ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ತಿಮ್ಮಂಪೇಟ ಸಮೀಪದ ಬಾಳೆ ತೋಟದಲ್ಲಿ ದಿನಗೂಲಿ ಕೆಲಸ ಮುಗಿಸಿ ವಾಪಸಾಗುತ್ತಿದ್ದ ವೇಳೆ ಗಾರ್ಲದಿನ್ನೆ ಮಂಡಲದ ತಳಗಾಸಿಪಲ್ಲಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಮೃತರನ್ನು ಡಿ ನಾಗಮ್ಮ, ರಾಮಾಂಜಿನಮ್ಮ, ಬಾಲಪೆದ್ದಯ್ಯ ಮತ್ತು ಬಿ ನಾಗಮ್ಮ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 13 ಜನರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು ಮತ್ತು ಅವರನ್ನು ಪುಟ್ಲೂರು ಮಂಡಲದ ಎಲುಟ್ಲ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ರಸ್ತೆ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
పొట్టకూటి కోసం కూలీ పనులకు వెళ్లొస్తూ వారు రోడ్డు ప్రమాదంలో చనిపోవడంపై ఆవేదన వ్యక్తం చేశారు. బాధిత కుటుంబాలను ప్రభుత్వం ఆదుకుంటుందని భరోసా ఇచ్చారు. మరణించిన వారి కుటుంబానికి రూ.5 లక్షల చొప్పున పరిహారం ప్రకటించారు. (2/3)
— CMO Andhra Pradesh (@AndhraPradeshCM) November 23, 2024
ಘಟನೆಯಲ್ಲಿ ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗುವಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳುವಂತೆ ನಾಯ್ಡು ಅವರು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:36 am, Sun, 24 November 24