
ನವದೆಹಲಿ, ನವೆಂಬರ್ 1: ಆಂಧ್ರಪ್ರದೇಶದ (Andhra Pradesh) ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 9 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
“ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಕಾಲ್ತುಳಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
A tragic stampede at Kasibugga Venkateswara Temple in Srikakulam district claimed nine lives and left dozens injured on Ekadashi. Despite prior knowledge of the massive turnout, the TDP-led coalition government and officials failed to arrange proper crowd control, security, or… pic.twitter.com/2u4Um7FPIT
— YSR Congress Party (@YSRCParty) November 1, 2025
ಇದನ್ನೂ ಓದಿ: ಆಂಧ್ರ ಪ್ರದೇಶ: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ, 9 ಮಂದಿ ಸಾವು
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ.
Pained by the stampede in Venkateswara Swamy Temple in Srikakulam, Andhra Pradesh. My thoughts are with those who have lost their near and dear ones. I pray that the injured recover soon.
An ex-gratia of Rs. 2 lakh each from PMNRF would be given to the next of kin of those who…
— PMO India (@PMOIndia) November 1, 2025
ಅಮಿತ್ ಶಾ ಸಂತಾಪ:
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಮೃತರ ಕುಟುಂಬಸ್ಥರಿಗೆ ಈ ಆಘಾತ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಕರೂರು ಕಾಲ್ತುಳಿತ ಘಟನೆ: ಸಿಬಿಐಗೆ ತನಿಖೆ ಹೊಣೆ ವಹಿಸಿದ ಸುಪ್ರೀಂಕೋರ್ಟ್
ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಮಾಡಿದ ಪೋಸ್ಟ್‌ನಲ್ಲಿ ಅವರು ಈ ದುರಂತ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. ಅವರು ದುಃಖಿತ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.
ಏಕಾದಶಿಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಾಲಯದಲ್ಲಿ ದೇಚರ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 9 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಸುಮಾರು 3,000ರಿಂದ 5,000 ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಬಹುದಾದ ದೇವಾಲಯದ ಆವರಣದಲ್ಲಿ 25,000ಕ್ಕೂ ಹೆಚ್ಚು ಜನರು ಪಾದಯಾತ್ರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:28 pm, Sat, 1 November 25