AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಕಾಲ್ತುಳಿತವಾಗಿ 9 ಜನ ಸಾವು; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಆಂಧ್ರಪ್ರದೇಶದ ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಏಕಾದಶಿ ಸಂದರ್ಭದಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರಿ ಜನಸಮೂಹ ಜಮಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ. ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಆಂಧ್ರದಲ್ಲಿ ಕಾಲ್ತುಳಿತವಾಗಿ 9 ಜನ ಸಾವು; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
Andhra Stampede
ಸುಷ್ಮಾ ಚಕ್ರೆ
|

Updated on:Nov 01, 2025 | 9:47 PM

Share

ನವದೆಹಲಿ, ನವೆಂಬರ್ 1: ಆಂಧ್ರಪ್ರದೇಶದ (Andhra Pradesh) ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

“ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ, 9 ಮಂದಿ ಸಾವು

ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ.

ಅಮಿತ್ ಶಾ ಸಂತಾಪ:

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಮೃತರ ಕುಟುಂಬಸ್ಥರಿಗೆ ಈ ಆಘಾತ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕರೂರು ಕಾಲ್ತುಳಿತ ಘಟನೆ: ಸಿಬಿಐಗೆ ತನಿಖೆ ಹೊಣೆ ವಹಿಸಿದ ಸುಪ್ರೀಂಕೋರ್ಟ್

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಮಾಡಿದ ಪೋಸ್ಟ್‌ನಲ್ಲಿ ಅವರು ಈ ದುರಂತ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. ಅವರು ದುಃಖಿತ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

ಏಕಾದಶಿಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಾಲಯದಲ್ಲಿ ದೇಚರ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 9 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಸುಮಾರು 3,000ರಿಂದ 5,000 ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಬಹುದಾದ ದೇವಾಲಯದ ಆವರಣದಲ್ಲಿ 25,000ಕ್ಕೂ ಹೆಚ್ಚು ಜನರು ಪಾದಯಾತ್ರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Sat, 1 November 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ