭಟನೆ ಬಿಹಾರದ ಶಾಲೆಯೊಂದರ ಪಕ್ಕದಲ್ಲಿದ್ದ ಚರಂಡಿಯಲ್ಲಿ 4 ವರ್ಷದ ಮಗುವಿನ ಶವ ಪತ್ತೆಯಾಗಿದೆ. ಪೋಷಕರು ಸೇರಿದಂತೆ ಗ್ರಾಮದ ಹಲವು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಲೆಯಲ್ಲೇ ಮಗುವನ್ನು ಕೊಲೆ ಮಾಡಿ ಶವವನ್ನು ತರಗತಿ ಕೊಠಡಿಯ ಚರಂಡಿಗೆ ಎಸೆದಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಜನರು ಬೀದಿಗಿಳಿದಿದ್ದಾರೆ. ಜನರು ಡಣಾಪುರ-ಗಾಂಧಿ ಮೈದಾನ ರಸ್ತೆ ತಡೆ ನಡೆಸಿದರು.

ಮತ್ತಷ್ಟು ಓದಿ: ಮೇಲುಕೋಟೆ ಬಳಿ ನವಜಾತ ಶಿಶುವಿನ ಶವ ಪತ್ತೆ; ಹೆಣ್ಣು ಎಂಬ ಕಾರಣಕ್ಕೆ ಬಿಸಾಡಿದರಾ?

ರಸ್ತೆಯಲ್ಲಿ ಟೈರ್‌ಗಳನ್ನು ಸುಟ್ಟು ತೀವ್ರ ಪ್ರತಿಭಟನೆ ನಡೆಸಿದರು. ಸಿಟ್ಟಿಗೆದ್ದ ಜನರು ಶಾಲೆಗೆ ನುಗ್ಗಿ ಧ್ವಂಸ ಮಾಡಿದ್ದಾರೆ. ಅಷ್ಟೇ ಅಲ್ಲ ಶಾಲೆಯ ಹಲವು ಕೊಠಡಿಗಳಿಗೂ ಬೆಂಕಿ ಹಚ್ಚಲಾಗಿದೆ. ಶಾಲಾ ವಾಹನಗಳಿಗೂ ಹಾನಿಯಾಗಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆ ಈ ಮಾರ್ಗವಾಗಿ ಸಂಚರಿಸುವ ಜನರು, ಇತರೆ ಶಾಲೆಗಳ ಮಕ್ಕಳು, ಶಿಕ್ಷಕರು ಸಹ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು.

ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ . ಪೊಲೀಸರು ಜನರ ಮನವೊಲಿಸುವ ಮೂಲಕ ಸಮಾಧಾನಪಡಿಸಲು ಪ್ರಯತ್ನಿಸಿದರು. ಎಲ್ಲರೂ ಹಂತಕನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ, ನಾಲ್ಕು ವರ್ಷದ ಮಗುವಿನ ಶವ ಪತ್ತೆಯಾದ ನಂತರ ನೂರಾರು ಜನರು ರಸ್ತೆಯಲ್ಲಿ ಜಮಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ