Andhra Pradesh: ಮೋಸದ ಬಲೆ ಬೀಸಿ, ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಶಿಕ್ಷಕನ ಬಂಧನ

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

Andhra Pradesh: ಮೋಸದ ಬಲೆ ಬೀಸಿ, ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಶಿಕ್ಷಕನ ಬಂಧನ
ಪೊಲೀಸ್

Updated on: Apr 02, 2023 | 12:43 PM

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಿಕ್ಷಕ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 12ನೇ ತರಗತಿಯಲ್ಲಿ ಓದುತ್ತಿರುವ 17 ವರ್ಷದ ಬಾಲಕಿಯನ್ನು ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಬಾಲಕಿಗೆ ಅಂತಿಮ ಪರೀಕ್ಷೆ ಇದ್ದು, ಪರೀಕ್ಷೆ ಮುಗಿದ ಬಳಿಕ ಆರೋಪಿ ಚಲಪತಿ ಸುಳ್ಳು ಹೇಳಿ ಬಾಲಕಿಯನ್ನು ತಿರುಪತಿಗೆ ಕರೆದುಕೊಂಡು ಹೋಗಿದ್ದರು. ಅವರಿಬ್ಬರೂ ಅಲ್ಲಿರುವ ದೇವಸ್ಥಾನದಲ್ಲಿ ಮದುವೆಯಾದರು, ನಂತರ, ಹುಡುಗಿ ಚಲಪತಿಯ ವರ್ತನೆಯಲ್ಲಿ ಬದಲಾವಣೆಯನ್ನು ಗಮನಿಸಿದಳು.

ಮತ್ತಷ್ಟು ಓದಿ: Chikkaballapur: ಫೋಟೋ ಶೂಟ್​​ ಮಾಡಲು ಹೋಗಿ 3 ವಿದ್ಯಾರ್ಥಿಗಳು ನೀರು ಪಾಲು: ಚಿಕ್ಕಬಳ್ಳಾಪುರದಲ್ಲಿ ಹೃದಯ ವಿದ್ರಾವಕ ಘಟನೆ

ನಂತರ ಹುಡುಗಿ ತನ್ನ ಪೋಷಕರಿಗೆ ಸಂಪೂರ್ಣ ಘಟನೆಯ ಬಗ್ಗೆ ವಿವರಿಸಿದ್ದಳು, ನಂತರ ಗುರುವಾರ ರಾತ್ರಿ ತನ್ನ ಪೋಷಕರೊಂದಿಗೆ ಬಾಲಕಿ ಗಂಗವರಂ ಪೊಲೀಸ್ ಠಾಣೆಗೆ ತಲುಪಿ ಎಫ್ಐಆರ್ ದಾಖಲಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us